ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್‌ ಕುಟುಂಬದ ದುಡಿಯುವ ಒಬ್ಬಮೃತ ವ್ಯಕ್ತಿಗೆ 1 ಲಕ್ಷ ರೂ. ಪರಿಹಾರ:ಸರ್ಕಾರ ಘೋಷಣೆ

ಬೆಂಗಳೂರು :ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಸ್ಥರಿಗೆ ಪ್ರತಿ ಕುಟುಂಬದ ಒಬ್ಬರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿರುವ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ದುಡಿಯುವ ವ್ಯಕ್ತಿ ಮೃತಪಟ್ಟ ಪ್ರತಿ ಬಿಪಿಎಲ್ ಕಾರ್ಡುದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬದ ಒಬ್ಬರಿಗೆ … Continued

ಬ್ರೇನ್ ಡೆಡ್ .. ಬದುಕಿನ ಸಂಚಾರ ಮುಗಿಸಿದ ಕನ್ನಡದ ಪ್ರತಿಭಾವಂತ ನಟ ಸಂಚಾರಿ ವಿಜಯ, ಅಂಗಾಂಗ ದಾನಕ್ಕೆ ನಿರ್ಧಾರ

ಬೆಂಗಳೂರು: ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟುಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯ ಐಸುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬ್ರೇನ್ ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. . ಈ ಕುರಿತು ಟ್ವಿಟ್ಟರಿನಲ್ಲಿ ನಟ ಸುದೀಪ ಮಾಹಿತಿ ಮಾಹಿತಿ ಹಂಚಿಕೊಂಡಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ಬಾರಿ ನಾನು … Continued

ಕರ್ನಾಟಕದ ಕರಾವಳಿ-ಮಲೆನಾಡಿನಲ್ಲಿ ಇಂದಿನಿಂದ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಇಂದಿನಿಂದ ಮಳೆಯ ಆರ್ಭಟ ತೀವ್ರಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಇನಷ್ಟು ಜೋರಾಗಲಿದ್ದು ಈ ಮೂರು ಜಿಲ್ಲೆಗಳಲ್ಲಿ ಇಂದು (ಸೋಮವಾರ) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಜೂನ್ ೧೭ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ … Continued

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ನಿಧನ

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. 69 ವರ್ಷದ ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್‌ ಕುಮಾರ್ ನಟನೆಯ ಶಂಕರ್ … Continued

ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿ: ಶಿಕ್ಷಣ ಸಚಿವರ ಜೊತೆ ಸಭೆ

ಬೆಂಗಳೂರು: ನಗರದ ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿ ಸಂಬಂಧ ಸದ್ಯದಲ್ಲೇ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವುದಿಲ್ಲವೆಂದು ‌ ಖಾಸಗಿ ಶಾಲೆಗಳ ಒಕ್ಕೂಟ ಹೇಳಿರುವುದು ನನ್ನ ಗಮನಕ್ಕೆ ಬಂದಿದೆ ಎಂದುಹೇಳಿದ ಅವರು, ಸದ್ಯದಲ್ಲೇ … Continued

ಅಪಘಾತದಿಂದ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಕನ್ನಡದ ನಟ ಸಂಚಾರಿ ವಿಜಯ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೆದುಳು ಹಾಗೂ ಬಲ ತೊಡೆಗೆ ತೀವ್ರ ಗಾಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. . ನಿನ್ನೆ ರಾತ್ರಿ ಬೈಕ್ ನಲ್ಲಿ … Continued

ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರ: ಪಿಯುಸಿ ಎರಡನೇ ವರ್ಷದ ಪರೀಕ್ಷೆ ರದ್ದಾದ ಕಾರಣ ಮನನೊಂದು ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಶಿರಸಿಯ ಯಡಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಧನ್ಯ (18) ಪರೀಕ್ಷೆ ರದ್ದಾದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಈಕೆ ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತಿದ್ದಳು. ತಾನು … Continued

ಈಗ ಬೆಂಗಳೂರಿಗೆ ಮಹಾವಲಸೆ ಆರಂಭ..!

ಬೆಂಗಳೂರು: ಬೆಂಗಳೂರಿಗೆ ಮತ್ತೆ ಮಹಾ ವಲಸೆ ಆರಂಭವಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಗಂಟುಮೂಟೆಯೊಂದಿಗೆ ತಮ್ಮ ಊರುಗಳಿಗೆ ತೆರಳಿದವರು ಈಗ ಮತ್ತೆ ಗಂಟುಮೂಟೆಯೊಂದಿಗೆ ವಾಪಸ್‌ ಬರುತ್ತಿದ್ದಾರೆ. ಯಾಕೆಂದರೆ ಬೆಂಗಳೂರು ಸೋಮವಾರದಿಂದ ಭಾಗಶಃ ತೆರವಾಗುತ್ತಿದೆ. ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಲಿದೆ.ಹೀಗಾಗಿ ಉದ್ಯೋಗಕ್ಕಾಗಿ ಮರಳಿ ಬರುತ್ತಿದ್ದಾರೆ. ಸರ್ಕಾರ ಲಾಕ್ ಡೌನ್ ನಿಯಮಾವಳಿ ಸಡಿಲಗೊಂಡಿದ್ದರಿಂದ ಯಾವ ವಾಹನ ಸಿಕ್ಕಿತೋ ಅದರಲ್ಲಿ ಬೆಂಗಳೂರಿಗೆ ಬರಲಾರಂಭಿಸಿದ್ದಾರೆ. … Continued

ಕರ್ನಾಟಕದಲ್ಲಿ ಭಾನುವಾರ 8 ಸಾವಿರದ ಒಳಗೆ ವರದಿಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು :ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಉಲ್ಬಣ ಕಡಿಮೆಯಾಗುತ್ತಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 7810 ಹೊಸ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 125 ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 18648 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2765134ಕ್ಕೆ ಏರಿದ್ದರೆ ಒಟ್ಟು ಸಾವಿನ ಸಂಖ್ಯೆ 32913ಕ್ಕೆ ಏರಿಕೆಯಾಗಿದೆ.ಈವರೆಗೆ ಒಟ್ಟು … Continued

ಪ್ರಥಮ ಪಿಯುಸಿಗೆ ಪರೀಕ್ಷೆಯಲ್ಲ,ಅದು ಕೇವಲ ಅಸೈನ್ಮೆಂಟ್‌ ಅಷ್ಟೆ: ಸಚಿವರ ಸ್ಪಷ್ಟನೆ

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸುತ್ತಿಲ್ಲ. ಮಕ್ಕಳ ಕಲಿಕೆಗೆ ಕೇವಲ ಅಸೈನ್ಮೆಂಟ್ ಮಾತ್ರ ನೀಡಲಾಗುತ್ತಿದೆ. ಇದು ಫಲಿತಾಂಶಕ್ಕೆ ಮಾನದಂಡ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸುತ್ತಿಲ್ಲ. ಈಗ ತಿಳಿಸಿರುವಂತೆ ಮಕ್ಕಳು ಮನೆಯಲ್ಲೇ ಇದ್ದು ೧೦ … Continued