ಯಡಿಯೂರಪ್ಪನವರೇ ನಮ್ಮ ಸರ್ವ ಸಮ್ಮತ ನಾಯಕ, ನಾಯಕತ್ವ ಬದಲಾವಣೆ ಚರ್ಚೆ ಇಂದಿಗೇ ಅಂತ್ಯ

ಬೆಂಗಳೂರು: ವರಿಷ್ಠರು ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದದ್ದು, ಬಿಜೆಪಿ ರಾಜ್ಯ ನಾಯಕರು ಯಡಿಯೂರಪ್ಪನವರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿದಾಕ್ಷಣ ಅವರ ನಿವಾಸಕ್ಕೆ ದೌಡಾಯಿಸಿದ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಹಾಗೂ ಬಿಜೆಪಿ … Continued

ಸಿಎಂ ಬಿಎಸ್‌ವೈ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಜೋಶಿ

ಹುಬ್ಬಳ್ಳಿ: ಬಿಜೆಪಿಯ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಬೆಂಗಳೂರಲ್ಲಿ ಹೈಕಮಾಂಡ್‌ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ … Continued

ಅಮೆಜಾನ್ ಕ್ಷಮೆಯಾಚನೆ: ಒಳ ಉಡುಪಿನ ಚಿತ್ರದಲ್ಲಿ ಕನ್ನಡ ಧ್ವಜ, ಅಶೋಕ ಚಕ್ರದ ಲಾಂಛನ ತೆಗೆದ ಆನ್‌ಲೈನ್‌ ಶಾಪಿಂಗ್‌ ದೈತ್ಯ

ಬೆಂಗಳೂರು: ಅತಿದೊಡ್ಡ ಜಾಗತಿಕ ಇ-ಕಾಮರ್ಸ್​ ಕಂಪನಿ ಅಮೆಜಾನ್ ಕೆನಡಾದ ತನ್ನ ಆನ್​ಲೈನ್ ಶಾಪಿಂಗ್ ವೆಬ್​ಸೈಟ್​ನಲ್ಲಿ ಕನ್ನಡ ಧ್ವಜದ ಚಿತ್ರ, ಅಶೋಕ ಚಕ್ರದ ಲಾಂಛನವಿರುವ ಮಹಿಳೆಯರ ಒಳ ಉಡುಪುಗಳನ್ನು ಮಾರಾಟಕ್ಕಿಟ್ಟ ಕಾರಣಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆಯಾಚಿಸಿದೆ. ಈಗ ಆ ಚಿತ್ರವನ್ನು ತನ್ನ ಸೈಟ್​ನಿಂದ ತೆಗೆದುಹಾಕಿರುವ ಅಮೆಜಾನ್ ಅದರ ಬದಲಾಗಿ ಬೇರೆ ಚಿತ್ರ ಹಾಕಿದೆ. ಆದರೆ, ಹೊಸ … Continued

ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ: ವರ್ಗಾವಣೆ ರದ್ದತಿ ಸಾಧ್ಯವಿಲ್ಲವೆಂದ ಬಿಎಸ್‌ವೈ

ಬೆಂಗಳೂರು: ತನ್ನ ವರ್ಗಾವಣೆ ತಡೆ ಕೋರಿ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರ ಬಹಿರಂಗ ತಿಕ್ಕಾಟಕ್ಕೆ ಬ್ರೇಕ್​ ಹಾಕಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಹಿಡಿಯುವಂತೆ ಮನವಿ … Continued

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವೆ: ಸಿಎಂ ಬಿಎಸ್‌ವೈ ಸ್ಫೋಟಕ ಹೇಳಿಕೆಗೆ ರಾಜಕೀಯದಲ್ಲಿ ತೀವ್ರ ಸಂಚಲನ

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಭಾನುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡಿಗೆ ಎಲ್ಲಿ ವರೆಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ … Continued

ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್‌ ಇಬ್ಬರನ್ನೂ ವರ್ಗಾವಣೆ ಮಾಡಿದ ಸರ್ಕಾರ: ಐಎಎಸ್‌ಗಳ ಜಟಾಪಟಿಗೆ ತೆರೆ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಗ್ರಾಸವಾಗಿ ಈಗ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರನ್ನು ವರ್ಗಾವಣೆ ಮಾಡಿ ಶನಿವಾರ ರಾತ್ರಿ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಬದಲಿಗೆ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. … Continued

ಕರ್ನಾಟಕದಲ್ಲಿ 1784 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, 111 ಜನರ ಸಾವು:ಡಾ.ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 1784 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಆದರೆ 111 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇದಕ್ಕೆ ಬೇಕಾದ ಔಷಧಿಯನ್ನು ಪಡೆಯಲಾಗಿದೆ. ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ … Continued

ಬೆಂಗಳೂರಲ್ಲಿ ಶನಿವಾರ 3 ಸಾವಿರಕ್ಕಿಂತ ಕಡಿಮೆ ದಾಖಲಾದ ಹೊಸ ಕೊರೊನಾ ಸೋಂಕು.. ಆದರೆ ಕುಸಿಯದ ಮರಣ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13800 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2683314ಕ್ಕೆ ಏರಿಕೆಯಾಗಿದೆ. 25346 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 268275ಕ್ಕೆ ಇಳಿದಿದೆ. ಸೋಂಕಿನಿಂದಾಗಿ 365 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾದಿಂದ ಮೃತಪಟ್ಟವರ … Continued

ಜೂನ್ 7ರಿಂದ ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ನಲ್ಲಿ ವಿನಾಯಿತಿ : ಬೆಳಿಗ್ಗೆ 6 ರಿಂದ 10ರ ವರೆಗೆ ಅಗತ್ಯ ಸೇವೆಗಳಿಗೆ ಅನುಮತಿ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಇಳಿಮುಖವಾಗುತ್ತಿದೆ. ರಾಜ್ಯ ಸರ್ಕಾರ ಜೂ.14 ರ ವರೆಗೆ ಲಾಕ್‌ಡೌನ್‌ ಮುಂದುವರಿಸಲು ಸೂಚಿಸಿದೆ. ಜೂನ್‌ 7 (ಸೋಮವಾರ)ರಿಂದ ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ … Continued

ಕರ್ನಾಟಕದಲ್ಲಿ 52 ದಿನಗಳ ನಂತರ ಶೇ.10ಕ್ಕಿಂತ ಕಡಿಮೆ ಬಂದ ಕೋವಿಡ್‌ ಸಕಾರಾತ್ಮಕತೆ ದರ…!

ಬೆಂಗಳೂರು : ಏಪ್ರಿಲ್‌ 15ರ ನಂತರ ಇದೇ ಮೊದಲ ಬಾರಿಗೆ ಕರ್ನಾಟಕದ ಕೋವಿಡ್‌ ಸಕಾರಾತ್ಮಕತೆ (ಪಾಸಿಟಿವಿಟಿ) ದರ 10ಕ್ಕಿಂತ ಕಡಿಮೆ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದ್ದಾರೆ. ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,42,291 ಮಂದಿಗೆ ಕೊರೊನಾ ಪರೀಕ್ಷೆ … Continued