ಒಂದು ವಾರದಲ್ಲಿ ರಾಜ್ಯ ನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆಯಾ ರಾಜ್ಯಗಳಲ್ಲಿ ತೆರವಾಗಿರುವ ಲೋಕಸಭಾ … Continued

೩ ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದ ಬ್ರಿಡ್ಜ್‌ ಬಳಿ ಶನಿವಾರ ಕೊಳೆತ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಬಾಲಕನನ್ನು ನರಿಬೋಳ ಗ್ರಾಮದ ಮಹೇಶ (೧೪) ಎಂದು ಗುರುತಿಸಲಾಗಿದೆ. ಈತ ಕಳೆದ ೩ ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದ. ಈತನ ಮರ್ಮಾಂಗಕ್ಕೆ ಗಾಯ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದೆ. … Continued

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸ್ತಾರೆ:ಶ್ರೀನಿವಾಸ ಪ್ರಸಾದ ಎಚ್ಚರಿಕೆ

ಮೈಸೂರು: ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತುಕೊಂಡರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ ಅವರು ಸಿಎಂ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದೇ ಟೀಕೆ ಮಾಡಿದರು. ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರು ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ದುಡಿಯುವವರು ಕೆಲವರಾದರೆ, ಸ್ವಾರ್ಥಕ್ಕಾಗಿ ಮಾಡಿಕೊಳ್ಳುವವರು … Continued

ಮೈಸೂರು: ಎಸಿಬಿ ಬಲೆಗೆ ಬಿದ್ದ ಪಿಡಿಒ-ಎಸ್‌ಡಿಎ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ ೩೦,೦೦೦ರೂ. ಲಂಚ ಕೇಳಿದ್ದರು. ಈ ಕುರಿತು ಕೇಶರಾಮ್‌ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಶುಕ್ರವಾರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ … Continued

ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಬ್ಬಿಗೆರೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ಹುಸೇನ್‌ ಪುತ್ರ ಬಾಬರ್‌ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಹುಸೇನ್‌ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್‌ ಸೆಕ್ಯುರಿಟಿ … Continued

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡಿನಲ್ಲಿ ದಾಖಲು

ಬೆಂಗಳೂರು: ಸೋಲಾಪುರ- ವಿಜಯಪುರ ಮಾರ್ಗದ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಿದ್ದು ಈಗ ಲಿಮ್ಕಾ ಬುಕ್‌ ಆಫ್‌ ರೆಕಾರ್ಡಿನಲ್ಲಿ ದಾಖಲಾಗಿದೆ. ಹೀಗೆಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೇ ಟ್ವೀಟ್ ಮಾಡಿದ್ದಾರೆ.ಅಲ್ಲದೆ ತಂಡಕ್ಕೆ ಅಭಿನೆಂದನೆಯನ್ನೂ ಸಲ್ಲಿಸಿದ್ದಾರೆ.ಈ ಕಾಮಗಾರಿಯು ರಾಷ್ಟ್ರೀಯ ಹೆದ್ದಾರಿ ಮೂಲಕ ಅನುಷ್ಠಾನಗೊಳ್ಳುತ್ತಿದೆ. ಇದು ಶಾಳಘಣೀಯ … Continued

ಕಾಂಗ್ರೆಸ್‌ ಸರ್ಕಾರದ ಅವಧಿಯ ಹಿಂದುಳಿದ ವರ್ಗಗಳ ಆಯೋಗದ ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ ಬಹಿರಂಗ ಮಾಡಿ

ಬೆಂಗಳೂರು: ಪ್ರವರ್ಗ 2ರಲ್ಲಿರುವ ಹಿಂದುಳಿದ ಜಾತಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಬಹಿರಂಗಪಡಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್, ಮಾಜಿ ಸದಸ್ಯರಾದ ಎಂ.ಡಿ.ಲಕ್ಷ್ಮಿನಾರಾಯಣ, ರಮೇಶ್‍ಬಾಬು, ಮಾಜಿ ಮೇಯರ್ ಹುಚ್ಚಪ್ಪ ಜಂಟಿ ಪತ್ರಿಕಾಗೋಷ್ಠಿಯಲ್ಲಿ … Continued

ಪೆನ್ – ಎಮರ್ಜನ್ಸಿ ಲೈಟಲ್ಲಿ ಚಿನ್ನ ಸಾಗಾಟ ಮಾಡಿದ್ರೂ ಸಿಕ್ಕಿಬಿದ್ದರು

ಮಂಗಳೂರು: ಪೆನ್ ಹಾಗೂ ಎಮರ್ಜನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಅಬ್ದುಲ್ ರಶೀದ್ ಹಾಗೂ ಅಬ್ದುಲ್ ನಿಸಾದ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ದುಬೈನಿಂದ ಮಂಗಳೂರಿಗೆ ಬಂದಿದ್ದರು. ಆರೋಪಿ ಅಬ್ದುಲ್ ರಶೀದ್ ಪೌಡರ್ ರೂಪದ … Continued

ಹೆಚ್ಚುವರಿ ಕಾವೇರಿ ನೀರಿನ ಬಳಕೆ ತಮಿಳುನಾಡು ಯೋಜನೆ ಖಂಡಿಸಿ ಕೇಂದ್ರಕ್ಕೆ ಪತ್ರ ಬರೆದ ಬಿಎಸ್‌ವೈ

ಬೆಂಗಳೂರು: ಕಾವೇರಿಯಿಂದ ವಾಯ್‌ಗೈ ಮತ್ತು ಗುಂಡಾರ್‌ಗೆ ಕಾಲುವೆ ನಿರ್ಮಾಣದೊಂದಿಗೆ ನದಿ ಸಂಪರ್ಕಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಹೆಚ್ಚುವರಿ ಕಾವೇರಿ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ … Continued

ಖಾಸಗಿ ಶಿಕ್ಷಕರ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳ ಪೋಷಕರಿಗೆ ಆತಂಕ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಸೇರಿದಂತೆ ಇತರ ಬೇಡಿಕೆಗಳ ಕುರಿತು ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನೆಯು ವಿದ್ಯಾರ್ಥಿಗಳ ಪೋಷಕರಿಗೆ ಕೊರೊನಾ ಆತಂಕ ಮೂಡಿಸಿದೆ. ಸಹಸ್ರಾರು ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಿ ಬೃಹತ್‌ ರ್ಯಾಲಿ ನಡೆಸಿದ್ದಾರೆ. ಆದರೆ ಕೊವಿಡ್‌-೧೯ ಸೋಂಕು ಹರಡುವ ಸಾಧ್ಯತೆ ಹೆಚ್ಚಿಸಿರುವುದು ಮಕ್ಕಳ ಪಾಲಕರಿಗೆ ಆತಂಕ … Continued