ಜೂನ್ 21 ರ ವರೆಗೆ ಬೆಂಗಳೂರು ನಗರದಲ್ಲಿ ಸೆಕ್ಷನ್ 144 ನಿರ್ಬಂಧಗಳು ಜಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 4ಕ್ಕೂ ಹೆಚ್ಚು ಜನರನ್ನು ಗುಂಪು ಸೇರುವುದನ್ನು ನಿಷೇಧಿಸುವ ಸೆಕ್ಷನ್ 144 ರ ಅಡಿಯಲ್ಲಿ ನಿರ್ಬಂಧಗಳನ್ನು ಜೂನ್ 21 ರ ವರೆಗೆ ನಗರದಲ್ಲಿ ವಿಸ್ತರಿಸಲಾಗಿದೆ. ಸೆಕ್ಷನ್ 144 ಸಿಆರ್‌ಪಿಸಿ (ವಿನಾಯಿತಿ ಪಡೆದ ಉದ್ದೇಶಗಳನ್ನು ಹೊರತುಪಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ 4 ಕ್ಕೂ ಹೆಚ್ಚು ಜನರನ್ನು ಜೋಡಿಸುವುದನ್ನು ನಿಷೇಧಿಸುತ್ತದೆ) ಜೂನ್ 21 ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ. … Continued

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶಕುಮಾರ್

ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್​.ಸುರೇಶಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 6,000 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲಾ ಸಿಬ್ಬಂದಿಗೆ ಲಸಿಕೆ ವಿತರಿಸಲಾಗುವುದು. ಹೀಗಾಗಿ ಜಿಲ್ಲಾ ಉಪನಿರ್ದೇಶಕರು … Continued

ಕರ್ನಾಟಕದಲ್ಲಿ ಸೋಮವಾರ 7 ಸಾವಿರಕ್ಕಿಂತಲೂ ಕಡಿಮೆಯಾದ ಕೊರೊನಾ ದೈನಂದಿನ ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 6835 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿ 120 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ ಹಅಗೂ ಒಟ್ಟು ಸಾವಿನ ಸಂಖ್ಯೆ 33033ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ 15,409 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, … Continued

ನಾನು ಸಚಿನಾಗಿರುವವರೆಗೂ ಅಪವಾದ ಹೊತ್ತವರು ಕುಲಪತಿಯಾಗಲು ಸಾಧ್ಯವಿಲ್ಲ:ಡಾ.ಸುಧಾಕರ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ನಾನು ಸಚಿವನಾಗಿರುವವರೆಗೂ ಸಾಧ್ಯವಿಲ್ಲ ಎಂದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ … Continued

ಇಗ್ನೋ ಕೋರ್ಸುಗಳ ಪ್ರವೇಶ ಆರಂಭ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸುಗಳಿಗೆ ಜುಲೈ ೨೦೨೧ ನೇ ಸಾಲಿಗೆ ಪ್ರವೇಶ ಆರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಕೊನೆಯ ದಿನಾಂಕ ೩೧ ಜುಲೈ ೨೦೨೧ ಆಗಿರುತ್ತದೆ. ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ … Continued

ಐಎಸ್‌ಡಿ ಕರೆ ಲೋಕಲ್ ಮಾಡುವ ಜಾಲದ ಮತ್ತೊಬ್ಬ ಆರೋಪಿ ಭಟ್ಕಳದಲ್ಲಿ ಬಂಧನ

ಭಟ್ಕಳ: ಪಾಕಿಸ್ತಾನ ಹಾಗೂ ಯುಎಇಯಿಂದ ಬರುತ್ತಿದ್ದ ಅಂತಾರಾಷ್ಟ್ರೀಯ ಕರೆಗಳನ್ನು ಲೋಕಲ್ ಕರೆಯಾಗಿ ಪರಿವರ್ತನೆ ಮಾಡುತ್ತಿದ್ದ ಜಾಲಕ್ಕೆ ಸಂಬಂಧಪಟ್ಟಂತೆ ಭಟ್ಕಳದವನೊಬ್ಬನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐಎಸ್‌ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತನೆ ಮಾಡುವ ತಂಡದಲ್ಲಿದ್ದ ಭಟ್ಕಳದ ನಿಸಾರ್ ಮಹಮ್ಮದ್ ಮೊಕ್ತೇಸರ ಎಂಬಾತನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದು, ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಆರೋಪಿ ಭಟ್ಕಳ ತಾಲೂಕಿನ ನವಾಯತ್ … Continued

ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್‍ ಪ್ಯಾಕೇಜ್‌ 5000 ರೂ. ಘೋಷಣೆ

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್‍ ಸಂಕಷ್ಟದ ಪರಿಹಾರವಾಗಿ 5000 ರೂ.ನೀಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಪ್ರಕಟಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಲ್ಲಿ 384 ನೋಂದಾಯಿತ ಪ್ರವಾಸಿ ಗೈಡ್‍ಗಳಿದ್ದು, ಅವರೆಲ್ಲರಿಗೂ ಕೋವಿಡ್‍ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದು, ಪ್ರತಿಯೊಬ್ಬರಿಗೂ ತಲಾ ರೂ.5000 ರೂ. ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಹೋಟೆಲ್‍ ಕಾರ್ಮಿಕರಿಗೆ ಕೋವಿಡ್‍ ಪರಿಹಾರ ಪ್ಯಾಕೇಜ್‍ ಯೋಜನೆಯಡಿ … Continued

ಉತ್ತರ ಕನ್ನಡ ಕರಾವಳಿಯಲ್ಲಿ ಧಾರಾಕಾರ ಮಳೆ ..ಕಡಲಬ್ಬರ ಜೋರು

  ಕುಮಟಾ : ಉತ್ತರ ಕನ್ನಡದ ಕರಾವಳಿ ತೀರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಶನಿವಾರದಿಂದ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಮೊಳಕೆ ಬಿತ್ತನೆ ಮಾಡಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಪರೀತ ಮಳೆ ಸುರಿಯುತ್ತಿರುವುದರಿಂದ ಬಿತ್ತನೆ ಮಾಡಿರುವ ಭತ್ತದ ಬೀಜ ತುಂಬಿರುವ ನೀರಿನಲ್ಲಿ ತೇಲಿ ಹೋಗುತ್ತಿದೆ. ಅಳಿದುಳಿದ ಬೀಜವು ಹೆಚ್ಚಿರುವ ನೀರಿನಿಂದ ಕೊಳೆತು ಹೋಗುವ ಭಯದಲ್ಲಿ ರೈತರಿದ್ದಾರೆ. ನೆರೆಹಾವಳಿ … Continued

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್‌ವೈ ಕೆಳಗಿಳಿಸಬಾರದು: 10ಕ್ಕೂ ಹೆಚ್ಚು ಮಠಾಧೀಶರಿಂದ ಬಿಜೆಪಿ ಹೈಕಮಾಂಡ್​ಗೆ ಒತ್ತಾಯ

ತುಮಕೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ. ಎಸ್​. ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್​ಗೆ ಸಂದೇಶ ರವಾನಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಕ್ತಿಗಳು ಅವರ ಸ್ಥಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. … Continued

ಸಂಚಾರಿ ವಿಜಯ ವೈದ್ಯಕೀಯವಾಗಿ ಜೀವಂತ: ವೈದ್ಯ ಅರುಣ್ ನಾಯ್ಕ್ ಸ್ಪಷ್ಟನೆ..!

ಬೆಂಗಳೂರು; ಚಂದನವನದ ನಟ ಸಂಚಾರಿ ವಿಜಯ್ ಅವರ ಅಗಲಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಕಿಚ್ಚ ಸುದೀಪ್​ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯರು ಸಂಚಾರಿ ವಿಜಯ ಅವರು ವೈದ್ಯಕೀಯವಾಗಿ ಮರಣ ಹೊಂದಿಲ್ಲ, ​ ಅವರಿಗೆ ಜೀವ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ನ್ಯೂಸ್‌ 18 ಕನ್ನಡ.ಕಾಮ್‌ ವರದಿ ಮಾಡಿದೆ. ಸಂಚಾರಿ ವಿಜಯ್​ … Continued