ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ನಿರ್ಧಾರ ಸದ್ಯಕ್ಕಿಲ್ಲ

ಬೆಂಗಳೂರು: ಕೋವಿಡ್-‌19 ಸದ್ಯದ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಾಧ್ಯವಾಗದಿದ್ದರೂ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದು ಪಡಿಸುವ ಚಿಂತನೆ ಶಿಕ್ಷಣ ಇಲಾಖೆ ಮುಂದಿಲ್ಲ. ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ … Continued

ಕೊರೊನಾದಿಂದ ಪೋಷಕರ ಕಳೆದುಕೊಂಡ ಮಕ್ಕಳ ವಿದ್ಯಾಭ್ಯಾಸದ ಹೊಣೆ ನಮ್ಮದು : ಶ್ರೀ ಹುಚ್ಚೇಶ್ವರ ಸ್ವಾಮೀಜಿ

ಕಮತಗಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘವು ಕೊರೊನಾದಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಬಂದಿದೆ. ಕೊರೊನಾ ಸೋಂಕಿನಿಂದ ತಮ್ಮ ತಂದೆ-ತಾಯಿ ಕಳೆದುಕೊಂಡು ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ಕಮತಗಿಯ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ಪ್ರಕಟಿಸಿದೆ. ಎಷ್ಟೋ ಮಕ್ಕಳು ಕೊರೊನಾ ಸೋಂಕಿಗೆ ಒಳಗಾದ ತಮ್ಮ ತಂದೆ-ತಾಯಿಗಳನ್ನು ಕಳೆದುಕೊಂಡು … Continued

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್‌ಐ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೋಣಿಬೀಡು ಪೊಲೀಸ್ ಠಾಣೆ ಪಿಎಸ್‌ಐ ಅರ್ಜುನ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಶನಿವಾರ ಇಲಾಖೆ ತನಿಖೆಗೂ ಆದೇಶ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಕಿರುಗಂದ ಗ್ರಾಮದ ಯುವಕ ಪುನೀತ್ ನೀಡಿರುವ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ … Continued

ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ:ಹಾವಾಮನ ಇಲಾಖೆ ಮುನ್ಸೂಚನೆ

ಬೆಂಗಳೂರು: ಭಾರತದ ಪೂರ್ವ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ ಬೀಸುವ ಯಾಸ್‌ ಚಂಡ ಮಾರುತದ ನೇರ ಪ್ರಭಾವ ಕರ್ನಾಕದ ಮೇಲೆ ಆಗದಿದ್ದರೂ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 26ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. … Continued

ನೇಮಕವಾದ 2150 ವೈದ್ಯರಿಗೆ ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಆದೇಶ

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ 2150 ವೈದ್ಯರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇದರಲ್ಲಿ 780 ತಜ್ಞ ವೈದ್ಯರು ಇದ್ದಾರೆ. ಉಳಿದ ಅಭ್ಯರ್ಥಿಗಳು ಎಂ.ಬಿ.ಬಿ.ಎಸ್ ಪದವಿ ಪಡೆದವರಾಗಿದ್ದಾರೆ. ಇವರೆಲ್ಲರಿಗೂ ಸ್ಥಳ ನಿಯೋಜನೆ ಮಾಡಿ ಕರ್ತವ್ಯ ಹಾಜರಾಗಲು ನೇಮಕಾತಿ ಆದೇಶ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು. ಹುಬ್ಬಳ್ಳಿ ಇಂದಿರಾ … Continued

ಎರಡನೇ ಅಲೆ: ಭಾರತದಲ್ಲಿ ೨೧ ದಿನಗಳಲ್ಲಿ ೭೧ ಲಕ್ಷ ಜನರಿಗೆ ಕೊರೊನಾ ಸೋಂಕು..!!

