ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ (DB Chandregowda) ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ … Continued

ಹಿಂದೂ ಅನುಸಾರ ಮದುವೆಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ವೈವಾಹಿಕ ಹಕ್ಕುಗಳು ರದ್ದು: ಹೈಕೋರ್ಟ್‌

ಬೆಂಗಳೂರು : ಕೌಟುಂಬಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಪತಿಯಿಂದ ಜೀವನಾಂಶ ಕೋರಿದ್ದ ಪತ್ನಿಯು ಹಿಂದೂ ಧರ್ಮದ ಅನುಸಾರ ಮದುವೆಯಾಗಿ ನಂತರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿನ್ನೆಲೆಯಲ್ಲಿ ಆಕೆಯ ಎಲ್ಲ ಹಕ್ಕುಗಳು ರದ್ದಾಗಿವೆ ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ತನ್ನ ಆದೇಶದಲ್ಲಿ ತಿಳಿಸಿದೆ. ಪತ್ನಿಗೆ 4 ಲಕ್ಷ ರೂಪಾಯಿ ಪಾವತಿಸುವಂತೆ ಬೆಂಗಳೂರಿನ ಅಧೀನ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ಟ್ರಫ್‌ ನಿರ್ಮಾಣವಾಗಿದೆ. ಹೀಗಾಗಿ ಅದರ ಪ್ರಭಾವದಿಂದಾಗಿ ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವಡೆ ಜೋರಾಗಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. … Continued

7ನೇ ವೇತನ ಆಯೋಗದ ಅವಧಿ ಮತ್ತೆ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು : 7ನೇ ರಾಜ್ಯ ವೇತನ ಆಯೋಗದ (7th State Pay Commission) ಕಾಲಾವಧಿಯನ್ನು ವಿಸ್ತರಿಸಲಾಗಿದೆ. 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್‌ 15ರ ವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ … Continued

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ … Continued

ಪ್ರತಿಮಾ ಕೊಲೆ ಪ್ರಕರಣ: ಆರೋಪಿ ಕಿರಣ್ ನವೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣನನ್ನು ಬೆಂಗಳೂರಿನ 2ನೇ ಎಸಿಎಂಎಂ (ACMM) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಆರೋಪಿಯನ್ನು ನವೆಂಬರ್ 15ರ ವರೆಗೆ ಪೊಲೀಸ್ ಕಸ್ಟಡಿ ನೀಡಿ ಆದೇಶಿಸಿದೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣನನ್ನು ಬೆಂಗಳೂರು ಪೊಲೀಸರು ಬಂಧಿಸಿ … Continued

ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ. ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, … Continued

ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, … Continued

ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರು ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆಗ್ನೇಯ ಬೆಂಗಳೂರಿನ ನೈಸ್ ರಸ್ತೆಯ ಚಿಕ್ಕತೋಗೂರಿನ ಲಕ್ಷ್ಮಿ ದೇವಿ ದೇವಸ್ಥಾನದ ಬಳಿಯ ಮನೆಯ ಪಕ್ಕದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಶನಿವಾರ (ನವೆಂಬರ್ 4) ರ ಸಂಜೆ 7:40ರ ಸುಮಾರಿಗೆ ಚಿರತೆ ಮನೆ ಕಂಪೌಂಡ್​​ ಒಳಗೆ … Continued

ಬೆಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ(37) ಎಂಬವರು ಕೊಲೆಯಾದ ಅಧಿಕಾರಿ. ಇವರು ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ … Continued