ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 ಪಿಎಸ್ಐ ನೇಮಕಾತಿ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್​​ 28ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆ ಮುಂದೂಡಲಾಗಿದೆ. 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ. 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ತಿಳಿಸಿದ್ದರು. ಆದರೆ ಈಗ ಮತ್ತೆ ಮುಂದೂಡಲಾಗಿದೆ ಎಂದು ಸ್ವತಃ ಗೃಹ ಸಚಿವರೇ ಮಾಹಿತಿ … Continued

ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇರಿಸಿಕೊಂಡಿದ್ದ ಇಬ್ಬರ ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮಹಮ್ಮದ್ ಆಲಿ ಹಲಸಿಕರ ಮತ್ತು ಮೌಲಾಲಿ ಹಲಸಿಕರ … Continued

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ 14 ನಿವೇಶನ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗಾಗಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಗುರುವಾರ ಆದೇಶ ಕಾಯ್ದಿರಿಸಿದೆ. ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಚಾಲ್ತಿಯಲ್ಲಿರಲಿದೆ ಎಂದು ಅದು … Continued

ಚಿಕ್ಕೋಡಿ : ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ … Continued

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

ಮಂಗಳೂರು: ಜೆಸಿಬಿಯಿಂದ ಹಳೆ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮನೆ ಮಾಲೀಕ ಜೇಮ್ಸ್ ಜತ್ತನ್ನ (56) ಹಾಗೂ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ … Continued

ಪಿಎಸ್‍ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ ; ಡಾ.ಪರಮೇಶ್ವರ

ಬೆಂಗಳೂರು : 402 ಪಿಎಸ್‌‍ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು (PSI Recruitment Exam) ಸೆ.22ರ ಬದಲಿಗೆ ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸೆ.22 ಕ್ಕೆ ಪರೀಕ್ಷೆ ನಡೆಸಲು ದಿನಾಂಕ … Continued

ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ; ಘರ್ಷಣೆ

ಮಂಡ್ಯ : ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಒಂದು ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ನಂತರ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮೂಲಗಳ ಪ್ರಕಾರ, ಕೆಲವು ಯುವಕರು ಗಣಪತಿ ವಿಗ್ರಹ ವಿಸರ್ಜನ ಮೆರವಣಿಗೆ ನಡೆಸುತ್ತಿದ್ದರು ಮತ್ತು ಅವರು … Continued

ವೀಡಿಯೊ..| ಅರಳು ಹುರಿದಂತೆ ಪಟಪಟನೆ ಕನ್ನಡದಲ್ಲಿ ಮಾತನಾಡುವ ಜರ್ಮನಿ ಯುವತಿ…!

ಜರ್ಮನ್ ಮಹಿಳೆಯೊಬ್ಬರು ಕನ್ನಡ ಮಾತನಾಡುವ ವೀಡಿಯೊ ಎಕ್ಸ್‌ನಲ್ಲಿ ವೈರಲ್ ಆಗಿದೆ. “ಬೆಂಗಳೂರು ಕನ್ನಡಿಗರಿಗೆ ಸೇರಿದ್ದು” ಎಂಬ ಚರ್ಚೆಯ ನಡುವೆ ಈ ವೀಡಿಯೊ ಹೊರಹೊಮ್ಮಿದೆ. ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಉಳಿಯುವ ಯಾರಾದರೂ ಸ್ಥಳೀಯ ಭಾಷೆಯನ್ನು ತಿಳಿದುಕೊಳ್ಳಬೇಕು ಎಂದು ಕೆಲವರು ಹೇಳುತ್ತಾರೆ. ಈ ಚರ್ಚೆಯ ಮಧ್ಯೆ, ಜರ್ಮನ್ ಪ್ರಜೆ ಮತ್ತು ಭಾಷಾ ಉತ್ಸಾಹಿ ಜೆನ್ನಿಫರ್ ಅವರ ಯೂ … Continued

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯ ಪುತ್ರಿಗೆ ಉದ್ಯೋಗ ಕೊಡಿಸಿದ ಎಚ್‌ಡಿಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಪುತ್ರಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೈಗಾದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸಿದ್ದಾರೆ. ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ನೀಡಲಾಗಿದೆ. ಈ … Continued