ಬೇರೆ ರಾಜ್ಯಗಳಿಂದ ವಿದ್ಯಾರ್ಥಿಗಳ ಸಮವಸ್ತ್ರ ಖರೀದಿಗೆ ಬ್ರೇಕ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವ ಸಮವಸ್ತ್ರವನ್ನು ಬೇರೆ ರಾಜ್ಯದಿಂದ ಖರೀದಿ ಮಾಡುವುದನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಹೇಳಿರುವ ಜವಳಿ ಸಚಿವ ಶ್ರೀಮಂತ ಪಾಟೀಲ್, ವಿದಾನ ಪರಿಷತ್‌ನಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ನೇಕಾರರಿಂದಲೇ ಸಮವಸ್ತ್ರ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಕೋವಿಡ್ ಸಮಯದಲ್ಲಿ ಜವಳಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಮಂದಿ ಉದ್ಯೋಗ … Continued

ಶುದ್ಧ ಕುಡಿಯುವ ನೀರಿನ ಘಟಕ ಅವ್ಯವಹಾರ ತನಿಖೆಗೆ ಜಂಟಿ ಸದನ ಸಮಿತಿ

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯ ರಘುನಾಥ್ ಮಲ್ಕಾಪುರೆ, ಶಶಿಲ್ ಜಿ.ನಮೋಷಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಾಕಷ್ಟು ಮಾಹಿತಿ ನೀಡಬೇಕಿದೆ. ಹಾಗಾಗಿ … Continued

ರಾಜ್ಯದಲ್ಲಿ ೪೭೪ ಜನರಿಗೆ ಕೊರೋನಾ, ೪೭೦ ಜನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ಕೊರೊನಾದಿಂದ ಇಬ್ಬರು ಸೋಂಕಿತರು ಮೃತಪಟ್ಟಿದ್ದು, 474 ಜನರಿಗೆ ಸೋಂಕು ದೃಢಪಟ್ಟಿದೆ ಬೆಂಗಳೂರು ನಗರದಲ್ಲಿ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ. 470 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 5917 ಸಕ್ರಿಯ ಪ್ರಕರಣಗಳಿವೆ ,146 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ಬೆಂಗಳೂರು;ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರಿಗೆ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಪ್ರತಾಪಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು ಬಿಜೆಪಿ-ಜೆಡಿಎಸ್ ಮೈತ್ರಿ: ವಿಧಾನಪರಿಷತ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಸಭಾಪತಿ ಪ್ರತಾಪಚಂದ್ರ … Continued

ತಾಪಂ ವ್ಯವಸ್ಥೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ: ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ೩ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಾಯಿಸಿ ೨ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್   ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ … Continued

ಮಳೆ ನೀರು ಸಂಗ್ರಹಕ್ಕೆ ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ

ಬೆಂಗಳೂರು: ಮಳೆ ನೀರು ಸಂಗ್ರಹಿಸಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ ಮಾಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹರತಾಳ್ ಹಾಲಪ್ಪ ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ … Continued

ಬೇರೆ ಪಕ್ಷದಿಂದ ಬಂದು ಸಿಎಂ ಆಗಬಹುದು, ನಾವು ಮಂತ್ರಿಯಾಗೋದು ತಪ್ಪಾ..?

ಬೆಂಗಳೂರು: ಬೇರೆ ಬೇರೆ ಪಕ್ಷದಿಂದ ಬಂದು ಮುಖ್ಯಮಂತ್ರಿಗಳೇ ಆಗಿರುವಾಗ, ನಾವು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಮಂತ್ರಿ ಆದರೆ ತಪ್ಪೇನು ಎಂದು ಗುರುವಾರ ಸಚಿವ ಎಂಟಿಬಿ ನಾಗರಾಜು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ಜೆಡಿಎಸ್‌ನ ಬಂಡೆಪ್ಪಕಾಶಂಪುರ ಮಾತನಾಡುತ್ತ ಕಾಂಗ್ರೆಸ್-ಜೆಡಿಎಸ್‌ನಿಂದ ಬಂದವರಿಂದ ಈ ಸರ್ಕಾರ ಆಗಿದೆ ಎಂದು ತಿವಿದರು. … Continued

ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ … Continued

ಬರಹಗಾರ ಪ್ರೊ. ಭಗವಾನ್‌ ಮುಖಕ್ಕೆ ಕಪ್ಪು ಮಸಿ ಬಳಿದ ವಕೀಲೆ

ಬೆಂಗಳೂರು: ಬರಹಗಾರ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆಯೊಬ್ಬರು ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲಾರದ ಮೀರಾ ರಾಘವೇಂದ್ರ ಎಂಬುವವರು ಭಗವಾನ್‌ ಅವರು ಹಿಂದೂ ದೇವರನ್ನು ಅವಮಾನಿಸುತ್ತಿರುವುದನ್ನು ಖಂಡಿಸಿ ಕೋರ್ಟ್‌ ಆವರಣದಲ್ಲಿಯೇ ಭಗವಾನ್‌ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಕಟು ಟೀಕಾಕಾರರಾಗಿರುವ … Continued

ಉಡುಪಿಯಲ್ಲಿ ೧೨ನೇ ಶತಮಾನದ ವಿಷ್ಣು ಮೂರ್ತಿ ಪತ್ತೆ

ಉಡುಪಿ: ಜಿಲ್ಲೆಯ ಶಿರ್ವಾದಲ್ಲಿ ೧೨ನೇ ಶತಮಾನದ ವಿಷ್ಣುವಿನ ವಿಗ್ರಹ ಪತ್ತೆಯಾಗಿದ್ದು, ಎಂಎಸ್‌ಆರ್‌ಎಸ್‌ ಕಾಲೇಜಿನ ಪ್ರಾಚ್ಯ ಇತಿಹಾಸ ಹಾಗೂ ಪುರಾತತ್ವ ವಿಭಾಗ ಹರಿಯ ಮೂರ್ತಿಯನ್ನು ಪತ್ತೆ ಮಾಡಿದೆ. ಇಲ್ಲಿನ ಪಂಚಾಯತ ಕಚೇರಿಯ ಹಿಂದೆ ಹಳೆಯ ದೇವಸ್ಥಾನದ ಸಮೀಪ ಉತ್ಖನನ ಮಾಡುತ್ತಿದ್ದ ಸಂದರ್ಭದಲ್ಲಿ ೨೦ ಅಡಿ ಆಳದಲ್ಲಿ ಸುಂದರ ವಿಷ್ಣು ಮೂರ್ತಿ ಪತ್ತೆಯಾಗಿದೆ. ಮೂರ್ತಿ ಕಾರಂದ ಮುಕುಟ, ಮಕರ … Continued