ಕಾವೇರಿ ಸಭೆ : ಕಾನೂನು ಸಲಹಾ ಸಮಿತಿ ರಚಿಸಲು ಸಿಎಂಗೆ ತಜ್ಞರ ಸಲಹೆ

ಬೆಂಗಳೂರು : ಕಾವೇರಿ ಸೇರಿದಂತೆ ರಾಜ್ಯದ ಎಲ್ಲಾ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹಾ ಸಮಿತಿ ರಚಿಸುವಂತೆ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ ಪಾಲ್ಗೊಂಡಿದ್ದ ಶುಕ್ರವಾರ … Continued

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ರಾಜ್ಯದ ಕೆಲವು ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ಶಿವಾಜಿರಾವ್ ಜಾಧವ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈತ ಹಿಂದೂ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ … Continued

ಬಂದ್‌ ಮಧ್ಯೆ ಕರ್ನಾಟಕಕ್ಕೆ ಮತ್ತೆ ಶಾಕ್ : ಅಕ್ಟೋಬರ್‌ 15ರ ವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಎಂಎ ಆದೇಶ

ನವದೆಹಲಿ: ಕಾವೇರಿ ನದಿ ನೀರಿಗಾಗಿ ಇಂದು ಶುಕ್ರವಾರ ಕರ್ನಾಟಕ ಬಂದ್ ನಡೆಯುತ್ತಿರುವ ಮಧ್ಯೆಯೇ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಮೂರು ದಿನಗಳ ಹಿಂದೆ ನಡೆದ ಸಭೆಯ ನಂತರ ಕಾವೇರಿ ನೀರು … Continued

ಕರ್ನಾಟಕ ಬಂದ್ : ಬೆಂಗಳೂರಲ್ಲಿ ವ್ಯಾಪಾರ ವಹಿವಾಟು ಸ್ತಬ್ದ.. 200 ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ…44 ವಿಮಾನಗಳು ರದ್ದು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರದಂತೆ ರಾಜ್ಯಾದ್ಯಂತ 200 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಲ್ಲಿ ವ್ಯಾಪಾರ ವಹಿವಾಟು ಸ್ತಬ್ದಗೊಂಡಿದೆ. ಬಸ್‌ ನಿಲ್ದಾಣಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕರ್ನಾಟಕ-ತಮಿಳುನಾಡು ಗಡಿ ಭಾಗವಾದ ಅತ್ತಿಬೆಲೆಯಲ್ಲಿ ಗಡಿ ಬಂದ್ ಮಾಡಲು ಯತ್ನಿಸಿದಾಗ ಪ್ರತಿಭಟನಾಕಾರರನ್ನು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ : ಆರೆಂಜ್ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ, ಧಾರವಾಡ, ವಿಜಯಪುರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ … Continued

ಇಂದು ಕರ್ನಾಟಕ ಬಂದ್ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಮತ್ತೊಂದು ಬಂದ್‌ಗೆ ಬೆಂಗಳೂರು ಸೇರಿದಂತೆ ಕರ್ನಾಟಕ ಸಜ್ಜಾಗಿದೆ. ಈ ಬಂದ್‌ ವಿಶೇಷವಾಗಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಾರ-ವಹಿವಾಟು ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಸಾರ್ವಜನಿಕ … Continued

ಅನ್ನಭಾಗ್ಯ ಯೋಜನೆ ; ಮುಂದಿನ ತಿಂಗಳಿಂದ ಹಣದ ಬದಲು ಅಕ್ಕಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮುಂದಿನ ತಿಂಗಳಿಂದ ಹಣದ ಬದಲು 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗಾಗಲೇ 10 ಕೆ.ಜಿ ಅಕ್ಕಿ ವಿತರಣೆ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಬರ ಪೀಡಿತ ತಾಲೂಕುಗಳಲ್ಲಿ … Continued

ಸೆಪ್ಟೆಂಬರ್‌ 29, 30ರಂದು ಬೆಳಗಾವಿಯಲ್ಲಿ ಮೋಡ ಬಿತ್ತನೆ

ಬೆಳಗಾವಿ: ಬೆಳಗಾಂ ಶುಗರ್ಸ್ ವತಿಯಿಂದ ಸೆಪ್ಟೆಂಬರ್‌ 29 ಹಾಗೂ 30 ರಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಕಾರ್ಯ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ( ಡಿಜಿಸಿಎ) ಕಚೇರಿಯು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಬೆಳಗಾಂ ಶುಗರ್ಸ್ ಮೋಡ ಬಿತ್ತನೆಗೆ … Continued

ಕರ್ನಾಟಕ ಬಂದ್ : ನಾಳೆ ಬೆಂಗಳೂರಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು : ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿವಿಧ ಸಂಘಟನೆಗಳು 29-09-2023 ರಂದು ಕರ್ನಾಟಕ ಬಂದ್ ಘೋಷಿಸಿವೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ತಮಿಳುನಾಡಿಗೆ … Continued

ನಾಳೆ ಕರ್ನಾಟಕ ಬಂದ್ : ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ; ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಶುಕ್ರವಾರ (ಸೆಪ್ಟೆಂಬರ್‌ 29) ನಡೆಯುವ ಅಖಂಡ ಕರ್ನಾಟಕ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್‌ ಇದ್ದರೂ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳು ಎಂದಿನಂತೆ ಸಂಚರಿಸಲಿವೆ. ಸಾರಿಗೆ ನಿಗಮಗಳು ತಮ್ಮ ನೌಕರರಿಗೆ ಮೌಖಿಕ ಸೂಚನೆ ನೀಡಿದ್ದು, ನೌಕರರು ಶುಕ್ರವಾರ (ಸೆಪ್ಟೆಂಬರ್‌ 29) ಎಂದಿನಂತೆ … Continued