ಕರ್ನಾಟಕ: ೬೨೨ ಕೊರೊನಾ ಸೋಂಕು, ೩ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾಕಳೆದ ೨೪ ತಾಸಿನಲ್ಲಿ 622 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,362ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ 389 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ … Continued

ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು … Continued

ನನ್ನ ಬಳಿ ಯಾವುದೇ ಜನಪ್ರತಿನಿಧಿಗಳ ಸಿಡಿ ಇಲ್ಲ:ಮುಲಾಲಿ

ವಿಜಯಪುರ: ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಯಾವುದೇ ಸಿಡಿಗಳು ನನ್ನ ಬಳಿ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿದ್ದಾರೆ. ಭಾನುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ಹೊರಬಂದಿರುವಂತೆ ಇನ್ನೂ ಹಲವಾರು ಜನಪ್ರತಿನಿಧಿಗಳ ಇಂತಹ ಸಿಡಿಗಳು ಇರಬಹುದು ಎಂದು ಹೇಳಿಕೆ ನೀಡಿದ್ದೇನೆಯೇ ಹೊರತು ನನ್ನ ಬಳಿ ಸಿಡಿ ಎಂದು … Continued

ಮಾಧ್ಯಮದಲ್ಲಿ ಪ್ರಸಾರವಾಗಿದ್ದನ್ನು ಹಿಂಪಡೆಯಲು ಸಾಧ್ಯವೇ? :ಸಿದ್ದರಾಮಯ್ಯ ಪ್ರಶ್ನೆ

ತುಮಕೂರು: ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ನೀಡಿದ್ದ ದೂರನ್ನು ವಾಪಸ್ಸು ಪಡೆದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಭಾನುವಾರ ತುಮಕೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ದೂರು ಹಿಂಪಡೆದಿರಬಹುದು. ಆದರೆ ಟಿವಿಯಲ್ಲಿ ಪ್ರಸಾರ ಆಗಿದ್ದನ್ನು ಹಿಂಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, … Continued

ದೂರು ವಾಪಸ್‌, ಸರ್ಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬಹುದು: ಎಚ್‌ಡಿಕೆ

ಕೋಲಾರ: ದಿನೇಶ್ ಕಲ್ಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬುದು ತಿಳಿದಿಲ್ಲ. ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಹೊಣೆಗಾರಿಕೆಯಿದ್ದು, ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ದಿನೇಶ … Continued

ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ

ಬೆಂಗಳೂರು: ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ಮನವಿ ಮಾಡಿದರು. ಸಿಡಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ  ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮನವಿ ಮಾಡಿಕೊಂಡಿದ್ದಾರೆ. ​ ಸಿಡಿ ಪ್ರಕರಣ ಸಂಬಂಧ ನೀಡಿದ್ದ ದೂರನ್ನು ದಿನೇಶ್​ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಹೀಗಾಗಿ ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ … Continued

ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್‌..!

ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued

ದೂರು ಹಿಂಪಡೆದಿದ್ದಕ್ಕೆ ಕಾರಣ ನೀಡಿದ ದಿನೇಶ ಕಲ್ಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ  ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಕೇಸ್ ಹಿಂಪಡೆದಿದ್ದು, ಅದಕ್ಕೆ ಕಾರಣವನ್ನು ಅವರು ಬಹಿರಂಗ ಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಹಳ್ಳಿ, ನಾನು ನ್ಯಾಯಕ್ಕಾಗಿ ಹೋರಾಟ ಮಾಡಿದ್ದೆ. ಆದರೆ … Continued

ಸಿಡಿ, ಹನಿಟ್ರ್ಯಾಪ್‌ ಬ್ಲ್ಯಾಕ್‌ ಮೇಲ್‌ ಕಡಿವಾಣಕ್ಕೆ ರಾಜಕೀಯ ವಲಯದಲ್ಲಿ ಕಾನೂನು ಅಸ್ತ್ರದ ಚರ್ಚೆ

ಬೆಂಗಳೂರು: ಅಶ್ಲೀಲ ಸಿಡಿ ಮುಂದಿಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡುವವರನ್ನು ಮಟ್ಟ ಹಾಕಲು ಕಠಿಣ ಕಾನೂನು ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ. ರಾಸಲೀಲೆ ಸಿಡಿ ಬಹಿರಂಗವಾದ ನಂತರ ರಾಜಕೀಯ ಕ್ಷೇತ್ರದಲ್ಲಿ ಈ ಚರ್ಚೆಗಳು ಆರಂಭವಾಗಿವೆ. ಈ ರೀತಿಯ ಮಾನಹಾನಿಯಾಗುವಂತಹ ಸಿಡಿಗಳನ್ನು ಏಕಾಏಕೀ ಬಹಿರಂಗ ಪಡಿಸದಂತೆ ತಡೆಯಾಜ್ಞೆ ನೀಡಲು ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ನ್ಯಾಯಾಲಯ ಕೂಡ … Continued

ಸಿಡಿ ಪ್ರಕರಣಕ್ಕೆ ಅಚ್ಚರಿ ತಿರುವು: ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಹಳ್ಳಿ..!!

ಬೆಂಗಳೂರು: ರಮೇಶ ಜಾರಕಿಹೊಳಿಗೆ ಸಂಬಂಧಿಸದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕುರಿತು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ದಿನೇಶ ಕಲ್ಹಳ್ಳಿ ಅವರ ವಕೀಲರನ್ನು ಉಲ್ಲೇಖಿಸಿ ಅವರು … Continued