ಜೈನ ಸಮಾಜದಿಂದ ಪ್ರತಿಭಟನೆ:ದೇಶಾದ್ಯಂತ ಅನೂಪ್ ಮಂಡಲ್ ಸಂಘಟನೆ ನಿಷೇಧಕ್ಕೆ ಆಗ್ರಹ

ಧಾರವಾಡ: ಅನೂಪ್ ಮಂಡಲ್ ಸಂಘಟನೆ ಸಂಪೂರ್ಣ ಚಟುವಟಿಕೆಗಳನ್ನು ಭಾರತದಾದ್ಯಂತ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾ ಜೈನ್ ಸಮಾಜದವರು ಬುಧವಾರ ಜಿಲ್ಲಾದಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅನೂಪ್ ಮಂಡಲ್ ಸಂಘಟನೆ ಅರಾಜಕತಾವಾದಿ, ಸಾಮಾಜಿಕ ವಿರೋಧಿ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಜನರ ಸಂಘಟನೆಯಾಗಿದೆ. ರಾಜಸ್ಥಾನ, ಗುಜರಾತಿನಿಂದ ಮತ್ತು ಪ್ರಸ್ತುತ ಮಹಾರಾಷ್ಟ್ರ … Continued

ಮುಂಗಾರು ದುರ್ಬಲ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಮಂಗಳವಾರದಿಂದ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಮಲೆನಾಡು, ದಕ್ಷಿಣ ಕನ್ನಡ ಹೊರತುಪಡಿಸಿದರೆ ಉಳಿದೆಲ್ಲ ಕಡೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ 24ಗಂಟೆಯಲ್ಲಿ ಕೂಡ ರಾಜ್ಯದಲ್ಲಿ ಕರಾವಳಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.24ರ ವರೆಗೂ ಮುಂಗಾರು … Continued

ಉತ್ತರ ಕನ್ನಡ: 4 ತಿಂಗಳಲ್ಲಿ 5338 ಮಕ್ಕಳಿಗೆ ಕೋವಿಡ್ ಸೋಂಕು..1ನೇ ಅಲೆಗಿಂತ 2ನೇ ಅಲೆಯಲ್ಲಿ ಬಹುತೇಕ 3 ಪಟ್ಟು ಹೆಚ್ಚಳ..!

ಕಾರವಾರ: ಮೂರನೇ ಅಲೆ ಮಕ್ಕಳನ್ನು ಹೆಚ್ಚು ಬಾಧಿಸುವ ಸಾಧ್ಯತೆ ಇದೆ ಎಂದು ಕೆಲತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಎರಡನೇ ಅಲೆಯಲ್ಲಿಯೂ ಕೋವಿಡ್‌ ಸೋಂಕು ಬಾಧಿಸಿದ್ದು ವರದಿಯಾಗುತ್ತಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 5,338 ಮಕ್ಕಳು ಕೋವಿಡ್ ಸೋಂಕಿತಗೆ ಒಳಗಾಗಿರುವುದು ಇದನ್ನು ಪುಷ್ಟೀಕರಿಸುವಂತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಚ್‌ 1ರಿಂದ ಜೂನ್‌ 21ರವರೆಗಿನ … Continued

ಉನ್ನತ ಶಿಕ್ಷಣದ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳ ವಿತರಣೆಗೆ ಇಂದು ಸಿಎಂ ಚಾಲನೆ

ಬೆಂಗಳೂರು: ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ಕಲಿಕಾ ನಿರ್ವಹಣಾ ವ್ಯವಸ್ಥೆ(Learning Management System) ಬೋಧನೆ-ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಜೂನ್‌ 23ರಂದು ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ. ಕೋವಿಡ್‌ … Continued

ಕೋವಿಡ್-19 ಡೆಲ್ಟಾ ಪ್ಲಸ್ ರೂಪಾಂತರಿ ಕರ್ನಾಟಕಕ್ಕೂ ಬಂತು: ಮೈಸೂರಿನಲ್ಲಿ ಮೊದಲ ಪ್ರಕರಣ ಪತ್ತೆ…!

ಮೈಸೂರು: ಸದ್ಯ ದೇಶದಲ್ಲಿ ಮೂರನೇ ಅಲೆಯ ಆತಂಕ ಸೃಷ್ಟಿಸಿರುವ ಡೆಲ್ಟಾ ಪ್ಲಸ್ ರೂಪಾಂತರಿ ಕರ್ನಾಟಕಕ್ಕೂ ಕಾಲಿಟ್ಟಿದ್ದು ರೋಗಲಕ್ಷಣವಿಲ್ಲದ ಕೊರೊನಾ ರೋಗಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ. ಕೋವಿಡ್ -19 ಜೀನೋಮಿಕ್ ಕಣ್ಗಾವಲು ಸಮಿತಿಯ ಅಧ್ಯಕ್ಷ ಡಾ.ವಿ.ರವಿ ಅವರು ಮೈಸೂರಿನಲ್ಲಿ ಮೊದಲ ಡೆಲ್ಟಾ ಪ್ಲಸ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ. ಕನ್ನಡಪ್ರಭ.ಕಾಮ್‌ ವರದಿ ಮಾಡಿದೆ. ಈ ರೂಪಾಂತರವು ಹೆಚ್ಚು ಹರಡುವುದಿಲ್ಲ. … Continued

ಸಿಡಿ ಪ್ರಕರಣ:ಯುವತಿ ತಂದೆ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಧಿತ ಯುವತಿಯ ತಂದೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ನಿಯಮಬಾಹಿರವಾಗಿ ತಮ್ಮ ಪುತ್ರಿಯ ಹೇಳಿಕೆ ದಾಖಲಿಸಿದ್ದಾರೆಂದು ಆಕ್ಷೇಪಿಸಿ ಯುವತಿಯ ತಂದೆ ರಿಟ್‌ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ … Continued

ಕೋವಿಡ್ ಪ್ಯಾಕೇಜ್: 20,713 ಕಲಾವಿದರಿಗೆ ತಲಾ 3 ಸಾವಿರ ರೂ.ಗಳ ನೆರವಿಗೆ ಸಿಎಂ ಬಿಎಸ್‌ವೈ ಚಾಲನೆ

ಬೆಂಗಳೂರು: ಕೊರೊನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳವಾರ ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ … Continued

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ…ಪರೀಕ್ಷಾ ಕೇಂದ್ರ ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ ಮಂಡಳಿ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳ ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಸರ್ಕಾರಿ, ಅನುದಾನಿತ ಶಾಲೆ, ಖಾಸಗಿ ಶಾಲೆ ಮುಖ್ಯಸ್ಥರು ತಮ್ಮ ಶಾಲೆಯ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಸಂಪರ್ಕಿಸಬೇಕು. ಈ ಪೈಕಿ ವಲಸೆ ಕಾರ್ಮಿಕರ ಮಕ್ಕಳನ್ನೂ ಸಂಪರ್ಕಿಸಬೇಕು ಎಂದು ಸೂಚಿಸಲಾಗಿದೆ. (ಸುತ್ತೋಲೆಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.) SSLC_Main_Exam_2021_Mirgation_Circular ವಲಸೆ ಶಾಲೆಗಳು, ಹಾಸ್ಟೆಲ್ ವಿದ್ಯಾರ್ಥಿಗಳನ್ನು … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಇಳಿಕೆ ಕಂಡಿದ್ದು, ಕಳೆದ 24 ತಾಸಿನಲ್ಲಿ 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ 34,164 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 8,111 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,62,250 ಮಂದಿ … Continued

ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 91.91 … Continued