ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು…!

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆ ಹಾಗೂ ಕ್ರಯಪತ್ರವನ್ನು ಮುಡಾ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಹಗರಣದ ಕೇಂದ್ರಬಿಂದುವಾಗಿರುವ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯಿಂದ ಹಿಂಪಡೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಒಪ್ಪಿಗೆ … Continued

ದುರ್ಬಳಕೆ ಕಡಿವಾಣಕ್ಕೆ ಬಿಪಿಎಲ್ ಪಡಿತರ ಕಾರ್ಡ್‌ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ : ದೇಶಪಾಂಡೆ

ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ ಹಾಕುವುದು, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ … Continued

ಚುನಾವಣಾ ಬಾಂಡ್ ಪ್ರಕರಣ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇತರರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಕುರಿತಾದ ತನಿಖೆಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿ ಮಾಜಿ … Continued

ಯಕ್ಷಗಾನಕ್ಕೆ ವಿಶ್ವಸಂಸ್ಥೆ ಗೌರವ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಯುನೆಸ್ಕೊ (UNESCO) ಮಾನ್ಯತೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ದೊರೆತಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು, ಯುನೆಸ್ಕೊದಿಂದ ಮಾನ್ಯತೆ ಪಡೆದ ಮೊದಲ ಯಕ್ಷಗಾನ ಸಂಸ್ಥೆಯಾಗಿದೆ. ಜೂನ್ 11 ಹಾಗೂ … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ವಿದೇಶಿಗರ ಬಂಧನ

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ರಾತ್ರಿ ಕಾರ್ಯಾಚರಣೆ ನಡೆಸಿದ ಜಿಗಣಿ … Continued

ಗಂಗಾ ಆರತಿ ಮಾದರಿಯಲ್ಲಿ ಅಕ್ಟೋಬರ್‌ 3ರಿಂದ ಕಾವೇರಿ ಆರತಿ

ಬೆಂಗಳೂರು: ನವರಾತ್ರಿ ಸಂದರ್ಭ ಅಕ್ಟೋಬರ್‌ 3ರಿಂದ 7ರ ವರೆಗೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಬಳಿಯ ಸ್ನಾನಘಟ್ಟದಲ್ಲಿ ಕಾವೇರಿ ನದಿಗೆ ಆರತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಎನ್‌. ಚಲುವ ರಾಯಸ್ವಾಮಿ ನೇತೃತ್ವದಲ್ಲಿ 2 ದಿನಗಳ ಕಾಲ ಹರಿದ್ವಾರ ಮತ್ತು ವಾರಾಣಸಿಯ ಗಂಗಾರತಿ ಅಧ್ಯಯನ ನಡೆಸಿದ್ದ ನಿಯೋಗ, ದಸರಾ … Continued

ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದಿನ 3 ರಿಂದ 5 ದಿನಗಳ ಕಾಲ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಕ್ರಿಯವಾಗಿದ್ದು, ಸೋಮವಾರ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಈ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಅತ್ಯಧಿಕ ಭಾರಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ … Continued

ಮೈಸೂರಿನಲ್ಲಿ ರೇವ್ ಪಾರ್ಟಿ? ಪೊಲೀಸರಿಂದ ದಾಳಿ, 50ಕ್ಕೂ ಹೆಚ್ಚು ಯುವಕರ ಬಂಧನ

ಮೈಸೂರು : ಭಾನುವಾರ ಮುಂಜಾನೆ ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ೫೦ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ತಿಳಿದಾಗ ಪಾರ್ಟಿಯಲ್ಲಿದ್ದ ಹಲವರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳುಹಿಸಿದ್ದು, ಪಾರ್ಟಿ ನಡೆದ … Continued

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ … Continued