ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲೇ ಜೆಡಿಎಸ್​ ಮುಖಂಡನ ಭೀಕರ ಹತ್ಯೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವೆಂಕಟೇಶ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಅವರು ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಔಷಧದ ಅಂಗಡಿಯಿಂದ ಸ್ಕೂಟಿ ಮೇಲೆ ಮನೆಗೆ ಹೊರಟಿದ್ದರು. ಆಗ ದಾರಿಗೆ … Continued

ತುಮಕೂರು | ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಿವೈಎಸ್ಪಿ ಬಂಧನ

ತುಮಕೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಎಸಗಿದ್ದು ಎನ್ನಲಾದ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ … Continued

ತುಮಕೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ; ಡಿವೈಎಸ್‌ಪಿ ಅಮಾನತು

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಎದುರಿಸುತ್ತಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ನ್ಯ ನಡೆಸಿದ ವೀಡಿಯೊ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‌ಪಿ … Continued

ಗಂಡನನ್ನು ಕೊಂದು ದೇಹವನ್ನು 2 ತುಂಡುಗಳಾಗಿ ಕತ್ತರಿಸಿದ ಮಹಿಳೆ…!

ಬೆಳಗಾವಿ: ಕುಡುಕ ಪತಿಯನ್ನು ಕೊಂದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು. ಆರೋಪಿ ಮಹಿಳೆ ಮೊದಲು ಹಣಕ್ಕಾಗಿ ಪೀಡಿಸುತ್ತಿದ್ದ ಕುಡುಕ ಗಂಡನ ಕತ್ತು ಹಿಸುಕಿ, ನಂತರ ಅವನ ಮುಖವನ್ನು ಕಲ್ಲಿನಿಂದ ಜಜ್ಜಿದ್ದಾಳೆ. ದೇಹವನ್ನು ತನ್ನ ಮನೆಯಿಂದ ಹೊರಕ್ಕೆ ಸಾಗಿಸಲು ನಂತರ ಆತನ ದೇಹವನ್ನು ಎರಡು … Continued

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued

ಪ್ರಯಾಣಿಕರಿಗೆ ಹೊಸ ವರ್ಷದ ಆರಂಭಕ್ಕೇ ಶಾಕ್ ನೀಡಿದ ಸರ್ಕಾರ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಇಬ್ಬರು ಮಕ್ಕಳು ಸಾವು

ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವಿಗೀಡಾದ ಘಟನೆ ವಿಜಯಪುರ (vijayapura ) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗೀತಾ ಬಡಗಿ (28), ಮಕ್ಕಳಾದ ಶ್ರವಣ (6) ಮತ್ತು ಶರಣ (4) ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ … Continued

ಹಾಸನ | ಹೊಸ ವರ್ಷದ ಪಾರ್ಟಿ ವೇಳೆ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ…!

ಹಾಸನ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪ್ರಿಯತಮೆ ತನ್ನ ಪ್ರಿಯಕರನೊಂದಿಗೆ ಜಗಳವಾಡಿ, ಏಕಾಏಕಿ ಆತನಿಗೆ ಚಾಕು ಇರಿದ ಘಟನೆ ಹಾಸನದ ಖಾಸಗಿ ಹೋಟೆಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ 12:30ಕ್ಕೆ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಎ.ಗುಡುಗನಹಳ್ಳಿ ನಿವಾಸಿ ಮನುಕುಮಾರ ಎಂಬಾತ ಚಾಕು ಇರಿತಕ್ಕೊಳಗಾದ ಯುವಕ. … Continued

ಹೊಸ ವರ್ಷಕ್ಕೆ ಸರ್ಕಾರದಿಂದ 62 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಬಡ್ತಿ ನೀಡಿದೆ. ಇತ್ತೀಚೆಗಷ್ಟೆ ಏಳು ಐಪಿಎಸ್ (IPS transfer)​ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಮತ್ತೆ ಹಲವರಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಹೊಸ ವರ್ಷಕ್ಕೆ ರಾಜ್ಯ ಸರ್ಕಾರ 62 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ … Continued

ಭವಿಷ್ಯ ನಿಧಿ ವಂಚನೆ ಪ್ರಕರಣ : ರಾಬಿನ್‌ ಉತ್ತಪ್ಪಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ತಾನು ಸಹ ಪಾಲುದಾರನಾಗಿರುವ ಕಂಪನಿಯಲ್ಲಿನ ಸಿಬ್ಬಂದಿಗೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಹಣ ಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರಡಿಸಿರುವ ವಸೂಲಿ (ರಿಕವರಿ) ನೋಟಿಸ್ ಮತ್ತು ಬಂಧನ ವಾರೆಂಟ್ ಪ್ರಶ್ನಿಸಿ … Continued