ಮತ್ತೆ ಏರಿಕೆ, ಕರ್ನಾಟಕದಲ್ಲಿ ದಿನವೊಂದಕ್ಕೆ 934 ಮಂದಿಗೆ ಕೊರೊನಾ ಸೋಂಕು

  ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ 934 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 609 ಮಂದಿ ಅಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ ಮೂವರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,354 ಆಗಿದೆ.ರಾಜಧಾನಿ ಬೆಂಗಳೂರಿನಲ್ಲಿ 628 ಮಂದಿಗೆ … Continued

ಕಾಲೇಜಿಗೆ ರಜೆ ಎಂಬುದು ನಕಲಿ ಸುತ್ತೋಲೆ, ನಂಬಬೇಡಿ: ಸ್ಪಷ್ಟನೆ

ಬೆಂಗಳೂರು:ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ೧೫ ದಿನ ಕಾಲೇಜುಗಳಿಗೆ ರಜೆ ಎಂದು ಕಿಡಿಗೇಡಿಗಳು ನಕಲಿ ಸುತ್ತೋಲೆ ಹೊರಡಿಸಿದ್ದು, ಇದನ್ನು ವಿದ್ಯಾರ್ಥಿಗಳು ನಂಬಬಾರದು ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆ ಹೆಸರಿನಲ್ಲಿ ಕಿಡಿಗೇಡಿಗಳು ‘ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವೈರಸ್ ರೋಗವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಲಾಖಾ ವ್ಯಾಪ್ತಿಯ … Continued

ಲಾಕ್‌ಡೌನ್‌ ಪ್ರಸ್ತಾಪವಿಲ್ಲ, ಆದ್ರೆ ಜನ ನಿಯಮ ಪಾಲಿಸದಿದ್ರೆ ಅನಿವಾರ್ಯವಾಗಬಹುದು:ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್‌ಡೌನ್ ಮಾಡುವ ಚಿಂತನೆ ಇಲ್ಲ ಆದರೆ, ಜನ ಸರ್ಕಾರದ ನಿಯಮ ಪಾಲಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಸಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಜನ ಎಚ್ಚರವಹಿಸಬೇಕು, ಇಲ್ಲದಿದ್ದರೆ ಲಾಕ್‌ಡೌನ್ … Continued

ಡಿಸಿಇಟಿ ಪರೀಕ್ಷೆ :ಗೊಂದಲಕ್ಕೆ ಡಿಸಿಎಂ ಸ್ಪಷ್ಟನೆ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಾದ ಎಂಜಿನಿಯರಿಂಗ್(ಲ್ಯಾಟರಲ್ ಪ್ರವೇಶಾತಿ ಸೇರಿದಂತೆ ಡಿಸಿಇಟಿ) ಮೆಡಿಕಲ್ ಅಗ್ರಿಕಲ್ಚರಲ್, ನರ್ಸಿಂಗ್, ಪ್ಯಾರಾಮೆಡಿಕಲ್, ಫಾರ್ಮಸಿ ಮುಂತಾದ ಕೋರ್ಸ್‍ಗಳಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ದತ್ತಾಂಶವನ್ನು ಕೆಇಎಯಿಂದ ಪಡೆಯಬೇಕೆಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸೂಚಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮೂಲಕ ವಿವರ ನೀಡಿರುವ ಅವರು, ಜುಲೈ, ಆಗಸ್ಟ್ 2021ರಲ್ಲಿ ನಡೆಯುವ ಡಿಸಿಇಟಿ ಪರೀಕ್ಷೆಯ … Continued

ಸಿಡಿ ಪ್ರಕರಣ: ಯುವತಿ ಸಂಬಂಧಿಕರ ಮನೆಗೆ ನೊಟೀಸ್‌ ಅಂಟಿಸಿದ ಪೊಲೀಸರು

ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಸಂತ್ರಸ್ತೆಯ ಅಜ್ಜಿಮನೆ ವಿಜಯಪುರ  ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಇರುವುದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಈ ಮನೆಗೆ ಬೆಂಗಳೂರು ಕಬ್ಬನ್‌ಪಾರ್ಕ್‌ ಪೊಲೀಸರು ನೊಟೀಸ್‌ ಅಂಟಿಸಿದ್ದಾರೆ. ಮನೆಗೆ ಬೀಗ ಹಾಕಿರುವುವದರಿಂದ ಮನೆಯ ಬಾಗಿಲಿಗೆ ನೊಟೀಸ್‌ ಅಂಟಿಸಲಾಗಿದೆ. ಠಾಣೆಯ ಇಬ್ಬರು ಅಧಿಕಾರಿಗಳು ನೊಟೀಸ್‌ ಅಂಟಿಸಿದ್ದು, ನೊಟೀಸ್‌ ಮುಟ್ಟಿದ … Continued

