ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಭೂ ಕಂಪನದ ಅನುಭವಕ್ಕೆ ಬೆಚ್ಚಿದ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ ಎಂದು ಹೇಳಲಾಗಿದೆ. ವಿಜಯಪುರ ನಗರದ ರೇಲ್ವೇ ಸ್ಟೇಷನ್, ಅಶುತೋಶಿ ನಗರ, ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ರಾತ್ರಿ 8.15 ನಿಮಿಷ ಸುಮಾರಿಗೆ ಇಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್‌ 22ರಿಂದ 24ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಹತ್ತು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ … Continued

ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಶಿಕ್ಷಣಾಧಿಕಾರಿ ವೃಂದದ ಬಡ್ತಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕೆಸಿಆರ್ ನಿಯಮದಡಿ ಶಿಕ್ಷಣಾಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡಲು ಕೌನ್ಸಿಲಿಂಗ್ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಆಗಸ್ಟ್‌ 23ರಂದು ಬೆಳಿಗ್ಗೆ 10:30ಕ್ಕೆ ಬೆಂಗಳೂರಿನಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ … Continued

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತನಲ್ಲ; ನಾವು ಸಾಕ್ಷ್ಯ ನೀಡಿದ್ದೇವೆ– ಮಿಥುನ್‌ ಗೌಡ

ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಅಲ್ಲ. ಅದಕ್ಕೆ ಬೇಕಾದ ಎಲ್ಲಾ ಸಾಕ್ಷ್ಯಗಳನ್ನು ನಾವು ಬಿಡುಗಡೆ ಮಾಡಿದ್ದೇವೆ ಎಂದು ಕೊಡಗು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ಗೌಡ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್‌ ಎಂಬಾತ ಮೊನ್ನೆ ಅರೆಸ್ಟ್ ಆದಾಗ ಬಿಜೆಪಿ ನಾಯಕರೇ ಆತನನ್ನು ಬಿಡಿಸಿದ್ದಾರೆ. ಈಗಲೂ ಕೂಡ ಅವನಿಗೆ … Continued

ದೇವರಾಜ ಅರಸು ಹೆಸರಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಹೆಸರಿನಲ್ಲಿ ಇನ್ಮುಂದೆ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಇಂದು, ಶನಿವಾರ ದೇವರಾಜ ಅರಸು ಾವರ ೧೦೭ನೇ ಜನ್ಮದಿನಾಚರಣೆ ಹಾಗೂ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದಿ. ದೇವರಾಜ ಅರಸು ಹೆಸರಿನಲ್ಲಿ ಈಗ … Continued

ರೈತರಿಗಾಗಿ ರಾಜ್ಯದಲ್ಲಿ ಐದು ರಫ್ತು ಲ್ಯಾಬ್ ಪ್ರಾರಂಭ: ಸಚಿವ ಬಿ.ಸಿ.ಪಾಟೀಲ

ಬೆಂಗಳೂರು: ರೈತರ ಆದಾಯವನ್ನು ದ್ವಿಗುಣಗೊಳಿಸಿ ರೈತರನ್ನು ಆರ್ಥಿಕವಾಗಿ ಶಕ್ತಿಯಾಗಿಸಲು ಅವರನ್ನು ರಫ್ತುದಾರರನ್ನಾಗಿ ಮಾಡಲು ರಾಜ್ಯದಲ್ಲಿ ರಫ್ತುಲ್ಯಾಬ್ (ಎಕ್ಸ್‌ಪೋರ್ಟ್ ಲ್ಯಾಬ್) ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ರೈತ ಉತ್ಪಾದಕ ಸಂಸ್ಥೆಗಳು ಮತ್ತು ರಫ್ತುದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರೈತರನ್ನು ರಫ್ತುದಾರರನ್ನಾಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ ಐದು … Continued

ನಾನು ಕಾಂಗ್ರೆಸ್‌ ಕಾರ್ಯಕರ್ತ, ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಬಂಧಿತ ಆರೋಪಿ

ಮಡಿಕೇರಿ: ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಈತ ತಾನು ಕಾಂಗ್ರೆಸ್‌ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಸೋಮವಾರಪೇಟೆಯ ಸಂಪತ್ ಎಂದು ಗುರುತಿಸಲಾಗಿದೆ. ಮೂಲತಃ ನಾನು ಜೆಡಿಎಸ್ ಪಕ್ಷದವನು. ಮಾಜಿ ಸಚಿವ ಜೀವಿಜಯ ಬೆಂಬಲಿಗನಾಗಿದ್ದು, ಜೀವಿಜಯ ಜೊತೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ” ಎಂದು … Continued

ಕನ್ನಡ ಕಿರುತೆರೆಯಿಂದ ಜೊತೆ ಜೊತೆಯಲಿ​ ಧಾರವಾಹಿ ನಟ ಅನಿರುದ್ಧ ಎರಡು ವರ್ಷ ಬ್ಯಾನ್..?!

ಬೆಂಗಳೂರು: ಕನ್ನಡ ಕಿರುತೆರೆಯಿಂದಲೇ ಅನಿರುದ್ಧ್​ ಅವರನ್ನು 2 ವರ್ಷ ಬ್ಯಾನ್​ ಮಾಡಲಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಕನ್ನಡದ ಜನಪ್ರಿಯ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ವರದಿಯಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ ಅವರ ದೂರಿನ ಮೇರೆಗೆ … Continued

ಕರ್ನಾಟಕ ಹೈಕೋರ್ಟ್​ನಲ್ಲಿ ಗ್ರೂಪ್​ ಡಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ ಎಸ್​ಎಸ್​ಎಲ್​ಸಿ

:ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 150 ಹುದ್ದೆಗಳಲ್ಲಿ 21 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರಸಲಾಗಿದೆ. ಹತ್ತನೇ ತರಗತಿ ಪಾಸ್​ ಆಗಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 … Continued

ಶಾಲಾ ಬಸ್ – ಗೂಡ್ಸ್ ವಾಹನದ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ : ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದಲ್ಲಿ ವಿದ್ಯಾರ್ಥಿನಿಯರಿದ್ದ ಶಾಲಾ ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಥಣಿ ಪಟ್ಟಣದ ಬಣಜವಾಡ ಶಾಲೆಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಬಸ್‌ನಲ್ಲಿದ್ದ 10 … Continued