ಪ್ರಥಮ ಪಿಯುಸಿ ಆನ್ಲೈನ್‌ ಪರೀಕ್ಷೆ; ಸಚಿವ ಸುರೇಶಕುಮಾರ ಸ್ಪಷ್ಟನೆ

ಬೆಂಗಳೂರು: ಪ್ರಥಮ ಪಿಯುಸಿ ಪರೀಕ್ಷೆಯನ್ನು ಯಾರೂ ಮೌಲ್ಯಮಾಪನ ಎಂದು ತಪ್ಪಾಗಿ ಭಾವಿಸಬಾರದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರಥಮ ಪಿಯುಸಿ ಪರೀಕ್ಷೆ ನಡೆಸುತ್ತಿರುವ ಕುರಿತು ಸ್ಪಷ್ಟನೆ ನೀಡಿದ ಅವರು, ವಿದ್ಯಾರ್ಥಿಗಳು ಶಾಲೆಗೆ ಬಂದು ಅಸೈನ್ಮೆಂಟ್ ಸಲ್ಲಿಸಬೇಕಿಲ್ಲ. ಮಕ್ಕಳ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರ ಇದಾಗಿದೆ. ಈ ಬಗ್ಗೆ ಅನವಶ್ಯಕ ಗೊಂದಲ ಬೇಡ ಎಂದು … Continued

ತೈಲ ಬೆಲೆ ಏರಿಕೆ: ರಾಜ್ಯಾದ್ಯಂತ ಪೆಟ್ರೋಲ್ ಬಂಕ್‌ಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರದ ನಿರಂತರ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು (ಶುಕ್ರವಾರ) 100 ನಾಟ್‌ಔಟ್ ಎಂಬ ವಿನೂತನ ಪ್ರತಿಭಟನೆಯನ್ನು ಪೆಟ್ರೋಲ್ ಬಂಕ್‌ಗಳ ಮುಂದೆ ನಡೆಸಿತು. ಕೋವಿಡ್ ಮಹಾಮಾರಿ ಪಿಡುಗಿನಿಂದ ತತ್ತರಿಸಿರುವ  ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳದ ಗದಾ ಪ್ರಹಾರ ನಡೆಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ದರ ಏರಿಕೆ … Continued

ಕೊರೊನಾ ಸೋಂಕಿನಿಂದ ಕವಿ, ಖ್ಯಾತ ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನ

ಬೆಂಗಳೂರು: ಕೊರೊನಾ​ ಸೋಂಕಿಗೆ ಕವಿ, ಖ್ಯಾತ ಸಾಹಿತಿ ಡಾ.ಸಿದ್ದಲಿಂಗಯ್ಯ ( 67 ವರ್ಷ) ನಿಧನರಾಗಿದ್ದಾರೆ. ಸೋಂಕಿಗೆ ತುತ್ತಾಗಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ನಿಮೋನಿಯಾ ತೀವ್ರಾಗಿದ್ದ ಹಿನ್ನಲೆ ಅವರು ಆರೋಗ್ಯ ಸ್ಥಿತಿ ಬಿಗಾಡಾಯಿಸಿದ್ದು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ … Continued

ವಿದ್ಯಾರ್ಥಿಗಳೇ ಗಮನಿಸಿ, ಪ್ರಥಮ ಪಿಯುಸಿಗೆ ಈಗ ಆನ್​ಲೈನ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪರೀಕ್ಷೆ ಮಾಡುವಂತೆ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್‌ ಸುತ್ತೋಲೆ ಹೊರಡಿಸಿದೆ. ದಾಖಲಾದ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆಯಾಗಿದ್ದಾರೆಂದು ಪರಿಗಣಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.ದ್ವಿತೀಯ ಪಿಯುಸಿಗೆ ದಾಖಲಾತಿ ಪಡೆಯಲು ಹಾಗೂ ಆ ಅವಧಿಯಲ್ಲಿ ಅವರಿಗೆ ದೊರಕಬೇಕಾದ ವಿದ್ಯಾರ್ಥಿ ವೇತನದಂತಹ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳ ಫಲಿತಾಂಶವನ್ನು ಎಸ್ ಎ ಟಿ ಎಸ್ ತಂತ್ರಾಂಶದಲ್ಲಿ ಅಂಕಗಳ … Continued

ಭೂ ಒತ್ತುವರಿ ಆರೋಪ; ಕಳಂಕಿತರ ರಕ್ಷಿಸುವ ಕೆಲಸ ನಡೆಯುತ್ತಿದೆ

ಮೈಸೂರು: ಶಾಸಕ ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ನಡೆದದ್ದು ಹೈಡ್ರಾಮಾ. ಶಾಸಕರು ಪ್ರತಿಭಟನೆ ಮಾಡಿದಂತೆ, ಆರ್.ಸಿ. ಮನವಿ ಸ್ವೀಕರಿಸಿದಂತೆ, ತನಿಖೆ ಮಾಡುವುದಾಗಿ ಭರವಸೆ ನೀಡಿದ ನಾಟಕ … Continued

