ಮುಂದುವರಿದ ಸಾರಿಗೆ ಮುಷ್ಕರ-ನಿಲ್ಲದ ಹಗ್ಗ ಜಗ್ಗಾಟ

ಬೆಂಗಳೂರು: ಒಂದೆಡೆ ರಾಜ್ಯ ಸರ್ಕಾರ ಮುಷ್ಕರ ನಿಷೇಧಿಸಿ ಆದೇಶಿಸಿ ಕಾನೂನು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದು, ಮತ್ತೊಂದೆಡೆ ಸಾರಿಗೆ ನೌಕರರ ಮುಷ್ಕರಕ್ಕೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆರನೇ ವೇತನ ಜಾರಿ ಆಗುವವರೆಗೂ ಮುಷ್ಕರ ಮುಂದುವರಿಸಲು ಸಾರಿಗೆ ನೌಕರರು ಮುಂದಾಗಿದ್ದಾರೆ. ಆರನೇ ವೇತನ ಜಾರಿ ಅಸಾಧ್ಯ ,ಕೆಲಸಕ್ಕೆ ಹಾಜರಾಗಿ ಎಂದು ಸರ್ಕಾರ ಹೇಳಿದೆ. ಸಾರಿಗೆ ನೌಕರರ ಹೋರಾಟದ ನೇತೃತ್ವ … Continued

ಮಹತ್ವದ ಸುದ್ದಿ..ಸಾರಿಗೆ ಮುಷ್ಕರವನ್ನೇ ನಿಷೇಧಿಸಿದ ಸರ್ಕಾರ; ನೌಕರರ ಮೇಲೆ ಕಾನೂನು ಅಸ್ತ್ರ ..!

ಬೆಂಗಳೂರು:  ಕಳೆದ ಮೂರುದಿನಗಳಿಂದ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿರುದ್ಧ ಸರ್ಕಾರ ಕಾನೂನು ಅಸ್ತ್ರ ಪ್ರಯೋಗಿಸಿದೆ. ಸರ್ಕಾರದ ಒಪ್ಪಂದ ಮನವಿಗೆ ಒಪ್ಪದ ನೌಕರರ ಮುಷ್ಕರವನ್ನೇ ನಿಷೇಧಿಸಿ ಸರ್ಕಾರ ಆದೇಶಿಸಿದೆ. ಕಾನೂನಿನ ಮೂಲಕ ಸಾರಿಗೆ ನೌಕರರ ಮುಷ್ಕರವನ್ನ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು,  ಸಾರ್ವಜನಿಕ ಉಪಯುಕ್ತ ಸೇವೆ ಎಂದು ಪರಿಗಣಿಸಿ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಕೈಗಾರಿಕಾ ವಿವಾದ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ: ಸಚಿವ ಸುರೇಶಕುಮಾರ

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕಳೆದ ವರ್ಷದಂತೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಶಿಕ್ಷಣ ಸಚಿವ ಎಸ್‌.ಸುರೇಶಕುಮಾರ ಹೇಳಿದರು. ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗದಂತೆ ಕ್ರಮ ವಹಿಸಬೇಕೆಂದು ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ ೧೮-೨೦ ವಿದ್ಯಾರ್ಥಿಗಳಷ್ಟೇ ಇರಬೇಕು. ಪ್ರತಿ ಕೊಠಡಿಗೆ … Continued

ಸಚಿವ ಜೋಶಿ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆಯ ಮುಂದೆ ಏಪ್ರಿಲ್ 6ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ತಿಂಗಳ ಹಿಂದೆ ನೈಸರ್ಗಿಕ ವಿಕೋಪದಿಂದಾಗಿ ಧಾರವಾಡ ತಾಲ್ಲೂಕಿನ ಗರಗ ಗ್ರಾಮದಲ್ಲಿ ಮೃತ ಶ್ರೀದೇವಿ ವೀರಪ್ಪ ಕಮ್ಮಾರ್ (31) ಅವರ ಮನೆ ಕುಸಿದಿತ್ತು. … Continued

