ಸಿಎಂ ಮಗನ ಹೆಸರು ಬಳಸಿಕೊಂಡು ಜನರನ್ನು ಮೋಸ ಮಾಡಿದ ಆರೋಪದ ಮೇಲೆ ಸಚಿವ ಶ್ರೀರಾಮುಲು ಪಿಎ ಎಂದು ಹೇಳಿಕೊಳ್ಳುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಸರ್ಕಾರದಲ್ಲಿ ತಮ್ಮ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿ ಅನೇಕ ಜನರನ್ನು ಮೋಸ ಮಾಡಿದ ಆರೋಪದ ಮೇಲೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ವೈಯಕ್ತಿಕ ಸಹಾಯಕ (ಪಿಎ) ಎಂದು ಹೇಳಿಕೊಂಡ ವ್ಯಕ್ತಿಯನ್ನು ಅಪರಾಧ ಶಾಖೆಯ (ಸಿಸಿಬಿ) ಸೈಬರ್ ಅಪರಾಧ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಆರೋಪಿಯನ್ನು ಬಳ್ಳಾರಿ ನಿವಾಸಿ ರಾಜಣ್ಣ ಅಲಿಯಾಸ್ ರಾಜು (40) ಎಂದು … Continued

ಕರ್ನಾಟಕದಲ್ಲಿ ಸಿ4ವಿ ಕಂಪನಿಯಿಂದ 4 ಸಾವಿರ ಕೋಟಿ ರೂ.ಗಳ ಹೂಡಿಕೆಗೆ ಒಪ್ಪಂದ

ಬೆಂಗಳೂರು: ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೆರಿಕದ ಸಿ4ವಿ ರಾಜ್ಯದಲ್ಲಿ 4 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿರುವುದು, ರಾಜ್ಯದ ಎಲೆಕ್ಟ್ರಿಕ್‌ ಸೆಲ್‌ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವವಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್‌ -ಅಯಾನ್‌ ಸೆಲ್‌ … Continued

ಆಗಸ್ಟ್‌ 22ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶಕುಮಾರ್

ಬೆಂಗಳೂರು: 1ರಿಂದ 8ನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 1ರಿಂದ 5ನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು … Continued

ಧಾರವಾಡ ಜಿಲ್ಲಾ ಪಂಚಾಯತದ ಕ್ಷೇತ್ರಗಳ ಮೀಸಲು ಪ್ರಕಟ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತದ ಸದಸ್ಯರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಕೊರೊನಾ ಕಾರಣದಿಂದ ಚುನಾವಣೆ ನಡೆದಿರಲಿಲ್ಲ. ಆದರೆ ಈಗ ರಾಜ್ಯ ಚುನಾವಣಾ ಆಯೋಗ ಧಾರವಾಡ ಜಿಲ್ಲಾ ಪಂಚಾಯತದ ಕ್ಷೇತ್ರಗಳಿಗೆ ಮೀಸಲಾತಿಯನ್ನು ಗುರುವಾರ ಪ್ರಕಟ ಮಾಡಿದೆ. ಗರಗ ಜಿಲ್ಲಾ ಪಂಚಾತದ ಕ್ಷೇತ್ರಕ್ಕೆ ಸಾಮಾನ್ಯ ಸ್ಥಾನ, ನರೇಂದ್ರಕ್ಕೆ ಹಿಂದುಳಿದ ಅ ವರ್ಗ (ಮಹಿಳೆ), ಉಪ್ಪಿನ ಬೆಟಗೇರಿಗೆ ಸಾಮಾನ್ಯ (ಮಹಿಳೆ), ಅಮ್ಮಿನಭಾವಿಗೆ … Continued

ದೈನಂದಿನ ಪ್ರಕರಣ ಇಳಿಮುಖ: ಸಕ್ರಿಯ ಪ್ರಕರಣದಲ್ಲಿ 3ನೇ ಸ್ಥಾನಕ್ಕೆ ಇಳಿದ ಕರ್ನಾಟಕ

ಬೆಂಗಳೂರು: ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 3 ನೇ ಸ್ಥಾನಕ್ಕೆ ಕುಸಿದಿದೆ. ಸೋಂಕಿನ ಪ್ರಮಾಣಕ್ಕಿಂತ ಮೂರ್ನಾಲ್ಕುಪಟ್ಟು ಜನ ಚೇತರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಕುಸಿತ ಕಂಡಿದೆ. ಸದ್ಯ ರಾಜ್ಯದಲ್ಲಿ 65,312 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಗುರುವಾರ ಹೊಸದಾಗಿ 3,203 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 94 ಮಂದಿ ಮೃತಪಟ್ಟಿದ್ದಾರೆ. ಇದೇ … Continued

ಜಿಎಸ್ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ: ಬೊಮ್ಮಾಯಿ

ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್‌ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ ಜಿಎಸ್‌ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ವರ್ಚುವಲ್ … Continued

ಧನ ಸಹಾಯದಲ್ಲಿ ಭಾರೀ ಹೆಚ್ಚಳ: ಕಟ್ಟಡ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸಚಿವ ಶಿವರಾಮ ಹೆಬ್ಬಾರ..!

ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಗುರುವಾರ ಕಾರ್ಮಿಕ ಕಲ್ಯಾಣ ಭವನದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಮಂಡಳಿಯ ನಿರ್ದೇಶಕರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಸಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯ ವತಿಯಿಂದ ನೀಡಲಾಗುತ್ತಿರುವ ಧನ ಸಹಾಯದಲ್ಲಿ ಭಾರಿ ಏರಿಕೆ ಮಾಡುವುದರ … Continued

ಪತ್ರೊಡೆಗೆ ಬರಲಿದೆ ಡಿಮ್ಯಾಂಡು.. ಆಯುಷ್ ಸಚಿವಾಲಯದ ಸಾಂಪ್ರದಾಯಿಕ ಆಹಾರ ಖಾದ್ಯಗಳ ಪಟ್ಟಿಗೆ ಪತ್ರೊಡೆ ಸೇರ್ಪಡೆ..!

ಭಾರತದ ಸಾಂಪ್ರದಾಯಿಕ ಪತ್ರೊಡೆಯನ್ನು ಆಯುಷ್ ಸಚಿವಾಲಯವು ಆಯುಷ್ ಸಚಿವಾಲಯ ಪ್ರಕಟಿಸಿರುವ ಆಯುಷ್ ವೈದ್ಯ ಪದ್ಧತಿಯ ಆರೋಗ್ಯಪೂರ್ಣ ಆಹಾರದ ಪಟ್ಟಿಯಲ್ಲಿ ಪತ್ರೊಡೆ ಸ್ಥಾನ ಪಡೆದಿದೆ. . ಆಯುಷ್ ಸಚಿವಾಲಯವು ಆಯುಷ್ ಸಿಸ್ಟಮ್ ಆಫ್ ಮೆಡಿಸಿನ್‌ನಿಂದ “ಸಾಂಪ್ರದಾಯಿಕ ಆಹಾ (Traditional Food Recipes)ದ ಕಿರುಪುಸ್ತಕವನ್ನು ಬಿಡುಗಡೆ ಮಾಡಿದ್ದು, ಸಂಪ್ರದಾಯ ಆಧಾರಿತ ಆಯುಷ್ ಆಹಾರಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲು … Continued

ಫೋನ್‌ನಲ್ಲಿ ಆನ್‌ಲೈನ್ ತರಗತಿಗೆ ಹಾಜರಾಗುತ್ತ ಹೂವು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್‌ ನೀಡಿದ ಬಿಬಿಎಂಪಿ ಆಯುಕ್ತರು..!

ಬೆಂಗಳೂರು: ಅಧ್ಯಯನಕ್ಕಾಗಿ ಹಣ ಸಂಪಾದಿಸಲು ಹೂವುಗಳನ್ನು ಮಾರಾಟ ಮಾಡುತ್ತಿದ್ದ ಹದಿಹರೆಯದವರ ಹುಡುಗಿಯಿಂದ ಪ್ರೇರಿತರಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಆ ಹುಡುಗಿಗೆ ಲ್ಯಾಪ್‌ಟಾಪ್ ನೀಡಿ ಕಲಿಯಲು ಪ್ರೋತ್ಸಾಹಿಸಿದ್ದಾರೆ. 15 ವರ್ಷದ ಬಾಲಕಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬನಶಂಕರಿ ಬೆಂಗಳೂರಿನ ಆದಿಶಕ್ತಿ ದೇವಸ್ಥಾನದಲ್ಲಿ ಹೂವುಗಳನ್ನು ಮಾರಾಟ ಮಾಡುತ್ತಿದ್ದಾಳೆ. ಜೂನ್ 30 ರಂದು ಬಿಬಿಎಂಪಿಯ ಪ್ರಧಾನ … Continued

ಮುಂಬರುವ ವಿಧಾನ ಮಂಡಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಿ: ಸಿಎಂ ಬಿಎಸ್‌ವೈಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ; ಮುಂಬರುವ ವಿಧಾನ ಪಂಡಳದ ಅಧೀವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪ್ರಾದೇಶಿಕ ಅಸಮತೋಲನ ನಿವಾರಣೆ ದೃಷ್ಟಿಯಿಂದ ಪ್ರತಿವರ್ಷದ ಒಂದು ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವುದು ಸೂಕ್ತ ಎನ್ನುವ ಈ … Continued