ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣ: ಬೆಂಗಳೂರು ಈಗ ದೇಶದಲ್ಲೇ ನಂ.1… !!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಉಲ್ಬಣ ಮುಂದುವರೆದಿದೆ. ಈಗ ಬೆಂಗಳೂರು ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿತ್ತು. ಹೀಗಾಗಿ ದೇಶದಲ್ಲೇ ಅತೀ … Continued

ಮಹತ್ವದ ಸುದ್ದಿ … ಏಪ್ರಿಲ್ 28ರಿಂದ ಕಾಲೇಜುಗಳ ಹಂತದಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ

ಬೆಂಗಳೂರು: ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಕಾಲೇಜುಗಳ ಹಂತದಲ್ಲೇ ನಡೆಸಲು ಪಿಯು ಬೋರ್ಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ, ದೇಹದ ಉಷ್ಣಾಂಶ ಪರಿಶೀಲಿಸಿ ಒಳಗೆ ಪ್ರವೇಶ ನೀಡಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಏಪ್ರಿಲ್ 28ರಿಂದ ಮೇ 18ರ ವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬಳಿಕ … Continued

ಬೆಂಗಳೂರು ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಸಾಲುಮರದ ತಿಮ್ಮಕ್ಕ..!

ಬೆಂಗಳೂರು: ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ತಿಮ್ಮಕ್ಕ ಮತ್ತೆ ಬೆನ್ನು ನೋವಿಗೆ ಒಳಗಾಗಿದ್ದು, ನಾನ್ ಕೋವಿಡ್ ಹಾಸಿಗೆಗಾಗಿ ಅವರು ಬೆಂಗಳೂರಿನಲ್ಲಿ ಪರದಾಡಬೇಕಾಯಿತು. ಕಳೆದ ಡಿಸೆಂಬರ್‌ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೆ ಒಳಗಾಗಿದ್ದ ಅವರಿಗೆ ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ತೀವ್ರ ಬೆನ್ನು ನೋವು … Continued

ಕರ್ನಾಟಕದಲ್ಲಿ ಶುಕ್ರವಾರ 27 ಸಾವಿರದ ಹತ್ತಿರವೇ ಬಂದ ದೈನಂದಿನ ಕೊರೊನಾ ಸೋಂಕು.. 190 ಸಾವು..

ಬೆಂಗಳೂರು : ರಾಜ್ಯದಲ್ಲಿ 24 ಗಂಟೆಯಲ್ಲಿ 26,962 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 190 ಜನ ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1274959 ಕ್ಕೆ ಏರಿಕೆಯಾಗಿದೆ. ಹಾಗೂ ಸಕ್ರಿಯ ಪ್ರಕರಣಗಳು … Continued

ಕೋವಿಡ್‌ ಹಿನ್ನೆಲೆ: ಶಕ್ತಿಪೀಠ ಸನ್ನತಿ ಚಂದ್ರಲಾ ಪರಮೇಶ್ವರಿ ಜಾತ್ರೆ ರದ್ದು

ಯಾದಗಿರಿ: ಕೊರೊನಾ ಎರಡನೆ ಅಲೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಿಸಿದ್ಧ ಸನ್ನತಿಯ ಶಕ್ತಿ ಪೀಠ ಶ್ರೀ ಚಂದ್ರಲಾ ಪರಮೇಶ್ವರಿ ಜಾತ್ರೆ ರದ್ದು ಮಾಡಲಾಗಿದೆ. ಏಪ್ರಿಲ್‌ 26 ರಿಂದ ಪ್ರರಂಭಗೊಂಡು ಮೇ 4ರ ವರೆಗೆ ನಡೆಯಬೇಕಿದ್ದ ಜಾತ್ರೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದರು. ಕೋವಿಡ್-19 ವೈರಸ್ ಹೆಚ್ಚಾಗುತ್ತಿರುವ ಕಾರಣ ಗುಂಪು … Continued

