ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 12 ಕೊರೊನಾ ರೋಗಿಗಳು ಸೇರಿ 24 ಸಾವು..!

ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಆಕ್ಸಿಜನ್ ಸಿಗದೇ ಇರುವುದು ಹಾಗೂ ಇತರೆ ಕಾರಣಗಳಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲೇ 24 ರೋಗಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ ಆಮಲಜನಕ ಸಿಗದೆ 12 ಜನರು ಮೃತಪಟ್ಟಿದ್ದಾರೆ ಹಾಗೂ ಇತರ ಕಾರಣಗಳಿಂದ 12 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ … Continued

ಕರ್ನಾಟಕದಲ್ಲಿ ಭಾನುವಾರವೂ ನಲವತ್ತು ಸಾವಿರ ಕೆಳಗೆ ದಾಖಲಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕಿತರ ಸಂಖ್ಯೆ ನಲವತ್ತು ಸಾವಿರ ಒಳಗೆ ಬಂದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 37,733 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಹಾಗೂ ಇದೇ ವೇಳೆ 21,149 ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟು 1164398 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ, 421436 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 217 ಮಂದಿ ಮೃತಪಟ್ಟಿದ್ದಾರೆ. … Continued

ಫೋಟೋ ಫಿನಿಶ್‌ನಲ್ಲಿ ಬೆಳಗಾವಿಯಲ್ಲಿ ಗೆದ್ದ ಬಿಜೆಪಿಯ ಮಂಗಲಾ ಅಂಗಡಿ

ಬೆಳಗಾವಿ: ಅತ್ಯಂತ ತುರುಸಿನ ಸ್ಪರ್ಧೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿ. ಸುರೇಶ್​ ಅಂಗಡಿ ಪತ್ನಿ ಮಂಗಲಾ ಅಂಗಡಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಸೋಲುಂಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಏ.17ರಂದು ಮತದಾನವಾಗಿತ್ತು. ಮತ ಎಣಿಕೆಯ ಆರಂಭದಲ್ಲಿ ಸತೀಶ್​ ಜಾರಕಿಹೊಳಿ ಆರಂಭಿಕ ಮುನ್ನಡೆ ಸಾಧಿಸಿದ್ದರಾದರೂ ತದನಂತರ  … Continued

ಮಸ್ಕಿಯಲ್ಲಿ 30 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿ..!

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಸನಗೌಡ ಪಾಟೀಲ್ ತುರುವಿಹಾಳ 30,666 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ಪಾಟೀಲ್ ತುರುವಿಹಾಳ 86,222 ಮತ ಪಡೆದಿದ್ದರೆ ಬಿಜೆಪಿಯ ಪ್ರತಾಪ ಗೌಡ ಪಾಟೀಲ 55, 581 ಮತಗಳನ್ನುಪಡೆದು ಸೋಲುಂಡಿದ್ದಾರೆ. ಮಸ್ಕಿ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಏ.17ರಂದು ಮತದಾನ … Continued

ಬಸವ ಕಲ್ಯಾಣ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು

ಬೀದರ್​: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ​ 20,904 ಮತಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಅವರು ಒಟ್ಟು 70,556 ಮತಗಳಿಸಿದ್ದಾರೆ. 50108 ಮತಗಳನ್ನು ಪಡೆದ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಶಾಸಕ ದಿ. ಬಿ.ನಾರಾಯಣರಾವ್​ರ​ ಪತ್ನಿ ಮಾಲಾ(ಮಲ್ಲಮ್ಮ) 2ನೇ ಸ್ಥಾನ ಪಡೆದು ಪರಾಭವಗೊಂಡಿದ್ದಾರೆ. ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ … Continued

ಅರ್ಧದಲ್ಲೇ ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ..!

ರಾಯಚೂರು : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಸ್ಕಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆಯ 16 ಸುತ್ತುಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಮತ ಎಣಿಕೆ ಕೆಂದ್ರದಿಂದ ಹೊರ ನಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪಗೌಡ ಪಾಟೀಲ್, ಮಸ್ಕಿಯಲ್ಲಿ ನಾನು ಸೋಲುವುದಿಲ್ಲ ಎಂದು ಭಾವಿಸಿದ್ದೆ. ಆದರೆ ಜನ ಹೊಸಬರನ್ನು … Continued

ಕರ್ನಾಟಕದ ಕೆಲವೆಡೆ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 4ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, … Continued

ಹಂಚಿನಾಳ: ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ :ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಗುಡುಮಕೇರಿ ಗ್ರಾಮದವರಾದ ಇವರಿಬ್ಬರೂ ಕುರಿಗಾಹಿಗಳಾಗಿದ್ದು ಕುರಿ ಮೇಯಿಸಲು ಹಂಚಿನಾಳಕ್ಕೆ ಹೋದಾಗ ಸಂಜೆ ಸುಮಾರಿಗೆ ಭಾರಿ ಮಳೆ, ಗಾಳಿ ಆರ್ಭಟಿಸಿದೆ. ಆ ಸಂದರ್ಭದಲ್ಲಿ ಸಿಡಿಲು ಬಡಿತಕ್ಕೆ ಇವರಿಬ್ಬರು ಮೃತಪಟ್ಟಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ತೀವ್ರ ಶೋಕ ವ್ಯಕ್ತಪಡಿಸಿದ್ದು ಸರಕಾರದಿಂದ ಈ … Continued

ಮಹತ್ವದ ನಿರ್ಧಾರ.. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ, ಮೇ 2ರಿಂದಲೇ ಜಾರಿಗೆ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಆಗುತ್ತಿರುವ ನೂಕು ನುಗ್ಗಲನ್ನು ತಪ್ಪಿಸಲು ರಾಜ್ಯಸರ್ಕಾರ ಶನಿವಾರ ಸಂಜೆ ಹೊಸ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.ಈ ಮಾರ್ಗಸೂಚಿಗಳು ಭಾನುವಾರದಿಂದಲೇ (ಮೇ 2ರಿಂದಲೇ )ಜಾರಿಗೆ ಬರಲಿದೆ. ಈ ಹೊಸ ಮಾರ್ಗಸೂಚಿ ಅನ್ವಯ ರಾಜ್ಯಾದ್ಯಂತ ಸಂತೆ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಲಿದೆ. ಇದಕ್ಕೆ ಬದಲಾಗಿ ಹೊಸ … Continued

ಕಲಬುರಗಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೋವಿಡ್‌ ರೋಗಿಗಳು ಸಾವು..?!

ಕಲಬುರಗಿ : ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ನಾಲ್ವರು ಕೊರೊನಾ ಸೋಂಕಿತ ರೋಗಿಗಳು ಮೃತಪಟ್ಟ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದ ವರದಿಯಾಗಿದೆ. ಕಲಬುರಗಿ ನಗರದ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ವೆಂಟಿಲೇಟರ್ ನಲ್ಲಿದ್ದ ನಾಲ್ವರು ಕೊರೊನಾ ಸೋಂಕಿತ ರೋಗಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಆಸ್ಪತ್ರೆ ಸಿಬ್ಬಂದಿಗಳು … Continued