ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿಯಿಂದ ಸಮನ್ಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ. ರೇವಣ್ಣ ಪತ್ನಿ ಭವಾನಿ ಅವರ ಕಾರು ಚಾಲಕ ಅಜಿತ ಅವರಿಗೆವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಪ್ರಕರಣದ ಸಂತ್ರಸ್ತೆಯನ್ನು ಚಾಲಕ ಅಜಿತ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಎಸ್‌ಐಟಿ 2 ಬಾರಿ ಸಮನ್ಸ್ … Continued

ಮೈಸೂರು: ಮಲಗಿದ್ದ ಸ್ಥಿತಿಯಲ್ಲೇ ಒಂದೇ ಕುಟುಂಬದ ನಾಲ್ವರು ಸಾವು

ಮೈಸೂರು: ನಗರದ ಯರಗನಹಳ್ಳಿಯಲ್ಲಿ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು, ಮೇ 21ರ ರಾತ್ರಿ ಮಲಗಿದ್ದಲ್ಲೇ ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅನಿಲ ಸೋರಿಕೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಬಟ್ಟೆ ಇಸ್ತ್ರಿ ಮಾಡುವ ಕೆಲಸ ಮಾಡುತ್ತಿದ್ದ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ, ಮೃತರನ್ನು ಕುಮಾರಸ್ವಾಮಿ (45), ಪತ್ನಿ ಮಂಜುಳ (39), ಮಕ್ಕಳಾದ ಅರ್ಚನಾ … Continued

ಸವದತ್ತಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 46 ಮಂದಿ ಅಸ್ವಸ್ಥ

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಜಾತ್ರೆಯಲ್ಲಿ ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ತವ್ಯಸ್ಥಗೊಂಡವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಿಸಿ … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳುಗಾರಿಗೆ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ‌ ಮುಖಂಡನ ಪರ ಯಾವುದೇ ಅನುಮತಿ … Continued

ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

ಮೈಸೂರು: ಕೌಟುಂಬಿಕ ಕಲಹದಿಂದ ಸ್ಯಾಂಡಲ್‌ ವುಡ್‌ ಸಿನಿಮಾ ನಟಿ, ಕಾಂಗ್ರೆಸ್‌ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಕೆಯ ಪತಿಯೇ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಕೊಲೆಯಾದ ನಟಿಯನ್ನು ವಿದ್ಯಾ ನಂದೀಶ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ವಿದ್ಯಾ ಬನ್ನೂರಿನ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 11 ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿದೆ. ಹಾಗೂ 11 ಶಂಕಿತರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 … Continued

ಸಾಲದ ಹಣ ಮರಳಿ ಕೊಡಲು ತಡವಾಗಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ : ಮನನೊಂದು ರೈತ ಆತ್ಮಹತ್ಯೆ

ಬೆಳಗಾವಿ : ಸಾಲ ಮರಳಿಸಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಪತ್ನಿ ಮತ್ತು ಪುತ್ರನನ್ನು ಗೃಹ ಬಂಧನದಲ್ಲಿ ಇರಿಸಿಕೊಂಡಿದ್ದಕ್ಕೆ ಮನನೊಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಇಸ್ಲಾಂಪುರದಲ್ಲಿ ಬೆಳಕಿಗೆ ಬಂದಿದೆ. ರಾಜು ಖೋತಗಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಮೃತ ರಾಜು ಭೀಕರ ಬರದಿಂದ ಬೆಳೆ ನಷ್ಟವಾದ ನಂತರ … Continued

ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ…ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ…!

ಉಡುಪಿಯ ಶಂಕರಪುರದ ರೈತರೊಬ್ಬರು ತಮ್ಮ ತಾರಸಿ ಮೇಲಿನ ತೋಟದಲ್ಲಿ ವಿಶ್ವದ ಅತ್ಯಂತ ದುಬಾರಿ ಮತ್ತು ಹೆಚ್ಚು ಬೇಡಿಕೆಯಿರುವ ʼಮಿಯಾಜಾಕಿ ತಳಿʼಯ ಮಾವನ್ನು ಬೆಳೆದು ಅಚ್ಚರಿ ಮೂಡಿಸಿದ್ದಾರೆ. ಈ ಮಅವಿನ ಹಣ್ಣಿನ ಬೆಲೆ ಒಂದು ಕಿಲೋಗ್ರಾಂ ಗೆ 3 ಲಕ್ಷ ರೂಪಾಯಿಗಳ ವರೆಗೆ ಇರುತ್ತದೆ. ಉಡುಪಿಯ ಶಂಕರಪುರದ ರೈತರಾದ ಜೋಸೆಫ್ ಲೋಬೊ ಎಂಬವರು ತಮ್ಮ ಮನೆಯ ತಾರಸಿಯಲ್ಲಿ … Continued

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಶೇ. 33ರಷ್ಟನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಸೂಚಿಸಿದೆ. ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ ಜಾರಿ ಮಾಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ … Continued

ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ…!

ಬೆಂಗಳೂರು: ನಗರದ ಬಾಲಕಿಯೊಬ್ಬಳು ಸಮಾರಂಭದಲ್ಲಿ ನೀಡಿದ್ದ ಲಿಕ್ವಿಡ್ ನೈಟ್ರೋಜನ್ (ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ) ತುಂಬಿದ ಪಾನ್ ಸೇವಿಸಿ ಹೊಟ್ಟೆಯಲ್ಲಿ ರಂಧ್ರವಾಗಿದೆ ಎಂದು ವರದಿಯಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದೆ. ಸಂಬಂಧಿಕರ ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿದ್ದಳು. ಕೆಲ … Continued