ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ 25 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ, 10 ಸಾವಿರ ಉದ್ಯೋಗ ಸೃಷ್ಟಿ: ಶೆಟ್ಟರ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಏಕಸ್, ಯಫ್ಲೆಕ್ಸ್, ರಾಜೇಶ್ ಎಕ್ಸೋ ಸೇರಿದಂತೆ ಪ್ರತಿಷ್ಠಿತ ಕಂಪನಿಗಳು ಸುಮಾರು 25 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ. ಇದರಿಂದ ಸ್ಥಳೀಯವಾಗಿ 10 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗ ಅರಸಿ ಬೆಂಗಳೂರು, ಪೂಣೆ, ಮುಂಬೈಗಳಿಗೆ ವಲಸೆ ಹೋಗುವುದು ತಪ್ಪಲಿದೆ. ಸ್ಥಳೀಯವಾಗಿ ವಿಪುಲ ಉದ್ಯೋಗ ಅವಕಾಶಗಳು … Continued

ಬೆಂಗಳೂರು: ಜು.1ರಿಂದ ನಮ್ಮ ಮೆಟ್ರೋ ರೈಲು ಸಮಯ ವಿಸ್ತರಣೆ

ಬೆಂಗಳೂರು: ಬೆಂಗಳೂರು ಮೆಟ್ರೋ ನಿಗಮ ಜುಲೈ 1ರಿಂದ ರೈಲುಗಳ ಕಾರ್ಯಾಚರಣೆ ಸಮಯವನ್ನ ವಿಸ್ತರಿಸಲಿದೆ. ಜುಲೈ 1ರಿಂದ ನಮ್ಮ ಮೆಟ್ರೋ ರೈಲು ಸೇವೆ ಬೆಳಿಗ್ಗೆ 7ರಿಂದ ಸಂಜೆ 6ರ ವರೆಗೆ ಸಂಚರಿಸಲಿದೆ. ಬಿಎಂಆರ್ ಸಿಎಲ್ ಪ್ರಕಾರ, ಸೋಮವಾರದಿಂದ ಶುಕ್ರವಾರದ ವರೆಗೆ ಗರಿಷ್ಠ ವಲ್ಲದ ಗಂಟೆಗಳಲ್ಲಿ 5 ನಿಮಿಷಗಳು ಮತ್ತು ಗರಿಷ್ಠ ವಲ್ಲದ ಅವಧಿಯಲ್ಲಿ 15 ನಿಮಿಷಗಳ ಆವರ್ತನದೊಂದಿಗೆ … Continued

ರಮೇಶ್ ಜಾರಕಿಹೊಳಿ ಅವರ ಜತೆ ನಾವಿದ್ದೇವೆ : ಸಚಿವ ಬೈರತಿ

ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ಅವರ ಜತೆ ನಾವಿದ್ದೇವೆ ಎಂದು ಸಚಿವ ಬೈರತಿ ಬಸವರಾಜ ಹೇಳಿದರು. ಬುಧವಾರ ಹುಬ್ಬಳ್ಳಿ ಧಾರವಾಡ ನಗರ ಪ್ರದಕ್ಷಿಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಯಾವ ಉದ್ದೇಶದಿಂದ ರಾಜೀನಾಮೆ ವಿಚಾರ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಜತೆ ನಾವಿದ್ದೇವೆ. ಸಣ್ಣಪುಟ್ಟ ತೊಂದರೆಗಳಾಗಿವೆ. ಅವು ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಅವರು. ಎಲ್ಲ ಸಮಸ್ಯೆಗಳೂ ಸದ್ಯದಲ್ಲೇ … Continued

ಹಾಲಿನ ಪುಡಿ, ತುಪ್ಪ, ಬೆಣ್ಣೆ ದರ ಕಡಿತ ಮಾಡಿದ ಕೆಎಂಎಫ್‌

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್‌) ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಕೋವಿಡ್ ಕಾಲದಲ್ಲಿ ತುಪ್ಪ, ಬೆಣ್ಣೆ ಮತ್ತು ಹಾಲಿನ ಪುಡಿಗಳ ದರವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಮಂಗಳವಾರ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ದರವನ್ನು ಕಡಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 1 … Continued

