ಉಡುಪಿಯಲ್ಲಿ ೧೨ನೇ ಶತಮಾನದ ವಿಷ್ಣು ಮೂರ್ತಿ ಪತ್ತೆ

ಉಡುಪಿ: ಜಿಲ್ಲೆಯ ಶಿರ್ವಾದಲ್ಲಿ ೧೨ನೇ ಶತಮಾನದ ವಿಷ್ಣುವಿನ ವಿಗ್ರಹ ಪತ್ತೆಯಾಗಿದ್ದು, ಎಂಎಸ್‌ಆರ್‌ಎಸ್‌ ಕಾಲೇಜಿನ ಪ್ರಾಚ್ಯ ಇತಿಹಾಸ ಹಾಗೂ ಪುರಾತತ್ವ ವಿಭಾಗ ಹರಿಯ ಮೂರ್ತಿಯನ್ನು ಪತ್ತೆ ಮಾಡಿದೆ. ಇಲ್ಲಿನ ಪಂಚಾಯತ ಕಚೇರಿಯ ಹಿಂದೆ ಹಳೆಯ ದೇವಸ್ಥಾನದ ಸಮೀಪ ಉತ್ಖನನ ಮಾಡುತ್ತಿದ್ದ ಸಂದರ್ಭದಲ್ಲಿ ೨೦ ಅಡಿ ಆಳದಲ್ಲಿ ಸುಂದರ ವಿಷ್ಣು ಮೂರ್ತಿ ಪತ್ತೆಯಾಗಿದೆ. ಮೂರ್ತಿ ಕಾರಂದ ಮುಕುಟ, ಮಕರ … Continued

ಉಳ್ಳಾಲದಲ್ಲಿ ೪೯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ, ಕಾಲೇಜ್‌ ಸೀಲ್‌

ಮಂಗಳೂರು: ಕೇರಳದ ಗಡಿಯಲ್ಲಿರುವ ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಆಲಿಯಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ೪೯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿರುವುದರಿಂದ ಕಾಲೇಜನ್ನು ಸೀಲ್‌ ಮಾಡಲಾಗಿದೆ. ಈ ಕಾಲೇಜು ಕರ್ನಾಟಕ ಮತ್ತು ಕೇರಳ ನಡುವಿನ ಅಂತಾರಾಜ್ಯ ಗಡಿಯಿಂದ ಕೆಲವು ಕಿಲೋಮೀಟರ್ ದೂರದಲ್ಲಿದೆ. ವಿದ್ಯಾರ್ಥಿಗಳು COVID-19 ಪರೀಕ್ಷೆಗೆ ಒಳಪಡುವ ಮೊದಲು ಕಾಲೇಜಿನ ಆರು ವಿದ್ಯಾರ್ಥಿಗಳು … Continued

ಅಯೋಧ್ಯಾ ಮಸೀದಿ ಮಾಲೀಕತ್ವದ ವಿಚಾರ: ಇಬ್ಬರು ಸಹೋದರಿಯರು ಕೋರ್ಟಿಗೆ

ಲಕ್ನೋ: ರಾಮ ಜನಮಭೂಮಿ-ಬಾಬ್ರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಅಯೋಧ್ಯೆಯ ಬೇರೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವದ ವಿಚಾರದಲ್ಲಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಸಲ್ಲಿಸಿದ್ದ … Continued

ಮಂಡ್ಯ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪ

ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ 1,600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಇರುವುದು ಪ್ರಾಥಮಿಕ ಸಮೀಕ್ಷೆಯಲ್ಲಿ ಕಂಡುಬಂದಿದೆ ಎಂದು ಕೇಂದ್ರ ಸರಕಾರ  ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ. ಪರಮಾಣು ಇಂಧನ ಇಲಾಖೆಯ ಘಟಕ  ಅಟಾಮಿಕ್ ಮಿನರಲ್ಸ್ ಡೈರೆಕ್ಟರೇಟ್ ಫಾರ್ ಎಕ್ಸ್‌ಪ್ಲೋರೇಶನ್ ಅಂಡ್ ರಿಸರ್ಚ್ (ಎಎಮ್‌ಡಿ) ಮಾರ್ಲಗಲ್ – ಅಲಪಟ್ಟಣ ಪ್ರದೇಶದ ಪೆಗ್‌ಮ್ಯಾಟೈಟ್‌ಗಳಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಹೊಸ ತಂತ್ರಜ್ಞಾನಗಳಲ್ಲಿ … Continued