ಮುಂದಿನ ಎರಡು ವರ್ಷಗಳ ಕಾಲ ನಾನೇ ಸಿಎಂ ಆಗಿ ಮುಂದುವರಿಯುವೆ:ಬಿಎಸ್‌ವೈ

ಹಾಸನ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಹೇಳಿಕೆ ನನಗೆ ಹೆಚ್ಚಿನ ಶಕ್ತಿ” ನೀಡಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಶುಕ್ರವಾರ ಹೇಳಿದ್ದಾರೆ ಮತ್ತು ಉಳಿದ ಎರಡು ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗೆ ತಾನು ಶಕ್ತಿ ಮೀರಿ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ. ಜಿಲ್ಲೆಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಪರಿಶೀಲನಾ … Continued

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ; ನಟ ಚೇತನ್​ ಬಂಧನಕ್ಕೆ ಸಚಿವ ಹೆಬ್ಬಾರ ಒತ್ತಾಯ

ಹುಬ್ಬಳ್ಳಿ: ನಟ ಚೇತನ್​ ನೀಡಿದ ಹೇಳಿಕೆಯಿಂದಾಗಿ ಅವರ ವಿರುದ್ಧ ಬ್ರಾಹ್ಮಣ ಸಮುದಾಯ ಈಗ ತಿರುಗಿ ಬಿದ್ದಿದೆ. ಚೇತನ್​ ಮಾಡಿದ ಸೋಶಿಯಲ್​ ಮೀಡಿಯಾ ಪೋಸ್ಟ್​ನಿಂದಾಗಿ ವಿವಾದ ಶುರುವಾಗಿದೆ. ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​ ಚೇತನ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ​ ಅವರನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಟಿಸುತ್ತಿರುವ ಚೇತನ್ … Continued

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಒಂದು ವಾರ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಶುಕ್ರವಾರದಿಂದ) ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ (ಶುಕ್ರವಾರದಿಂದ) ಒಂದು ವಾರಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೂರು … Continued

ಕರ್ನಾಟಕದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ ಬೋಧನೆ; ಜುಲೈ ಒಳಗೆ ವರದಿಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ ಬೋಧನೆ ವಿಚಾರವಾಗಿ ಜುಲೈ ಒಳಗೆ ವರದಿ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಹುಶಿಸ್ತೀಯ ಬೋಧನಾ ಕ್ರಮದಂತೆ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸುಗಳನ್ನು ಬೋಧಿಸುವ ಬಗ್ಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಇಲಾಖೆಯ ಉನ್ನತ ಅಧಿಕಾರಿಗಳು … Continued

ಬಿಎಸ್ಎನ್ಎಲ್ ಹೆಸರಿನಲ್ಲಿ ಗ್ರಾಹರಿಗೆ ಕರೆ ಮಾಡಿ ವಂಚನೆ: ಎಚ್ಚರಿಕೆಯಿಂದಿರಿ

ಹುಬ್ಬಳ್ಳಿ: ಬಿಎಸ್ಎನ್ಎಲ್ ಹೆಸರಿನಲ್ಲಿ ಗ್ರಾಹಕರಿಗೆ ಕರೆ ಮಾಡಿ ಕೆವೈಸಿ ಪರಿಶೀಲನೆಗಾಗಿ ವೈಯಕ್ತಿಕ ಮಾಹಿತಿ ಪಡೆದು ವಂಚಿಸುವ ಪ್ರಕರಣಗಳು ಕಂಡುಬಂದಿವೆ. ಗ್ರಾಹಕರು ಇಂತಹ ಕರೆ ಅಥವಾ ಸಂದೇಶಗಳಿಗೆ ಸ್ಪಂದಿಸಿ ವೈಯಕ್ತಿಕ ವಿವರಗಳು, ಬ್ಯಾಂಕ್ ಖಾತೆ, ಓಟಿಪಿ ಪಿನ್ ಮಾಹಿತಿಗಳನ್ನು ನೀಡಬಾರದು ಎಂದು ಬಿಎಸ್‌ಎನ್‌ಎಲ್‌ ತಿಳಿಸಿದೆ. ಬಿಎಸ್ಎನ್ಎಲ್ ಗ್ರಾಹಕರಿಗೆ ಕರೆ ಅಥವಾ ಸಂದೇಶದ ಮೂಲಕ ವೈಯಕ್ತಿಕ ಮಾಹಿತಿ ಕೇಳುವುದಿಲ್ಲ. … Continued