ಕೃಷ್ಣಾ ನದಿಯಲ್ಲಿ ಮುಳುಗಿದ್ದ ನಾಲ್ವರು ಸಹೋದರರ ಮೃತದೇಹ ಪತ್ತೆ

ಚಿಕ್ಕೋಡಿ: ಹಾಸಿಗೆ ತೊಳೆಯಲು ಹೋಗಿ ಕೃಷ್ಣಾ ನದಿಯಲ್ಲಿ ನೀರು ಪಾಲಾಗಿದ್ದ ನಾಲ್ವರು ಸಹೋದರರ ಶವಗಳನ್ನು ಎನ್‍ಡಿಆರ್‍ಎಫ್ ತಂಡ ಹಾಗೂ ಸ್ಥಳೀಯರು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳು ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿದ್ದ ನಾಲ್ವರು ಸಹೋದರರು ನೀರು ಪಾಲಾಗಿದ್ದರು. ಈಗ ನಾಲ್ವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ನಿನ್ನೆ) … Continued

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್‌ ಅಧಿಕಾರಿಗಳಾದ ಸಿ. ಶಿಖಾ, ಅಜಯ್ ನಾಗಭೂಷಣ್, ಸಲ್ಮಾ ಫಾಹಿಮಾ, ಕಣಗವಲ್ಲಿ, ರಘುನಂದನ್ ಮೂರ್ತಿ, ಎಂ.ಎಸ್. ಅರ್ಚನಾ, ರಮ್ಯಾ ಏಳು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಅವರು … Continued

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಮಹಾರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು,ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಮಂಗಳವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಹಾರಾಷ್ಟ್ರದಿಂದ ಆಗಮಿಸುವ ವ್ಯಕ್ತಿಗಳ ಕುರಿತು ವಿಶೇಷ ಕಣ್ಗಾವಲು ಕ್ರಮಗಳನ್ನು ಅನುಸರಿಸುವ ಸೂಚನೆಗಳನ್ನು ನೀಡಲಾಗಿದೆ. ಮಹಾರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ … Continued

ಜೂ.30ರಿಂದ ಬಂಡೀಪುರ ಸಫಾರಿ ಪುನರಾರಂಭ

ಗುಂಡ್ಲುಪೇಟೆ (ಚಾಮರಾಜನಗರ): ಬಂಡೀಪುರ ಹುಲಿಯೋಜನೆ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸೇರಿ ಸಫಾರಿ ಜೂ.30ರಿಂದ ಪುನರಾರಂಭಗೊಳ್ಳಲಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್‌-19 ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಪ್ರವರ್ಗ-1 ರ ಅಡಿಯಲ್ಲಿ ಘೋಷ‌ಣೆ ಮಾಡಿ ಲಾಕ್‌ಡೌನ್‌ ತೆರವುಗೊಳಿಸುವ ಸರ್ಕಾರದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ತಕ್ಷಣಕ್ಕೆ ಸಫಾರಿಗೆ ಹೋಗುವ ವ್ಯವಸ್ಥೆ ಆಗಲಿದೆ. ಜು.15 ರಿಂದ ಎಲ್ಲಾ ರೀತಿಯ … Continued

ಹಂಸಭಾವಿ: ತೆಂಗಿನ ಮರದಿಂದ ಕಾಯಿ ಬಿದ್ದು 11 ತಿಂಗಳ ಮಗು ಸಾವು

ಹಾವೇರಿ: ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಬಿದ್ದು ಪುಟ್ಟ ಕಂದಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಮೃತ ಹಸಗೂಸನ್ನ 11 ತಿಂಗಳಿನ ತನ್ವೀತ್ ಮಲ್ಲಿಕಾರ್ಜುನ ವಾಲ್ಮೀಕಿ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಯ ಮಗು. ಸೋಮವಾರ ಬೆಳಗ್ಗೆ ಮನೆಯ ಮುಂದಿನ ತೆಂಗಿನ ಮರದಿಂದ … Continued

ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 3,222 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,000ಕ್ಕಿಂತ ಇಳಿಮುಖವಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3222 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 93 ಮಂದಿ ಮೃತಪಟ್ಟಿದ್ದು, 14724 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.54ರಷ್ಟಿದ್ದು, ಸಾವಿನ ಪ್ರಮಾಣ ಶೇ.2.88ರಷ್ಟಿದೆ. ಮಂಗಳವಾರದ … Continued