ನವ ದೆಹಲಿ; ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕಿನ ೨ನೇ ಅಲೆ ಹರಡಿದ ವೇಗಕ್ಕೆ ಎಂಥವರೂ ಗಾಬರಿಗೊಳ್ಳಲೇಬೇಕು. ಮೇ ತಿಂಗಳೇ ಈ ಭಯಾನಕ ಹರಡುವಿಕೆಗೆ ಸಾಕ್ಷಿಯಾಗಿದೆ. ಈ ತಿಂಗಳ ಮೊದಲ ೨೧ ದಿನಗಳಲ್ಲಿ ಬರೋಬ್ಬರಿ ೭೧ ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ.ಅಂದರೆ ಕೋವಿಡ್‌ ರೂಪಅಂತರಗಳು ಅಷ್ಟೊಂದು ವೇಗವಾಗಿ ಸೋಂಕನ್ನು ಹರಡಿದೆ. ಏಪ್ರಿಲ್‌ನಲ್ಲಿ ಒಟ್ಟು ೬೯.೪ ಲಕ್ಷ ಮಂದಿಗೆ … Continued

ಕರ್ನಾಟಕದಲ್ಲಿ ಹೊಸ ಸೋಂಕಿತರಿಗಿಂತ ದುಪ್ಪಟ್ಟು ಆಸ್ಪತ್ರೆಯಿಂದ ಬಿಡುಗಡೆ, ಆದರೆ ಕಡಿಮೆಯಾಗದ ಸಾವಿನ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 31,183 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ 61,766 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದೇ ಸಮಯದಲ್ಲಿ 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,98,925 … Continued

ಪ್ರೆಶರ್ ಕುಕ್ಕರ್‌ನಿಂದ ಉಗಿ ತೆಗೆದುಕೊಳ್ಳುವುದು… ಶುದ್ಧ ದೇಸಿ ಜೀನಿಯಸ್‌…!

ಭಾರತೀಯ ವ್ಯಕ್ತಿಯೊಬ್ಬರು ಪ್ರದರ್ಶಿಸಿದ ಉಗಿ ತೆಗೆದುಕೊಳ್ಳುವ (steam inhalation) ವಿಧಾನ ಈಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ವೀಡಿಯೊಗಳು ಹೊರಬಂದವು, ಅಲ್ಲಿ ಭಾರತೀಯ ಹಳ್ಳಿಗಳ ಜನರು ಕೋವಿಡ್‌-19 ಅನ್ನು ಸೋಲಿಸಲು ತಮ್ಮದೇ ಆದ ವಿಧಾನ ಅನುಸರಿಸುತ್ತಿದ್ದಾರೆ. ಭಾರತವು ಕೊರೊನಾ ವೈರಸ್‌ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದಂತೆ, ಉಗಿ ಉಸಿರಾಡುವಿಕೆಯ ಹಳೆಯ-ಹಳೆಯ ಮನೆಮದ್ದುವನ್ನು … Continued

ಶಿರಸಿ ಪಂಡಿತ್‌ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ, ಬೇರೆ ಆಸ್ಪತ್ರೆಗಳಿಗೆ ರೋಗಿಗಳ ಸ್ಥಳಾಂತರ

ಶಿರಸಿ :ಉತ್ತರ ಕನ್ನಡ ಜಿಲ್ಲೆ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದ ಯುನಿಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಭಾರೀ ಪ್ರಮಾಣದ ಆಮ್ಲಜನಕ ಸೋರಿಕೆಯಾಗಿದೆ.ಗೊತ್ತಾದ ತಕ್ಷಣವೇ 7 ರೋಗಿಗಳನ್ನು ಅಕ್ಕ ಪಕ್ಕದ ತಾಲೂಕುಗಳ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಭಾರೀ ಅನಾಹುತ ತಪ್ಪಿದೆ. ಕೋವಿಡ್ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದ ಯುನಿಟ್ ನಲ್ಲಿ ಸೋರಿಕೆಯಿಂದ ಸುಮಾರು … Continued

ಲಾಕ್‌ಡೌನ್‌:ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್‌ ವರದಿ ಕಡ್ಡಾಯ, ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ

ಹುಬ್ಬಳ್ಳಿ/ಶಿಗ್ಗಾವಿ : ಇನ್ನು ಮುಂದೆ ಹೊರ ರಾಜ್ಯಗಳಿಂದ ಕರ್ನಾಟಕ  ಪ್ರವೇಶ ಮಾಡಬೇಕೆಂದರೆ ಕೋವಿಡ್ ನೆಗೆಟಿವ್‌ ವರದಿ ಕಡ್ಡಾಯ ಎಂದು ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ನಿಯಮವನ್ನು ಪರಿಪಾಲನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಕೋಟ್..  ಗಡಿ ಪ್ರದೇಶಗಳಲ್ಲಿ  ಕೆಲವರು ಒಳ ದಾರಿಗಳ ಮೂಲಕ ರಾಜ್ಯ ಪ್ರವೇಶ ಮಾಡಲು … Continued