ದಂಪತಿಯಿಂದ ಆತ್ಮಹತ್ಯೆಗೆ ಯತ್ನ, ಪತಿ ಸಾವು

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನುಆಸ್ಪತ್ರೆಗೆ ಸೇರಿಸಲಾಗಿದೆ. ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತಪಟ್ಟವ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಗುರುವಾರ ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ … Continued

ಇಂದಿನಿಂದ ರಾಷ್ಟ್ರಪತಿಗಳ  ೪ ದಿನಗಳ ಕರ್ನಾಟಕ ಪ್ರವಾಸ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಅನೇಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ ಅವರು ಶುಕ್ರವಾರ (ಫೆ.೫) ಮಧ್ಯಾಹ್ನ ಏರೋ ಇಂಡಿಯಾ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.6ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ … Continued

ಎಚ್‌ಡಿಎಂಸಿ ಚುನಾವಣೆಗೆ ಸುಪ್ರೀಂಕೋರ್ಟ್‌ ತಡೆ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ  ಚುನಾವಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ  ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಕೆಲ ಮಹಾನಗರ ಪಾಲಿಕೆಗಳಿಗೆ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಲಾಗಿತ್ತು. ಸುಪ್ರೀಂಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ಮತ್ತೆ ಮುಂದಕ್ಕೆ ಹೋಗಿದೆ.   ಈಗಾಗಲೇ … Continued

ಕೋವಿಡ್‌ನಿಂದ ಆರ್ಥಿಕ ಸಂಕಷ್ಟ: ಸಾರಿಗೆ ನೌಕರರ ಸಂಬಳ ವಿಳಂಬ

ಬೆಂಗಳೂರು: ಕೋವಿಡ್  ಕಾರಣದಿಂದ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ … Continued

ರಾಜ್ಯದಲ್ಲಿ ೩೯೫ ಜನರಿಗೆ ಕೊರೋನಾ ಸೋಂಕು, ೪೧೨ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೩೯೫ ಜನರಿಗೆ ಕೊರೋನಾ ಸೋಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ಒಟ್ಟು ೪೧೨ ಜನ ಗುಣಮುಖರಾಗಿ ಆಸ್ಪತ್ರೆಯಿಂದ   ಬಿಡುಗಡೆಯಾಗಿದ್ದಾರೆ. ಐಸಿಯುವಿನಲ್ಲಿ ೧೪೮ ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟಾರೆಯಾಗಿ ರಾಜಯದಲ್ಲಿ ೫೯೨೪ ಸಕ್ರಿಯ ಪ್ರಕಣಗಳಿವೆ.

ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಪೂರ್ಣ ಹಾಜರಿಗೆ ಅನುಮತಿ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.೫೦ರಷ್ಟು  ಪ್ರೇಕ್ಷಕರ ಸಾಮರ್ಥ್ಯಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಚಿತ್ರರಂಗದಲ್ಲಿ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ   ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇಕಡ ನೂರರಷ್ಟು ಪ್ರೇಕ್ಷಕರ ಹಾಜರಾತಿಯಲ್ಲಿ  ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ. ರಾಜ್ಯ ಸರ್ಕಾರ ನಿನ್ನೆ ಥಿಯೇಟರ್ ಗಳಲ್ಲಿ ಶೇ.೫೦ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ನೀಡಿ, ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿತ್ತು. ಸರ್ಕಾರದ … Continued