ಗ್ರಾಮೀಣದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ದಾಖಲು ಕಡ್ಡಾಯ, ಮದುವೆ ಕಾರ್ಯಕ್ರಮಕ್ಕೆ ಕಟ್ಟುನಿಟ್ಟು

ಬೆಂಗಳೂರು:ರಾಜ್ಯದ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿದ್ದು, ಗ್ರಾಮೀಣ ಭಾಗದಲ್ಲಿ ಸೋಂಕಿಗೆ ಒಳಗಾಗುವವರನ್ನು ಮನೆಯಲ್ಲೇ ಐಸೋಲೇಷನ್‌ಗೆ ಬಿಡದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲು ಮಾಡುವ ನಿರ್ಧಾರವನ್ನು ಕೊರೊನಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಕೈಗೊಳ್ಳಲಾಗಿದೆ, ರಾಜ್ಯದ ಗ್ರಾಮಾಂತರ ಭಾಗಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕಿನ ನಿಗ್ರಹಕ್ಕೆ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಶನಿವಾರ ಟಾಸ್ಕ್‌ಫೋರ್ಸ್‌ನ … Continued

ತೌಕ್ಟೆ ಚಂಡಮಾರುತ ಇಂದು ರಾತ್ರಿ ಕರ್ನಾಟಕದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ತೌಕ್ಟೆ ಚಂಡಮಾರುತದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳೊಂದಿಗೆ ಕಂದಾಯ ಸಚಿವರಾದ ಆರ್. ಅಶೋಕ್ ಹಾಗೂ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ತೌಕ್ಟೆ ಚಂಡಮಾರುತದಿಂದ ಹಾನಿಗೊಳಗಾಗುವ ಪ್ರದೇಶದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಮುನ್ನೆಚ್ಚರಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ತೌಕ್ಟೆ ಚಂಡಮಾರುತ … Continued

ಮೇ 17 ರಿಂದ ೨೧ರ ವರೆಗೆ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್ಡೌನ್

ಕೊಪ್ಪಳ: ಮೇ 17 ರಿಂದ 5 ದಿನಗಳ ಕಾಲ ಅಂದರೆ ಮೇ ೨೧ರ ವರೆಗೂ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಶನಿವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕೊರೊನಾ ಮಹಾಮಾರಿ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗಿದೆ. … Continued

ತೌಕ್ಟೆ ಪರಿಣಾಮ.. ಕುಮಟಾ ತಾಲೂಕಿನ ಸಮುದ್ರ ತೀರದಲ್ಲಿ ಮನೆಗಳಿಗೆ ನುಗ್ಗಿದ ನೀರು, ಬಾವಿ ನೀರೆಲ್ಲ ಉಪ್ಪುಪ್ಪು..

ಕುಮಟಾ; ಅರಬ್ಬಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ತೌಕ್ಟೆ ಚಂಡಮಾರುವು ಸಮುದ್ರದಲ್ಲಿ ತೆರೆಗಳ ನರ್ತನಕ್ಕೆ ಕಾರಣವಾಗಿದೆ. ಶನಿವಾರ ಉತ್ತರಾ ಕನ್ನಡ ಜಿಲ್ಲೆಯ ಕುಮಟಾದ ಕರಾವಳಿಯ ತೀರ ಪ್ರದೇಶದಲ್ಲಿ ಅರಬ್ಬಿ ಸಮುದ್ರದ  ತೆರೆಗಳ ಅಬ್ಬರ ಜೋರಾಗಿದೆ. ಸಮುದ್ರದ ನೀರು ತೀರ ಪ್ರದೇಶಗಳ ಒಳಗೆ ಮುನ್ನುಗ್ಗುತ್ತಿದ್ದು ಅಪಾಯದ ಭೀತಿ ಎದುರಾಗಿದೆ. ಮೀನುಗಾರರಿಗೆ ದೋಣಿ ನಿಲ್ಲಿಸಲು ಸ್ಥಳವಿಲ್ಲದಂತೆ ಸಮುದ್ರವು ತೀರ ಪ್ರದಶವನ್ನು … Continued