ಪ್ರಧಾನಿ ಮೋದಿ ಮುಂದೆ ಆಮ್ಲಜನಕ, ​ರೆಮ್ಡಿಸಿವಿರ್ ಬೇಡಿಕೆ ಇಟ್ಟ ಸಿಎಂ ಬಿಎಸ್‌ವೈ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಆಮ್ಲಜನಕದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದೇ ವಿಷಯವಾಗಿ ಪ್ರಧಾನಿ ಮೋದಿ ಶುಕ್ರವಾರ ಕೋವಿಡ್ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಕರ್ನಾಟಕಕ್ಕೆ 1471 ಟನ್‌ ಆಮ್ಲಜನಕ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ … Continued

 ವೀಕೆಂಡ್‌ ಕಪ್ಫ್ಯೂ ಜಾರಿ: ಗೊಂದಲಕ್ಕೆ ತೆರೆ ಎಳೆದ  ಸಚಿವ ಅಶೋಕ  

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರವು ಮೇ 4ರ ವರೆಗೆ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಜಾರಿ ಮಾಡಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ವೀಕೆಂಡ್ ಕರ್ಫ್ಯೂ ಇಂದು (ಶುಕ್ರವಾರ) ರಾತ್ರಿಯಿಂದಲೇ ಜಾರಿಗೆ ಬರಲಿದ್ದು ಸೋಮವಾರ ಬೆಳಿಗ್ಗೆ 6 ರ ವರೆಗೂ ಇರಲಿದೆ. ಹೀಗಾಗಿ ನಾಳೆ ಮತ್ತು ನಾಡಿದ್ದು ಯಾವ್ಯಾವುದು ಲಭ್ಯವಿರುತ್ತದೆ … Continued

ಮಾಜಿ ಸಚಿವ ದೇಶಪಾಂಡೆಗೆ ಕೊರೊನಾ ಸೋಂಕು

ಬೆಂಗಳೂರು : ಮಾಜಿ ಸಚಿವ ಆರ್. ವಿ. ದೇಶಪಾಂಡೆಗೂ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರು ಮನೆ ಪ್ರತ್ಯೇಕತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸ್ವತಃ ಟ್ವಿಟ್ ಮಾಡಿರುವ ಅವರು, ನನಗೂ ಕೊರೊನಾ ಸೊಂಕು ತಗುಲಿದೆ ಎಂಬುದಾಗಿ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಕಲೆ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು   ಕೊರೊನಾ ಸೋಂಕಿನ   ಪರೀಕ್ಷೆಗೆ … Continued

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳಿ: ಡಿಸಿಎಂ

ಬೆಂಗಳೂರು: ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಕುರಿತು ಗುರುವಾರ ಮಾತನಾಡಿರುವ ಅವರು, “ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್, ಡಿಪ್ಲೊಮಾ, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ … Continued

ಬೆಂಗಳೂರು: ಸಚಿವರಿಂದ ಕೋವಿಡ್ ಸ್ಮಶಾನ ಸಿದ್ಧತೆ ಪರಿಶೀಲನೆ

ಬೆಂಗಳೂರು: ನಗರದ ಹೊರ ವಲಯದ ತಾವರೆಕೆರೆ ಗ್ರಾಮದ ಬಳಿ ಕೋವಿಡ್ ಸೋಂಕು ಪೀಡಿತ ಶವಗಳ ಅಂತ್ಯಸಂಸ್ಕಾರಕ್ಕೆ ನಿರ್ಮಿಸಲಾಗಿರುವ ಸ್ಮಶಾನದ ಸಿದ್ಧತಾ ಕಾರ್ಯಗಳ ಕುರಿತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಜಂಟಿಯಾಗಿ ಪರಿಶೀಲನೆ ನಡೆಸಿದರು. ಗುರುವಾರ ಸಂಜೆ ಅವರು ತಾವರೆಕೆರೆಯ ಸ್ಮಶಾನಕ್ಕೆ ಭೇಟಿ … Continued