ಜಿ.ಆರ್.ಪಂಡಿತರ ಯಕ್ಷಗಾನದ ಚೌಕಿಮನೆ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಬಹುಮಾನ

ಶಿರಸಿ : ಸಾಗರದ ಜಿ.ಆರ್.ಪಂಡಿತ ಅವರು ತೆಗೆದ ಯಕ್ಷಗಾನದ ಒಂದು ಮೇಕಪ್ ಫೋಟೋಕ್ಕೆ ಅಂತಾರಾಷ್ಟ್ರೀಯ ಬಹುಮಾನಕ್ಕೆ ಪಾತ್ರವಾಗಿದೆ. ಇದೇ ಏಪ್ರಿಲ್ ನಲ್ಲಿ ಯುರೋಪಿನ ಸರ್ಬಿಯಾ ದೇಶದ ನೊವಿಸಡ್ ನಗರದ ಸ್ಟರಿಜಿನೊ ಪೊಜೊರ್ಜೆ ಎಂಬ ಖ್ಯಾತ ಛಾಯಾಗ್ರಹಣ ಸಂಸ್ಥೆಯು ಆಯೋಜಿಸಿದ್ದ 18ನೇ “ಟ್ರೈಯೇನಿಯಲ್ ಫೋಟೋಗ್ರಫಿಕ್ ಆರ್ಟ್ ನಲ್ಲಿ ಥಿಯೇಟರ್” ಎಂಬ ಹೆಸರಿನ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ 13 … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿಭತ್ಯೆ (DA) ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಜಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (DA) ಹೆಚ್ಚಳ ಮಾಡಿದೆ. ಜ.1, 2026ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಮಳೆ ಮುನ್ಸೂಚನೆ

ಬೆಂಗಳೂರು: ಮೇ 11ರಿಂದ  ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಶಿವಮೊಗ್ಗದಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಲವಾದ ಗಾಳಿ … Continued

ಜೊಯಿಡಾ ; ಕರಡಿ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ

ಕಾರವಾರ : ಮೇಯಲು ಬಿಟ್ಟಿದ್ದ ಎಮ್ಮೆಗಳನ್ನು ಕರೆದುಕೊಂಡು ವಾಪಸ್‌ ಬರುತ್ತಿದ್ದಾಗ ವೃದ್ಧನ ಮೇಲೆ ಕರಡಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕೋಳಗದ್ದದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ವೃದ್ಧನನ್ನು ಕೋಳಗದ್ದ ಗ್ರಾಮದ ನಿವಾಸಿ ವಿಠೋ ಪಾಟೀಲ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡಂಚಿನಲ್ಲಿ ಮೇಯಲು … Continued

ಯಲ್ಲಾಪುರ : ಮದುವೆಯಿಂದ ವಾಪಸ್‌ ಬರುವಾಗ ಮಿನಿ ಬಸ್‌ ಅಪಘಾತ ; ಹಲವರಿಗೆ ಗಾಯ

ಕಾರವಾರ: ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್‌ ಅಪಘಾತಕ್ಕೀಡಾಗಿ 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಮುಗಿಸಿ ವಾಪಸ್‌ ಆಗುವಾಗ ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದ ತಿರುವುಗಳಲ್ಲಿ ಅವರಿದ್ದ … Continued

ಬೆಂಗಳೂರು : ಪ್ರಧಾನಿ ಮೋದಿ ಸಂಚಾರದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ…!

ಬೆಂಗಳೂರು: ನಗರದ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಪ್ರಧಾನಿ ಮೋದಿ ತೆರಳುವ ಮಾರ್ಗದ ಬಳಿ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಸಚಿವ ಡಿ.ಸುಧಾಕರ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ … Continued

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜೇಗೌಡ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರುಪರಿಶೀಲನೆ ಮತ್ತು ಮರುಎಣಿಕೆಗೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 6 ರ ಆದೇಶವನ್ನು ರಾಜೇಗೌಡ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಮೂರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮೂರು ದಿನಗಳ(ಮೇ 10ರ ವರೆಗೆ) ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು … Continued

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜನಪರ ಹೋರಾಟಗಾರ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಹಿಚ್ಕಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರಬಂಧು ಬಳಗದವರನ್ನು ಅಗಲಿದ್ದಾರೆ. ಸಜ್ಜನಿಕೆ, ಸರಳತೆ … Continued