ಕೊರೊನಾ ಹೆಚ್ಚಳ: ಕರ್ನಾಟಕದಲ್ಲಿ ಲಾಕ್‌ಡೌನ್‌ ಸದ್ಯಕ್ಕಿಲ್ಲ , ಆದರೆ ಕಠಿಣ ನಿಯಮ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್​ಡೌನ್​, ಸೆಮಿಲಾಕ್​ಡೌನ್​, … Continued

ನಿಗದಿತ ಸಮಯಕ್ಕೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡುವುದಿಲ್ಲ ಇಲ್ಲ. ನಿಗದಿತ ಸಮಯಕ್ಕೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಶಾಸಕ ಸುನೀಲುಕುಮಾರ ಅವರು ವಿಷಯ ಪ್ರಸ್ತಾಪಿಸಿದ ವೇಳೆ ಅವರು ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು … Continued

ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆ: ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದ ಮುತಾಲಿಕ್‌

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ನಾನು ಟಿಕೆಟ್ ಆಕಾಂಕ್ಷಿ ಆಆಗಿದ್ದೇನೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್‌ ಹೇಳಿದರು. ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದರು. ನನಗೀಗ … Continued

ಕೇಂದ್ರ ಸರ್ಕಾರದಿಂದ ಹೊಸ ಅಧಿಸೂಚನೆ: ಕೆಲವು ಕೆಲಸಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ

ಆಧಾರ್ ಕಾರ್ಡ್ʼಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಲವು ಕೆಲಸಗಳಿಗೆ ಆಧಾರ್ ಕಡ್ಡಾಯ ಎನ್ನುವ ನಿಯಮದಿಂದ ಹಿಂತೆಗೆದುಕೊಂಡಿದೆ. ಈಗ ಈ ಹೊಸ ನಿಯಮದ ಪ್ರಕಾರ, ಜೀವನ ಪ್ರಮಾಣ ಪತ್ರಕ್ಕೆ ಆಧಾರ್ ಕಡ್ಡಾಯವಲ್ಲ. ಪಿಂಚಣಿದಾರರು ಇನ್ಮುಂದೆ ಆಧಾರ್ ಕಾರ್ಡ್ ತೋರಿಸಿ ತಾವು ಬದುಕಿರುವ ಬಗ್ಗೆ ಪುರಾವೆಗಳನ್ನ ನೀಡುವುದು ಕಡ್ಡಾಯವಲ್ಲ. ಬದಲಾಗಿ ಅದು ಸ್ವಯಂ ಪ್ರೇರಿತ. … Continued

ರೈತ ಕಾಯ್ದೆಗಳಿಂದ ಕರ್ನಾಟಕ ಹಿಂದೆ ಸರಿಯವುದಿಲ್ಲ

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದ್ದು, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ರಾಜ್ಯ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ … Continued

ಲಲಿತಾ ನಾಯಕಗೆ ಬೆದರಿಕೆ ಪತ್ರ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವರಾದ ಬಿ. ಟಿ. ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಕಠಿಣ ಕ್ರಮ‌ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸಂಬಂಧ ಲಲಿತಾ … Continued

ಮಂತ್ರಿಗಿರಿ ಸಿಗದಿದ್ದಕ್ಕೆ ವಿಶ್ವನಾಥ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ: ಈಶ್ವರಪ್ಪ

ಶಿವಮೊಗ್ಗ: ಸಚಿವ ಸ್ಥಾನ ದೊರೆಯದ ಕಾರಣಕ್ಕೆ ಎಚ್.ವಿಶ್ವನಾಥ ಬಿಜೆಪಿ ಸೇರಿದ್ದರ ಕುರಿತು ಅಸಮಾಧಾನವಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ತಪ್ಪು ಮಾಡಿದ್ದರೆ ಅದನ್ನು ತಿಳಿಸಲಿ, ಅದನ್ನು ಬಿಟ್ಟು ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಸರಿಯಿದ್ದರೆ ಆ ಪಕ್ಷಗಳನ್ನು ಯಾಕೆ ಬಿಟ್ಟು … Continued

ಕರ್ನಾಟಕದಲ್ಲಿ 1715 ದೈನಂದಿನ ಕೊರೊನಾ ಸೋಂಕು.. !

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1715 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಇಬ್ಬರು ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 1048 ಸೋಂಕಿತರು ಒಟ್ಟಾರೆ ಸಾವಿನ ಸಂಖ್ಯೆ 12,434ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,493ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 24 … Continued

ಕೇಂದ್ರ ಸರ್ಕಾರ 22 ಭಾಷೆಗಳಿಗೆ ಸಮಾನ ಸ್ಥಾನಮಾನ ನೀಡಬೇಕು:ನಾಗಾಭರಣ

ಯಾದಗಿರಿ: ಕೇಂದ್ರ ಸರ್ಕಾರ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಹೇಳಿದಂತೆ 22 ಭಾಷೆಗಳಿಗೂ ಸಮಾನ ಅವಕಾಶ ಕೊಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ದೇಶದಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಿಗೆ ಅಗ್ರ ಸ್ಥಾನ ಕೊಡಲಾಗಿದೆ. ಅದೇ ತಮಿಳು ಭಾಷೆ ಬಿ.ಕೆಟಗೆರಿಯಲ್ಲಿ ಬರುವಲ್ಲಿ ಯಶಸ್ವಿಯಾಗಿದೆ. ಆದರೆ … Continued

ನಾಯಿ ಬೇಟೆಗೆ ಬಂದ ಚಿರತೆ ಮನೆಯಲ್ಲಿ ಬಂಧಿ

ಉಡುಪಿ: ನಾಯಿ ಹಿಡಿಯಲು ಬಂದ ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿ ತಾನೇ ಬಧಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡದಿದೆ. ಬ್ರಹ್ಮಾವರ ಬಳಿಯ ನೈಲಾಡಿಯಲ್ಲಿ ಈ ಘಟನೆ ನಡೆದಿದೆ. ಚಿರತೆ ಕುಟುಂಬದ ಸಾಕು ನಾಯಿ ಹಿಡಿಯಲು ಹೊರಟಿತ್ತು, ಆದರೆ ಅದು ತಪ್ಪಿಸಿಕೊಂಡು ಮನೆಯೊಳಗೆ ಓಡಿ ಹೋಯಿತು.ಚಿರತೆಯೂ ನಾಯಿಯನ್ನು ಹಿಂಬಾಲಿಸಿತು.ಶಬ್ದದಿಂದಾಗಿ ಎಚ್ಚರಗೊಂಡ ಮನೆಯ ಮಾಲೀಕರು ನೋಡಿದರೆ ಮನೆಯೊಳಗೆ ಚಿರತೆ ನುಗ್ಗಿದೆ. … Continued