ತೌಕ್ಟೆ ಚಂಡಮಾರುತ: ಕರ್ನಾಟಕದ ಕರಾವಳಿಯಲ್ಲಿ ಒಳನುಗ್ಗಿದ ಸಮುದ್ರದ ನೀರು

ಮಂಗಳೂರು/ಕಾರವಾರ/ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತೌಕ್ಟೆ ಚಂಡಮಾರುತದ ಪರಿಣಾಮ ರಾಜ್ಯ ಹಲವು ಕಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮುದ್ರ ತೀರದಲ್ಲಿ ನೀರು ಒಳ ನುಗ್ಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಚಂಡಮಾರುತದ ಗಾಳಿ ವೇಗಕ್ಕೆ ಸಮುದ್ರದ ನೀರು ಒಳನುಗ್ಗಿದ … Continued

ಗವಿಮಠ ಕೋವಿಡ್-19 ಆಸ್ಪತ್ರೆಗೆ ಸಚಿವ ಬಿ.ಸಿ.ಪಾಟೀಲ ಭೇಟಿ : ಶ್ರೀಗಳ ಸೇವೆಗೆ ಶ್ಲಾಘನೆ

ಕೊಪ್ಪಳ: ಇಲ್ಲಿನ ಗವಿಮಠ ಕೋವಿಡ್ ಆಸ್ಪತ್ರೆಗೆ ರಾಜ್ಯ ಕೃಷಿ ಸಚಿವ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ   ಶನಿವಾರ ಭೇಟಿ ನೀಡಿದರು. ಹಾಗೂ ಶ್ರೀಗಳ ಸೇವೆಯನ್ನು ಶ್ಲಾಘಿಸಿದರು. ಜಿಲ್ಲೆಯ ಕೊರೋನಾ ಸೋಂಕಿತರ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ  ಗವಿಸಿದ್ಧೇಶ್ವರ … Continued

ಬಸವಜಯಂತಿಯಂದು ನಾಲ್ಕು ದೇಸಿ ತಳಿ ಹಸು ಬರಮಾಡಿಕೊಂಡ ಎಚ್‌ಡಿಕೆ ಕುಟುಂಬ

ಬೆಂಗಳೂರು: ಬಸವ ಜಯಂತಿಯ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರು ರಾಮ ನಗರದಲ್ಲಿರುವ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿಯವರೇ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ರಾಜಕೀಯ ಮತ್ತು ಕೃಷಿ ದೃಷ್ಟಿಯಿಂದ ರಾಮನಗರ ನನ್ನ ಕರ್ಮಭೂಮಿ. ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ನನ್ನ ‘ಕೃಷಿ ಭೂಮಿ’ಗೆ ಬಸವಜಯಂತಿಯ ಈ … Continued

ತೌಕ್ಟೆ ಚಂಡಮಾರುತ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಭಾರಿ ಮಳೆ…

ಮಂಗಳೂರು/ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತೌಕ್ಟೆ ಚಂಡಮಾರುತದ ಪರಿಣಾಮದಿಂದ ಕೇರಳದಲ ಕೆಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಯಿಂದಲೇ ಆರಂಭವಾಗಿದ್ದು ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗಿನಲ್ಲಿಯೂ ಭರ್ಜರಿ ಮಳೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದಲೇ ಮಳೆ ಆರಂಭವಾಗಿದ್ದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ … Continued

ಕೋಲಾರದ ಮಾಲೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕೆ ಘಟಕ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್‌ನಿಂದ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಜಧಾನಿಗೆ ಹತ್ತಿರದಲ್ಲೇ ಇರುವ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಘಟಕ ಬರುತ್ತಿದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ಈಗಾಗಲೇ ಸರಕಾರ ಎಲ್ಲ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕಿನಲ್ಲಿ ಸ್ವಲ್ಪ ಏರಿಕೆ

ಬೆಂಗಳೂರು: ನಿನ್ನೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತುಸು ಇಳಿಕೆಯಾಗಿದ್ದ ಬೆನ್ನಲ್ಲೇ ಕಳೆದ 24 ತಾಸಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದ್ದು, 41,779 ಜನರಿಗೆ ಕೊರೊನಾ ಸೋಂಕು ತಗುಲಿದ್ದು ದಾಖಲಾಗಿದೆ. ಇದೇ ಸಮಯದಲ್ಲಿ 373 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‍ನಿಂದ ಮೃತಪಟ್ಟವರ ಸಂಖ್ಯೆ 21,085ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಆಸ್ಪತ್ರೆಯಿಂದ 35,879 ಜನರು ಗುಣಮುಖರಾಗಿ ಮನೆಗೆ … Continued