ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ  ಭಾರಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ … Continued

ವಿಎಚ್‌ ಪಿ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ : ಕುಂಜಾಲುವಿನಲ್ಲಿ ಇತ್ತೀಚೆಗೆ ವರದಿಯಾದ ಗೋಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಶರಣ ಪಂಪ್‌ವೆಲ್ ವಿರುದ್ಧ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲು ಆರೋಪಿ ಶರಣ ಪಂಪ್‌ವೆಲ್ ಪತ್ರಿಕಾಗೋಷ್ಠಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. … Continued

ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್‌. ರವಿಕುಮಾರ (N Ravikumar) ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ … Continued

ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್‌ ಮಟ್ಟ … Continued

ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ (Online Game) 18 ಲಕ್ಷ ರೂ. ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸರಸ್ವತಿ ನಗರದ ಶಶಿಕುಮಾರ (25) ಎಂದು ಗುರುತಿಸಲಾಗಿದೆ. ಈತ ಆನ್‍ಲೈನ್ ಗೇಮ್‍ ಹುಚ್ಚಿಗೆ ಬಿದ್ದು 18 ಲಕ್ಷ ರೂ. ಕಳೆದುಕೊಂಡಿದ್ದ. ಕಳೆದ ಒಂದು ವರ್ಷದಿಂದ ಹಣ ಹಾಕಿ ಆನ್‌ಲೈನ್‌ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued

ಅಪಘಾತದಲ್ಲಿ ಮಗ ಸಾವು ; ಸುದ್ದಿ ಕೇಳಿ ಆಘಾತದಿಂದ ತಾಯಿಯೂ ಕುಸಿದುಬಿದ್ದು ಸಾವು

ಬೀದ‌ರ : ತಾಲೂಕಿನ ಘೋಡಂಪಳ್ಳಿ ಗ್ರಾಮದ ಬಳಿ ಬುಧವಾರ (ಜು.2) ರಾತ್ರಿ 10ರ ಸುಮಾರಿಗೆ ಗೂಡ್ಸ್ ವಾಹನವೊಂದು ರಸ್ತೆ ಪಕ್ಕದ ಬಾವಿಗೆ ಉರುಳಿ, ಅದರಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ ಹಾಗೂ ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಮಗನ ಸಾವಿನ ಸುದ್ದಿ ತಿಳಿದು ವೃದ್ಧ ತಾಯಿ ಹೃದಯಾಘಾತದಿಂದ ಸಾವಿಗೀಡಾದ ಮನಕಲಕುವ ಘಟನೆ ನಡೆದಿದೆ ಎಂದು ವರದಿಯಾಗಿದೆ. … Continued

ವೀಡಿಯೊ…| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕಾರವಾರ (Karwar) ತಾಲೂಕಿನ ಕದ್ರಾ ಬಳಿಯ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಬಾಳೆಮನಿ, ಸುಳಗೇರಿ ಮಾರ್ಗವಾಗಿ ಕೂಡಸಳ್ಳಿ ಅಣೆಕಟ್ಟಿಗೆ ಹಾದುಹೋಗುವ ರಸ್ತೆಯ ಮೇಲೆಯೇ ಭಾರಿ ಪ್ರಮಾನದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 9ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಅರಬ್ಬೀ ಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು … Continued

ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಹೆಚ್ಚುವರಿ ಎಸ್‌ಪಿ ಎನ್.ವಿ.ಭರಮನಿ

ಬೆಳಗಾವಿ/ಧಾರವಾಡ: ಧಾರವಾಡ ಹೆಚ್ಚುವರಿ ಎಸ್‌ಪಿ ಎನ್.ವಿ. ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅವರು ಸ್ವಯಂ ನಿವೃತ್ತಿ ಕೋರಿ ಸುಮಾರು ಒಂದು ತಿಂಗಳ ಹಿಂದೆಯೇ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಸ್ವಯಂಪ್ರೇರಿತ ನಿವೃತ್ತಿಗೆ ಭರಮನಿ ಅವರು ಅರ್ಜಿ ಸಲ್ಲಿಸಿದ್ದರೂ ಈ ಬಗ್ಗೆ ಇಲಾಖೆ ಇನ್ನೂ ನಿರ್ಧರಿಸಬೇಕಿದೆ. ಹಿರಿಯ ಅಧಿಕಾರಿಗಳು ಸ್ವಯಂ … Continued