ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ : ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಬೇಟೆಗಾರ ಸಾವಿಗೀಡಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ವರದಿ  ಪ್ರಕಾರ,  ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮದ್ದೂರು … Continued

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ವಿಶೇಷ ಬಸ್‌ ಓಡಾಟ; ಟಿಕೆಟ್‌ ಮುಂಗಡ ಬುಕ್ಕಿಂಗ್‌ಗೆ ರಿಯಾಯಿತಿ

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್ಸುಗಳನ್ನು ಓಡಿಸಲಿದೆ. ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್‌ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. … Continued

ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲಗೈದ ಮೈದುನ

ಹಾವೇರಿ: ತನ್ನ ಅತ್ತಿಗೆ ಮತ್ತು ಇಬ್ಬರು ಮಕ್ಕಳನ್ನು ಮೈದುನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕು ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿಗಳಾದ ಗೀತಾ ಮರಿಗೌಡ (35), ಇವರ ಮಕ್ಕಳಾದ ಅಕುಲ್(10) ಮತ್ತು ಅಂಕಿತಾ (7) ಕೊಲೆಯಾದವರು ಎಂದು ಗುರುತಿಸಲಾಗಿದೆ. ಆರೋಪಿ ಮೈದುನ ಕುಮಾರ ಗೌಡ ಮರಿಗೌಡ (32) ಪರಾರಿಯಾಗಿದ್ದಾನೆ. … Continued

ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ನ್ನಾಗಿ ತಮ್ಮ ಅವಧಿ ನವೆಂಬರ್ 24ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ಹಿಂದಿನ ಕಾಂತರಾಜು ಆಯೋಗದ ವರದಿಯನ್ನು … Continued

ಡಿಕೆ ಶಿವಕುಮಾರ ನಾಳೆಯೇ ಸಿಎಂ ಆಗೋದಾದ್ರೆ ಅವ್ರಿಗೆ 19 ಜೆಡಿಎಸ್ ಶಾಸಕರ ಬೆಂಬಲ: ಆಫರ್‌ ನೀಡಿದ ಕುಮಾರಸ್ವಾಮಿ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ​ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ ಮಾಡಿದ್ದಾರೆ…. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಮುಖ್ಯಮಂತ್ರಿ ಆಗುವುದಾದರೆ ಆದರೆ ನಾವು ಬೆಂಬಲ ನೀಡುತ್ತೇವೆ ಎಂದರು. ಸುಮ್ಮನೆ ಜೆಡಿಎಸ್‌ನಿಂದ ಐದು ಜನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಜಾತಿ ನಿಂದನೆ ಆರೋಪ; ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಜಾತಿ ನಿಂದನೆ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪುನೀತ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮತ್ತು ಅವಾಚ್ಚ ಶಬ್ದಗಳ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಹರೀಶ ಭೈರಪ್ಪ ಎಂಬವರು ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ … Continued

ತುಲಾಭಾರ ಮಾಡುವಾಗ ಪೇಜಾವರ ಶ್ರೀಗಳ ಮೇಲೆ ಕಳಚಿ ಬಿದ್ದ ತಕ್ಕಡಿ

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಸಣ್ಣ ಅವಘಡ ನಡೆದಿದೆ. ತುಲಾಭಾರ ನಡೆಯುತ್ತಿದ್ದ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳಿಗೆ ಸಣ್ಣ ಗಾಯವಾಗಿದೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued

ಜಾತಿ ಗಣತಿ ವರದಿ ತಿರಸ್ಕರಿಸಲು ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾದ ‘ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ. ಎಚ್.ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ಸಾಮಾಜಿಕ, ಆರ್ಥಿಕ ಸಮೀಕ್ಷೆ ಲೋಪ – ದೋಷಗಳಿಂದ ಕೂಡಿದೆ. ಶಂಕಾಸ್ಪದ ಮತ್ತು ತಪ್ಪು ಮಾಹಿತಿಯಿಂದ ಕೂಡಿರುವ ವರದಿ ಅಂಗೀಕರಿಸಿದರೆ ಒಕ್ಕಲಿಗ ಸಮುದಾಯಕ್ಕೆ … Continued