ಕರ್ನಾಟಕದಲ್ಲಿ ತುಸು ಹೆಚ್ಚಳವಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ (ಬುಧವಾರ) 7345 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 148 ಜನರು ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಗುಣಮುಖರಾದವರ ಸಂಖ್ಯೆಯೂ ಹೆಚ್ಚು ಇದೆ. 17193 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ … Continued

ವಿದ್ಯಾರ್ಥಿಗಳೇ ಗಮನಸಿ.. ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟ ಮಾಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ವೆಬ್​ಸೈಟ್ www.sslc.Karnataka.gov.in ನಲ್ಲಿ ಪ್ರಕಟವಾಗಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ … Continued

ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಹಿಸುದ್ದಿ : ಕೋವಿಡ್ ಸೋಂಕಿತ-ಸಂಪರ್ಕಿತರಿಗೆ 10 ದಿನ ವೇತನ ಸಹಿತ ರಜೆ

ಬೆಂಗಳೂರು : ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ನೀಡಿದೆ. ಗುತ್ತಿಗೆ ಹಾಗೂ ಹೊರ ಗುತ್ತಿಗೆ ಕೋವಿಡ್ ಸೋಂಕಿತರಿಗೆ ಹಾಗೂ ಸೋಂಕಿತರ ಸಂಪರ್ಕಿತರಿಗೆ ಚಿಕಿತ್ಸೆ ಹಾಗೂ ಐಸೊಲೇಶನ್‌ಗೆ 10 ದಿನ ವೇತನ ಸಹಿತ ರಜೆ ನೀಡಿ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಆರುಂಧತಿ ಆದೇಶ … Continued

ರಾಜ್ಯ ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ಶೀಘ್ರವೇ ಇತ್ಯರ್ಥ : ಈಶ್ವರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಬಂದು ಹೋದ ಮೇಲೆ ಎಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೇಳುವವರು ಕೇಳುವವರು ಇದ್ದಾರೆ. ಹಾಗಾಗಿಯೇ ಅರುಣ್‌ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು. … Continued

ಬಿಜೆಪಿ ಸರ್ಕಾರ ಫೀಲ್ಡಿನಲ್ಲಿದೆ, ಕಾಂಗ್ರೆಸ್‌ ಆರೋಪ ಮಾಡ್ತಿದೆ, ಜೆಡಿಎಸ್‌ ಕ್ವಾರಂಟೈನ್‌ನಲ್ಲಿದೆ

ಬೆಂಗಳೂರು: ನಾನು ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಈ ಸಂಧರ್ಭದಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರದ ಬಗ್ಗೆ ಚರ್ಚಿಸುತ್ತೇನೆ. ಕೊವಿಡ್ ವಿಚಾರದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಚರ್ಚಿಸಲಾಗುತ್ತದೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ … Continued

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಖ್ಯವಾಗಿ ರಾಜ್ಯದ ಕರಾವಳಿ ಪ್ರದೇಶ ಮತ್ತು ಮಲೆನಾಡಿನಲ್ಲಿ ಎರಡು-ಮೂರು ದಿನಗಳಿಂದ ಎಡೆಬಿಡದಂತೆ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ … Continued

ಹಾನಗಲ್ ಕ್ಷೇತ್ರಕ್ಕೆ ಈಗಲೇ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್..!

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಸಚಿವ ಹಾಗೂ ಹಾಲಿ ಹಾನಗಲ್‌ ಶಾಸಕ ಸಿ.ಎಂ ಉದಾಸಿ ನಿಧನರಾಗಿದ್ದು, ಅವರ ನಿಧನದಿಂದ ತೆರವಾದ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಈಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ…! ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ನಿಯಾಜ್ ಶೇಖ್ ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ … Continued

ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಸಚಿವೆ ಶಶಿಕಲಾ ಜೊಲ್ಲೆ

ಹಾವೇರಿ: ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಯಾರೂ ನೇರವಾಗಿ ದತ್ತು ಪಡೆಯಲು ಅವಕಾಶವಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ದತ್ತು ಪ್ರಕ್ರಿಯೆ ನಡೆಸಿ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ಹಾವೇರಿಯಲ್ಲಿ ಮಂಗಳವಾರ … Continued

ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ

ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಈ ಬಗ್ಗೆ ಮಂಗಳವಾರ (ಜೂನ್ 15) ಹೇಳಿಕೆ ನೀಡಿದ್ದಾರೆ. ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಪ್ರಸ್ತಾಪ ಮಾಡಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. … Continued

ಪಂಚನಹಳ್ಳಿಯಲ್ಲಿ ನಡೆದ ನಟ ಸಂಚಾರಿ ವಿಜಯ ಅಂತ್ಯಕ್ರಿಯೆ

ಚಿಕ್ಕಮಗಳೂರು : ಬೈಕ್ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್ ಅವರ ಮೃತ ದೇಹವನ್ನು, ಅಂತ್ಯಕ್ರಿಯೆ ಜನಿಸಿದ ಊರು ಪಂಚನಹಳ್ಳಿಯಲ್ಲಿ ನೆರವೇರಿತು. ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಪಂಚನಹಳ್ಳಿಯ ಗ್ರಾಮಸ್ಥರು ಸೇರಿದಂತೆ ಅಕ್ಕ ಪಕ್ಕದ ಊರಿನವರು ವೀಕ್ಷಿಸಿದರು. ಆ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ … Continued