ಡಿಕೆ ಶಿವಕುಮಾರ ನಾಳೆಯೇ ಸಿಎಂ ಆಗೋದಾದ್ರೆ ಅವ್ರಿಗೆ 19 ಜೆಡಿಎಸ್ ಶಾಸಕರ ಬೆಂಬಲ: ಆಫರ್‌ ನೀಡಿದ ಕುಮಾರಸ್ವಾಮಿ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ​ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ ಮಾಡಿದ್ದಾರೆ…. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಮುಖ್ಯಮಂತ್ರಿ ಆಗುವುದಾದರೆ ಆದರೆ ನಾವು ಬೆಂಬಲ ನೀಡುತ್ತೇವೆ ಎಂದರು. ಸುಮ್ಮನೆ ಜೆಡಿಎಸ್‌ನಿಂದ ಐದು ಜನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಜಾತಿ ನಿಂದನೆ ಆರೋಪ; ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಜಾತಿ ನಿಂದನೆ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪುನೀತ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮತ್ತು ಅವಾಚ್ಚ ಶಬ್ದಗಳ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಹರೀಶ ಭೈರಪ್ಪ ಎಂಬವರು ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ … Continued

ತುಲಾಭಾರ ಮಾಡುವಾಗ ಪೇಜಾವರ ಶ್ರೀಗಳ ಮೇಲೆ ಕಳಚಿ ಬಿದ್ದ ತಕ್ಕಡಿ

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಸಣ್ಣ ಅವಘಡ ನಡೆದಿದೆ. ತುಲಾಭಾರ ನಡೆಯುತ್ತಿದ್ದ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳಿಗೆ ಸಣ್ಣ ಗಾಯವಾಗಿದೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued

ಜಾತಿ ಗಣತಿ ವರದಿ ತಿರಸ್ಕರಿಸಲು ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾದ ‘ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ. ಎಚ್.ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ಸಾಮಾಜಿಕ, ಆರ್ಥಿಕ ಸಮೀಕ್ಷೆ ಲೋಪ – ದೋಷಗಳಿಂದ ಕೂಡಿದೆ. ಶಂಕಾಸ್ಪದ ಮತ್ತು ತಪ್ಪು ಮಾಹಿತಿಯಿಂದ ಕೂಡಿರುವ ವರದಿ ಅಂಗೀಕರಿಸಿದರೆ ಒಕ್ಕಲಿಗ ಸಮುದಾಯಕ್ಕೆ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು : ನವೆಂಬರ್‌ 4ರಿಂದ 8ರವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್‌ 4ರಿಂದ 8ರವರೆಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continued

ಅಫಜಲಪುರ : ಭೀಕರ ರಸ್ತೆ ಅಪಘಾತ, ನೇಪಾಳ ಮೂಲದ ಒಂದೇ ಕುಟುಂಬದ ಐವರು ಸಾವು

ಕಲಬುರಗಿ: ಜಿಲ್ಲೆಯ ಅಫಜಲಪುರ ಪಟ್ಟಣದ ಹೊರವಲಯದ ಬಳೂರ್ಗಿ ಕ್ರಾಸ್ ಬಳಿಯ ಅಂತಾರಾಜ್ಯ ರಸ್ತೆಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಅಫಜಲಪುರ ಪಟ್ಟಣದಲ್ಲಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿ ಬೈಕಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳ ಸಮೇತ ದುಧನಿಯಿಂದ ಅಫಜಲಪುರಕ್ಕೆ ಆಗಮಿಸುತ್ತಿದ್ದಾಗ ಈ ದುರ್ಘಟನೆ … Continued

ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ವೀಡಿಯೊ | ಅಂಕೋಲಾದಲ್ಲಿ ಬೃಹತ್‌ ಕಾಳಿಂಗ ಸರ್ಪ ಸೆರೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್‌ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಗಿದೆ. ಅಂಕೋಲಾದ ಕೃಷ್ಣಾಪುರದಲ್ಲಿ ಪ್ರಶಾಂತ ನಾಯಕ ಎಂಬವರ ಮನೆಯ ಸಮೀಪ ಬೃಹತ್ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡಿತ್ತು. ಮನೆಯವರು ಕೂಡಲೇ ಸ್ಥಳೀಯ ಉರಗ ತಜ್ಞ ಮಹೇಶ ನಾಯ್ಕ ಎಂಬವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಮಹೇಶ ನಾಯ್ಕ ಅವರು ಗಿಡಗಂಟಿಗಳ … Continued