ಯತ್ನಾಳ ಕುರಿತ ಗೊಂದಲ ಬಗೆಹರಿಸದ ಅರುಣ ಸಿಂಗ್‌ ಹೇಳಿಕೆ

ಬೆಳಗಾವಿ :ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಹೊರ ಹಾಕಿದರೆ ಅವರು ಸ್ವತಂತ್ರರಾಗುತ್ತಾರೆ. ಕೆಲವು ವಿಷಯಗಳನ್ನು ಮಾಧ್ಯಮದವರ ಮುಂದೆ ಹೇಳಲು ಆಗುವುದಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಲ್ಲಿ ಜೀರೋ. ಅವರ ಹೆಸರು ಇಲ್ಲಿ ಪ್ರಸ್ತಾಪ ಬೇಡ ಎಂದು ಪಕ್ಷ ವಿರೋಧಿ … Continued

ಕಸಾಪ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಿದ್ದಪ್ಪ ಹೊಟ್ಟಿ ಅವಿರೋಧ ಆಯ್ಕೆ…ಹ್ಯಾಟ್ರಿಕ್‌ ಗೆಲುವಿನ ಸಾಧನೆ

ಯಾದಗಿರಿ: ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಮೂರನೆಯ ಬಾರಿಗೆ ಸಿದ್ದಪ್ಪ ಹೊಟ್ಟಿಯವರು ಅವಿರೋಧ ಅಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸಿದ್ದಪ್ಪ ಹೊಟ್ಟಿ ಹಾಗೂ ಶ್ರೀಶೈಲ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ದಿನದಂದು ಶ್ರೀಶೈಲ ಪೂಜಾರಿ ಹೊಟ್ಟಿಯವರನ್ನು ಬೆಂಬಲಿಸಿ ಅವರು ತಮ್ಮ ನಾಮ … Continued

ಕರ್ನಾಟದಲ್ಲಿ ಬೆಂಗಳೂರಿನಲ್ಲೇ ಶೇ.72ರಷ್ಟು ಕೊರೊನಾ ಪ್ರಕರಣಗಳು.. 46 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೋನಾ ದೈನಂದಿನ ಸೋಂಕಿನಲ್ಲಿ ದಿಢೀರ್‌ ಹೆಚ್ಚಳವಾಗಿದ್ದು, ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದು ಈ ವರ್ಷದ ಅತಿ ಹೆಚ್ಚು ದೈನದಿನ ಪ್ರಕರಣವಾಗಿದೆ. ಒಟ್ಟು 46 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ … Continued

ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ ಸೋಂಕು

ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ . ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಗೋವಿಂದ ಕಾರಜೋಳ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಏಪ್ರಿಲ್ 10 ಮತ್ತು 11ರಂದು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಪ್ರಚಾರ ನಡೆಸಬೇಕಿತ್ತು. ಆದರೆ, ಕೋವಿಡ್ ಸೋಂಕು … Continued

ಬೆಂಗಳೂರು ಸೇರಿದಂತೆ 8 ನಗರಗಳಿಗೆ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಪ್ರಕಟ..ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ ಕೊರೋನಾ ಸೋಂಕಿತ 8 ನಗರಗಳಲ್ಲಿ ರಾತ್ರಿ ಕರ್ಪ್ಯೂವನ್ನು ಏಪ್ರಿಲ್ 10ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದ್ದು, ಈ ಕುರಿತು ಸರ್ಕಾರ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ರಾಜ್ಯದ 8 ನಗರಗಳಲ್ಲಿ ಅನ್ವಯವಾಗುವಂತ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ವಿನಾಯಿತಿ … Continued

ಕೊವಿಡ್‌ ಕ್ರಮಕ್ಕೆ ಜನರು ಸಹಕರಿಸದಿದ್ದರೆ ಮತ್ತೆ ಬರಲಿದೆ ಕಠಿಣ ಪರಿಸ್ಥಿತಿ: ಬೊಮ್ಮಾಯಿ ಎಚ್ಚರಿಕೆ

ಹುಮ್ನಾಬಾದ್ : ಜನರ ಸಹಕಾರ ಇದ್ದರೆ ಮಾತ್ರ ಲಾಕ್ಡೌನ್ ಮತ್ತು ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಶುಕ್ರವಾರ ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರ್ಕಾರದ ಹೊಣೆಯಲ್ಲ. … Continued