ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಹಾಸನ : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಾದ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಸ್‌ ಜಾರಿ ಮಾಡಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಏಳು ದಿನ ಕಾಲಾವಕಾಶ ಬೇಕು ಎಂದು … Continued

ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಬೆಂಗಳೂರು ; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆ ಬಿಸಿಲಿನಲ್ಲಿ ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರಿನ ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ. ಮಂಗಳವಾರ … Continued

ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜನೆ ಮಾಡಿ ಆದೇಶಿಸಿದೆ. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಿಸಿತ್ತು. ಹಾಗೂ ತಂಡಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ … Continued

ಪ್ರಜ್ವಲ್ ಅಶ್ಲೀಲ ವೀಡಿಯೊ ಪ್ರಕರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಕ ಮಾಡಿದೆ. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ಎನ್.ಜಗದೀಶ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ (ಏಪ್ರಿಲ್ 30) ಆದೇಶ ಹೊರಡಿಸಿದೆ. ಜಗದೀಶ ಅವರು … Continued

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ- ದೃಶ್ಯ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ

ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಚ್ಛಾಟಿತ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪನವರ ಪುತ್ರ ಕೆ ಇ ಕಾಂತೇಶ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವೀಡಿಯೊ, ಸ್ಕ್ರೀನ್‌ ಶಾಟ್‌ ಅಥವಾ ಅಶ್ಲೀಲ ಆಡಿಯೊಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ಮಧ್ಯಂತರ ಪ್ರತಿಬಂಧಕಾದೇಶ ಮಾಡಿದೆ. ಕೆ.ಇ. ಕಾಂತೇಶ … Continued

ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ವೀಡಿಯೊ ಮೂಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾರ್ತಿಕ್ ಅವರು ಅಜ್ಞಾತ ಸ್ಥಳದಿಂದ ವೀಡಿಯೊ ಸಂದೇಶ ಕಳುಹಿಸಿದ್ದು, ‘ನಾನು ಹದಿನೈದು ವರ್ಷದಿಂದ … Continued

ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ. ರೇವಣ್ಣ ಅವರಿಗೆ ಎಸ್‌ಐಟಿ (ವಿಶೇಷ ತನಿಖಾದಳ) ನೋಟಿಸ್‌ ಜಾರಿ ಮಾಡಿದೆ ಹಾಗೂ ಮಾತ್ರವಲ್ಲದೇ 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು … Continued

ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

ಬಾಗಲಕೋಟೆ : ಐದು ವರ್ಷದ ಹಿಂದೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತದ ವಾಯುದಾಳಿ (Balakot airstrike) ನಡೆದ ಘಟನೆಯ ಬಗ್ಗೆ ನರೇಂದ್ರ ಮೋದಿ ರಹಸ್ಯ ವಿಚಾರ ಬಹಿರಂಗ ಪಡಿಸಿದ್ದಾರೆ. 2019ರ ಬಾಲಾಕೋಟ್ ಏರ್​ಸ್ಟ್ರೈಕ್ ನಡೆದ ಬಳಿಕ ಆ ಘಟನೆ ಬಗ್ಗೆ ಪ್ರಪಂಚಕ್ಕೆ ತಿಳಿಸುವ ಮೊದಲು ಅಧಿಕೃತವಾಗಿ ಮೊದಲು ತಿಳಿಸಿದ್ದು ಪಾಕಿಸ್ತಾನಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ … Continued

ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ರಾಮನಗರ : ಸೋಮವಾರ ರಾಮನಗರ ಜಿಲ್ಲೆಯ ಮೇಕೆದಾಟು ಬಳಿಯ ಕಾವೇರಿ ನದಿಯ ಸಂಗಮದಲ್ಲಿ ಮೂವರು ಯುವತಿಯರು ಸೇರಿದಂತೆ ಐವರು ವಿದ್ಯಾರ್ಥಿಗಳು ಮುಳುಗಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ (20), ತೇಜಸ್ (21), ವರ್ಷ (20) ಮತ್ತು ಸ್ನೇಹಾ (19) ಎಂದು ಗುರುತಿಸಲಾಗಿದೆ. ಈಜುತ್ತಿದ್ದ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. … Continued