ಆರೋಪಿಯನ್ನೇ ವಿವಾಹವಾದ ಸಂತ್ರಸ್ತೆ: ಪೋಕ್ಸೊ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌ ಏಕಸದಸ್ಯ ಪೀಠ

ಬೆಂಗಳೂರು: ಅಪ್ತಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಕುರಿತಾದ ಪ್ರಕರಣದಲ್ಲಿ ಆರೋಪಿಯನ್ನೇ ಸಂತ್ರಸ್ತೆ ಮದುವೆಯಾದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ದೋಷಾರೋಪ‌ ಪಟ್ಟಿ ಮತ್ತು ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ. 17 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರದ ಮಾಡಿದ ಆರೋಪದ ಕುರಿತು ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು … Continued

ಕೆಲ ಸಚಿವರು, ಶಾಸಕರಿಂದ ಕಮಿಷನ್ : ದಂಧೆ ಗುತ್ತಿಗೆದಾರರ ಆರೋಪ

ಬೆಂಗಳೂರು: ರಾಜ್ಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಶೇ. ೪೦ರಷ್ಟು ಕಮಿಷನ್ ವಿಚಾರದ ವಿರುದ್ಧ ರಾಜ್ಯಗುತ್ತಿಗೆದಾರರ ಸಂಘ ಸಮರ ಸಾರಿದೆ. ಭ್ರಷ್ಟಾಚಾರದಲ್ಲಿ ರಾಜ್ಯ ನಂ. ೧ ಎಂದು ಗುಡುಗಿದ್ದಾರೆ. ಶೇ. ೪೦ರಷ್ಟು ಕಮಿಷನ್ ಬಗ್ಗೆ ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ಸಂಪೂರ್ಣ ದಾಖಲೆಯನ್ನು ಬಹಿರಂಗಪಡಿಸುವುದಾಗಿ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. ಕೋಲಾರ ಜಲ್ಲಾ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ … Continued

ರಾಜ್ಯ ಸರ್ಕಾರದಿಂದ 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಹೊಸದಾಗಿ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಲಾಗಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಸರ್ಕಾರದಿಂದ ರಚಿಸಲ್ಪಟ್ಟಿರುವಂತ ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ, ಕನ್ನಡ ಮತ್ತು ಸಂಸ್ಕತಿ ಇಲಾಖೆಯಡಿಯ ಕೆಲ ಟ್ರಸ್ಟ್, ಪ್ರತಿಷ್ಠಾನಗಳಿಗೆ … Continued

ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: ಪಿಯು ಕಾಲೇಜುಗಳ 778 ಹುದ್ದೆ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ  ಉಪನ್ಯಾಸಕರ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಪದವಿ ಪೂರ್ವ … Continued

2022ರ ಕೇಂದ್ರ ಸಾಹಿತ್ಯ ಪ್ರಶಸ್ತಿ ಪ್ರಕಟ : ಉತ್ತರ ಕನ್ನಡದ ತಮ್ಮಣ್ಣ ಬೀಗಾರಗೆ​​ ಬಾಲ ಸಾಹಿತ್ಯ ಪ್ರಶಸ್ತಿ, ಬಳ್ಳಾರಿಯ ದಾದಾಪೀರ್ ಜೈಮನ್ ಯುವ ಸಾಹಿತ್ಯ ಪ್ರಶಸ್ತಿ

ಸಿದ್ದಾಪುರ (ಉತ್ತರ ಕನ್ನಡ): 2022ರ ಕೇಂದ್ರ ಸಾಹಿತ್ಯ ಪ್ರಶಸ್ತಿ ಪ್ರಕಟವಾಗಿದ್ದು ಕರ್ನಾಟಕದ ಇಬ್ಬರಿಗೆ ಪ್ರಶಸ್ತಿ ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ … Continued

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿ ಮಾಡಿದೆ. . ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು, … Continued

ಖ್ಯಾತ ಭಾಗವತ ವಿದ್ವಾನ್ ಗಣಪತಿ ಭಟ್ಟರಿಗೆ ಹೊಸ್ತೋಟ ಪ್ರಶಸ್ತಿ, ವಿದ್ವಾಂಸ ಪಾದೇಕಲ್ಲರಿಗೆ ಎಂ.ಎ.ಹೆಗಡೆ ದಂಟ್ಕಲ್ ಪ್ರಶಸ್ತಿ ಪ್ರಕಟ

ಶಿರಸಿ: ಯಕ್ಷ ಋಷಿ ಎಂದೇ ಹೆಸರಾಗಿದ್ದ ಹೊಸ್ತೋಟ ಮಂಜುನಾಥ ಭಾಗವತರ ಹೆಸರಿನ ನೀಡಲಾಗುವ ಪ್ರಶಸ್ತಿಯನ್ನು ಯಕ್ಷಗಾನದ ಬಡಗುತಿಟ್ಟಿನ ಪ್ರಸಿದ್ದ ಭಾಗವತ ವಿದ್ವಾನ್ ಗಣಪತಿ ಭಟ್ಟ ಮೊಟ್ಟೆಗದ್ದೆ ಅವರಿಗೆ ಹಾಗೂ ಯಕ್ಷಗಾನ, ಸಂಸ್ಕೃತ, ಕನ್ನಡದ ವಿದ್ವಾಂಸರಾಗಿದ್ದ ಪ್ರೊ.ಎಂ.ಎ.ಹೆಗಡೆ‌ ದಂಟ್ಕಲ್ ಅವರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಯಕ್ಷಗಾನದ ವಿದ್ವಾಂಸ ಪಾದೇಕಲ್ಲು ವಿಷ್ಣು ಭಟ್ಟ ಅವರಿಗೆ ಪ್ರಕಟಿಸಲಾಗಿದೆ. ಸೋಂದಾ ಸ್ವರ್ಣವಲ್ಲೀ‌ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ : ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಪತ್ರ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿ.ಟಿ. ರವಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಚಾಮರಾಜಪೇಟೆಯ … Continued

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ: ಎಸ್‌ಐಟಿ ಬಿ ರಿಪೋರ್ಟ್‌ ವಜಾ ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್‌ಚಿಟ್ ನೀಡಿರುವ ವಿಶೇಷ ತನಿಖಾ ದಳದ (ಎಸ್‌ಐಟಿ) ವರದಿಯನ್ನು ವಜಾ ಮಾಡಬೇಕು ಎಂದು ಕೋರಿ ಸಂತೋಷ್ ಪಾಟೀಲ ಕುಟುಂಬದವರು ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣದ ಸಂಬಂಧ ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿರುವ ಬಿ ರಿಪೋರ್ಟ್‌ ವಿರೋಧಿಸಿ, ಮೃತ ಸಂತೋಷ್ ಪಾಟೀಲ ಸಹೋದರ … Continued

ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು, ಮಂಗಳವಾರ ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ … Continued