ಶೇ.5ರ ರಿಯಾಯ್ತಿಯೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ

ಹುಬ್ಬಳ್ಳಿ:ಸರ್ಕಾರದ ಸುತ್ತೋಲೆ ಅನ್ವಯ ಪ್ರಸಕ್ತ ಸಾಲಿನಲ್ಲಿ ಏಪ್ರೀಲ್ 1 ರಿಂದ ಜೂನ್ 30 ರವರೆಗೆ ಶೇ.5 ರಷ್ಟು ರಿಯಾಯ್ತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸಲು ಅವಕಾಶ ನೀಡಿದ್ದ ಕಾಲಮಿತಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಕೋವಿಡ್ -19 ಹರಡುತ್ತಿರುವುದರಿಂದ, ಸಾರ್ವಜನಿಕರ ಹಿತದೃಷ್ಟಿಯಿಂದ ತೆರಿಗೆ ಪಾವತಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ಆಗಸ್ಟ್ … Continued

ಕರ್ನಾಟಕದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆಗೆ ಬಂದ ಕೊರೊನಾ ಸಕ್ರಿಯ ಪ್ರಕರಣಗಳು..

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆಯತ್ತ ಸಾಗುತ್ತಿದೆ.ಕಳೆದ 24 ಗಂಟೆಯಲ್ಲಿ (ಸೋಮವಾರ) ಹೊಸದಾಗಿ ರಾಜ್ಯಾದ್ಯಂತ ಹೊಸದಾಗಿ 2,576 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 93 ಜನರು ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೋಂಕಿತರ ಸಂಖ್ಯೆ 28,37,206ಕ್ಕೆ ಏರಿಕೆಯಾಗಿದೆ. ಹಾಗೂ … Continued

ಕಾಸರಗೋಡು ಜಿಲ್ಲೆ ಗ್ರಾಮಗಳ ಮರುನಾಮಕರಣ: ಕೇರಳ ಸಿಎಂ ಜೊತೆ ಮಾತನಾಡಲಿರುವ ಸಿಎಂ ಬಿಎಸ್‌ವೈ

ಬೆಂಗಳೂರು: ಕನ್ನಡ ಮಾತನಾಡುವ ಪ್ರದೇಶಗಳಾದ ಕಾಸರಗೋಡು ಮತ್ತು ಮಂಜೇಶ್ವರದಲ್ಲಿರುವ ಗ್ರಾಮಗಳ ಮರುನಾಮಕರಣವನ್ನು ತಡೆಯಲು ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯುರಪ್ಪ ಸೋಮವಾರ ತಮ್ಮ ಕೇರಳದ ಮುಖ್ಯಮಂತ್ರಿ ಪಿಭರಾಯಿ ವಿಜಯನ್ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಕೆಬಿಎಡಿಎ) ಅಧ್ಯಕ್ಷ ಸಿ. ಸೋಮಶೇಖರ ಅವರು ಯಡಿಯೂರಪ್ಪ ಅವರನ್ನು … Continued

ಘೋರ ದುರಂತ.. ಒಂದೇ ಕುಟುಂಬದ ಆರು ಜನ ಕೃಷಿಹೊಂಡಕ್ಕೆ ಹಾರಿ ಆತ್ಮಹತ್ಯೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಘೋರ ದುರಂತ ಸಂಭವಿಸಿದ್ದು, ಕುಟುಂಬದ 6 ಮಂದಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಭಾದೆ ತಾಳದೆ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ಶಂಕಿಸಲಾಗಿದ್ದು, ದಂಪತಿ ತಮ್ಮ 4 ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪತಿ ಭೀಮರಾಯ ಸುರಪುರ (45), … Continued

ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, “ಜುಲೈ ಎರಡನೇ ವಾರದಲ್ಲಿ ಪ್ರಕಟವಾಗುವ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು” ಎಂದು … Continued

ಜೂನ್‌ 30ರಿಂದ ಶಿಕ್ಷಕರ ವರ್ಗಾವಣೆ ಆರಂಭ.. ಮನೆಯಿಂದಲೇ ಕೌನ್ಸೆಲಿಂಗ್‌

ಬೆಂಗಳೂರು: ಅನೇಕ ವರ್ಷಗಳಿಂದ ಕಾಯುತ್ತಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಜೂನ್ 30ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ವರ್ಗಾವಣೆ ಆರಂಭವಾಗಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 30, ಬುಧವಾರದಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಈಗಾಗಲೇ 75,000ಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಗಾಗಿ ಈಗಾಗಲೆ ಅರ್ಜಿ ಸಲ್ಲಿಸಿದ್ದು, … Continued

ಮಹತ್ವದ ಸುದ್ದಿ.. ಕರ್ನಾಟಕದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸರ್ಕಾರ..!

ಬೆಂಗಳೂರು: ಕೊರೊನಾ ಎರಡನೇ ಅಲೆ ನಡುವೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸರ್ಕಾರ ದಿನಾಂಕ ನಿಗದಿ ಮಾಡಿದ್ದು, ಜುಲೈ 19 ಹಾಗೂ ಜುಲೈ 22ರಂದು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ ನಡೆಯಲಿದ್ದು, ಜುಲೈ … Continued

ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌-19  ಲಸಿಕೆ ಅಭಿಯಾನ ಆರಂಭ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌-19  ಲಸಿಕಾ ಅಭಿಯಾನ ಸೋಮವಾರದಿಂದ (ಜೂನ್‌ 28ರಿಂದ) ಆರಂಭವಾಗಿದೆ. ಇಲ್ಲಿನ ಡಾ. ಎ. ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಚೈತ್ರ ಪ್ರಭಾ ವಿದ್ಯಾರ್ಥಿಗಳಿಗೆ … Continued

ಸಿಗಂದೂರು ಲಾಂಚ್‌ನಿಂದ ನದಿಗೆ ಹಾರಿದ ಮಹಿಳೆಯ ರಕ್ಷಣೆ

ಶಿವಮೊಗ್ಗ: ಸಿಗಂದೂರು ಲಾಂಚ್‌ನಿಂದ ಮಹಿಳೆಯೊಬ್ಬರು ಶರಾವತಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಾಂಚ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯನ್ನು ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕಾ (46) ಎಂದು ಗುರುತಿಸಲಾಗಿದೆ. ಮಹಿಳೆ ಭಾನುವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ಪಡೆದು ಮರಳುತ್ತಿದ್ದರು. … Continued

ಡೆಲ್ಟಾ ಪ್ಲಸ್‌ ವೈರಸ್ ಪತ್ತೆಗೆ 600 ಮಾದರಿಗಳ ಜೀನೋಮ್ ಸೀಕ್ವೆನ್ಸ್: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ 50 … Continued