ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ … Continued

ಎರಡು ಜೊತೆ ಸಮವಸ್ತ್ರ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂಬ ಆದೇಶ ಪಾಲಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮೌಖಿಕವಾಗಿ ತೀವ್ರ ವಾಗ್ದಾಳಿ ನಡೆಸಿದೆ. ಸರ್ಕಾರಿ ಮಕ್ಕಳಿಗೆ ಎರಡು ಜತೆ ಸಮವಸ್ತ್ರ, 1 ಜತೆ ಶೂ ಹಾಗೂ ಎರಡು … Continued

ಮಹದಾಯಿ: ಬಿಜೆಪಿ ರಾಜಕೀಯ ನಾಟಕವನ್ನು ರೈತರು, ಜನರು ನಂಬುವುದಿಲ್ಲ- ಕಾಂಗ್ರೆಸ್

ಹುಬ್ಬಳ್ಳಿ : ಡಿಪಿಆರ್ ಅನುಮೋದನೆಗೊಂಡಿದೆ, ಮಹದಾಯಿ ಜಲ ವಿವಾದ ಸಂಪೂರ್ಣ ಬಗೆಹರಿಸಿದ್ದೇವೆ, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಮಹದಾಯಿ ನಮ್ಮದೇ ಕೊಡುಗೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಸುಳ್ಳೆಂದು ಜನ ತಿಳಿದುಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಗೆ ಒಂದಿಲ್ಲ ಒಂದು ಕಾರಣ ಅಡ್ಡಿ ಅಡ್ಡಪಡಿಸುತ್ತಲೇ ಬಂದಿದೆ. ಇಂದಿಗೂ ಅಡ್ಡಪಡಿಸುತ್ತಲಿದೆ ಎಂದು ಕಾಂಗ್ರೆಸ್‌ … Continued

ಡಿಕೆಶಿ ಕರ್ನಾಟಕ ಪ್ರದೇಶ ಸಿಡಿ ಕಮೀಟಿ ಅಧ್ಯಕ್ಷ ಎಂದು ಲಖನ್ ಜಾರಕಿಹೊಳಿ ವ್ಯಂಗ್ಯ

ಗೋಕಾಕ: ಸಿಡಿ ಕಾರ್ಖಾನೆ ಬೆಳಗಾವಿಯಲ್ಲಿಯೇ ಇದೆ. ಬೆಳಗಾವಿಯಿಂದ ತಯಾರಾಗಿ ಕನಕಪುರ ಮತ್ತು ಬೆಂಗಳೂರಿನಲ್ಲಿ ರಿಲೀಸ್ ಆಗುತ್ತದೆ. 2000ನೇ ಇಸ್ವಿಯಿಂದ ಸಿಡಿ ಕಾರ್ಖಾನೆ ಚಾಲ್ತಿಯಲ್ಲಿದ್ದು, ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ. ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಂಪನಿ ಅಧ್ಯಕ್ಷ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ … Continued

ಕುಮಟಾ : ಎರಡು ಎಕರೆ ವಿಸ್ತಾರದ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ: ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ | ವೀಕ್ಷಿಸಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಅಳ್ವೇಕೊಡಿಯ ಗುಜರಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ ಜ್ವಾಲೆ ಆವರಿಸಿಕೊಂಡು ಆತಂಕ ಸೃಷ್ಟಿಸಿದೆ. ಅಳ್ವೆಕೋಡಿಯಲ್ಲಿರುವ ಬಾಷಾ ಶೇಖ್ ಎಂಬುವವರ ಮಾಲೀಕತ್ವದ ಗುಜರಿ ಅಂಗಡಿಯೊಳಕ್ಕೆ ಬೆಂಕಿ ತಗಲಿ ಗುಜರಿ ಸಾಮಗ್ರಿಗಳು ಸುಟ್ಟುಹೋಗಿವೆ.. ಎರಡು ಎಕರೆಯಷ್ಟು ಪ್ರದೇಶದಲ್ಲಿ ಗುಜರಿ ಸಾಮಗ್ರಿಗಳು ಸಂಗ್ರಹಿಸಿಡಲಾಗಿದ್ದರಿಂದ ಈ … Continued

ಸಹೋದರನಿಗೆ ಸವಾಲು : ಸೋಮಶೇಖರ ರೆಡ್ಡಿ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ…!

ಕೊಪ್ಪಳ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ)ದ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯಾಗಿ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ ಹಾಗೂ ತಮ್ಮ ಸಹೋದರ ಜಿ. ಸೋಮಶೇಖರ್ ರೆಡ್ಡಿ ವಿರುದ್ಧ ತಮ್ಮ ಪತ್ನಿ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ಮಂಗಳವಾರ ಕಲ್ಯಾಣ ರಥಯಾತ್ರೆಗೆ … Continued

ಬೆಂಗಳೂರಿನಲ್ಲಿ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್​ ನೀಡಿದ್ದು, ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ತೆರಿಗೆ ವಂಚನೆ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರದ ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರಗಳ ವ್ಯಾಪಾರಿಗಳ … Continued

ಖ್ಯಾತ ಹರಿಕಥೆ ವಿದುಷಿ ಮಾರ್ಪಳ್ಳಿ ಪದ್ಮಾವತಿ ರಾವ್ ಜನ್ಮ ಶತಮಾನೋತ್ಸವ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಪುತ್ತೂರು: ಪ್ರಸಿದ್ಧ ಹರಿಕಥಾ ವಿದ್ವಾಂಸರಾಗಿದ್ದ ‘ಬಾಲಭಾರತಿ’ ಬಿರುದು ಪಡೆದು ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಅನೇಕ ಪೌರಾಣಿಕ ಹರಿಕಥೆ ಮಾಡಿದ್ದ ವಿದುಷಿ ಮಾರ್ಪಳ್ಳಿ ಪದ್ಮಾವತಿ ಶಿವರಾಮ ರಾವ್ ಅವರ ಜನ್ಮ ಶತಮಾನೋತ್ಸವದ ನೆನಪಿನಲ್ಲಿ ಕೇಂದ್ರ ಸರ್ಕಾರದ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಪುತ್ತೂರಿನ ವಿಭಾಗೀಯ ಅಂಚೆ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಅಂಚೆ ಇಲಾಖೆ … Continued

ಮೇ 3ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

ಉಜಿರೆ: ಕರಾವಳಿಯ ಪ್ರಸಿದ್ಧ ಐತಿಹಾಸಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಸಂಜೆ 6:40ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಭಾಗ ವಹಿಸಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಸಾಮೂಹಿಕ ವಿವಾಹದಲ್ಲಿ ಎರಡನೇ ಮದುವೆಗೆ ಅವಕಾಶವಿಲ್ಲ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು … Continued

ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ : ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ ಟ್ವೀಟ್ ಮಾಡಿದ್ದು, ‘ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. … Continued