ಸಿಡಿ ಪ್ರಕರಣ: ಮಹಾನ್‌ ನಾಯಕ ಅಂದ್ರೆ ತಾವೇ ಎಂದು ಡಿಕೆಶಿ ಯಾಕೆ ತಿಳ್ಕೊಂಡ್ರೋ ಗೊತ್ತಿಲ್ಲ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರ ಹೆಸರು ಹೇಗೆ ಬಂತೋ ನನಗೆ ಗೊತ್ತಿಲ್ಲ. ರಮೇಶ ಜಾರಕಿಹೊಳಿ ಮಹಾನಾಯಕರು ಎಂದು ಹೇಳಿದ್ದನ್ನು ಡಿ.ಕೆ. ಶಿವಕುಮಾರ ತಮಗೇಕೆ ಅನ್ವಯಿಸಿಕೊಂಡರೋ ಎಂಬದೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ … Continued

ಜೆಡಿಎಸ್‌ಗೆ ಜಿಟಿಡಿಗೆ ಮತ್ತೆ ಸ್ವಾಗತವಿಲ್ಲ:ಎಚ್‌ಡಿಕೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರನ್ನು ಮತ್ತೆ ಜೆಡಿಎಸ್ಗೆ ಕರೆತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶಾಸಕ ಜಿ.ಟಿ. ದೇವೇಗೌಡರು ನಮ್ಮಿಂದ ದೂರ ಹೋಗಿದ್ದಾರೆ. ಜೆಡಿಎಸ್ ಶಾಸಕ ಸಾರಾ ಮಹೇಶ್ ಕಾರಣಕ್ಕೆ ದೂರವಾಗುತ್ತಿದ್ದೇನೆ ಎಂದು ಹೇಳಿದ್ದರು. ಜಿ.ಟಿ. ದೇವೇಗೌಡರಿಗೆ ಮಹೇಶ್ ಅವರು ಅಂತಹದ್ದೇನು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನನ್ನ … Continued

ಡಿಕೆಶಿ ಹೇಳಿಕೆಗೆ ಅವರೇ ಉತ್ತರ ಕೊಡಬೇಕು: ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆ ಬಗ್ಗೆ ಡಿಕೆಶಿ ವಿವರಣೆ ಕೊಡಬೇಕೇ ಹೊರತು ಅದಕ್ಕೆ ನಾನೇನು ಹೇಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿಡಿ ಪ್ರಕರಣದಲ್ಲಿ ಇನ್ನೊಬ್ಬರನ್ನು ಸಿಲುಕಿಸುವ ವಿಚಾರ ನನಗೆ ಗೊತ್ತಿಲ್ಲ. ಅದು ಡಿ.ಕೆ.ಶಿವಕುಮಾರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೆ … Continued

ರಾಜ್ಯದಲ್ಲಿ ಸಿಡಿ ತಯಾರಿಸುವ ೨ ಫ್ಯಾಕ್ಟರಿಗಳಿವೆ: ಯತ್ನಾಳ

ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಫ್ಯಾಕ್ಟರಿಗಳಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಸಿಡಿ ತಯಾರಿಸುವ ಇಬ್ಬರು ನಿಷ್ಣಾತ ವ್ಯಕ್ತಿಗಳಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಡಿ ತಯಾರಿಕೆಯಲ್ಲಿ ಪಳಗಿದ ಮುಖಂಡರು ಯಾರು ಎಂಬುದನ್ನು ಬಹಿರಂಗಗೊಳಿಸುವುದಿಲ್ಲ. ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಕೈವಾಡವಿದೆ ಎಂಬ ಎಸ್‌.ಟಿ.ಸೋಮಶೇಖರ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ, ಸೋಮಶೇಖರ … Continued

ಮೀಸಲಾತಿ ಬಗ್ಗೆ ಕೂಲಂಕುಷವಾಗಿ ಪರಾಮರ್ಶಿಸಿ ಸುಪ್ರೀಂ ಕೋರ್ಟಿಗೆ ವರದಿ:ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಸ್ ಸಿ/ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ  ರಕ್ಷಣೆ ಮಾಡುವ ಕುರಿತು ಕೂಲಂಕುಷವಾಗಿ ಪರಾಮರ್ಶೆ ನಡೆಸಿ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ. ೫೦ಕ್ಕಿಂತಲೂ ಹೆಚ್ಚು ಮಾಡಿದೆ. ಸುಪ್ರೀಂಕೋರ್ಟ್ ಈ  ಪ್ರಕರಣದ … Continued