ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಒಂದೇ ಕುಟುಂಬದ ಮೂವರ ಶವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಎಂದು ಗುರುತಿಸಲಾಗಿದೆ. ಮಾರಣಾಂತಿಕ ರೋಗ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗಿದೆ. ಬಿಬಿಎಂಪಿ ಗುತ್ತಿಗೆ ನೌಕರನಾಗಿ … Continued

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ವನಂ ಶಿವರಾಮು, ಡಾ.ಶಂಭು ಬಳಿಗಾರಗೆ ತಜ್ಞ ಪ್ರಶಸ್ತಿ, 30 ಸಾಧಕರಿಗೆ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ-ಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದೆ. ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಡಾ ಜಿ.ಶಂ.ಪರಮಶಿವಯ್ಯ (ಜಿಶಂಪ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಪ್ರಕಟಿಸಲಾಗಿದೆ. ಅಲ್ಲದೆ, ಕರ್ನಾಟಕದ ವಿವಿಧ ಜಿಲ್ಲೆಗಳ ಒಟ್ಟು 30 ಜಾನಪದ … Continued

ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಮಡಿಕೇರಿಯಲ್ಲಿ ಅವರ ವಾಹನದ ಮೇಲೆ ಮೊಟ್ಟೆ ಎಸೆಯಲಾಗಿದೆ. ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ’ ಎಂಬಿತ್ಯಾದಿ … Continued

ರಾಯಚೂರಿನ ಜನ ತೆಲಂಗಾಣದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿದ್ದಾರೆ: ತೆಲಂಗಾಣ ಸಿಎಂ ವಿವಾದಾತ್ಮಕ ಹೇಳಿಕೆ

ವಿಕಾರಾಬಾದ್ (ತೆಲಂಗಾಣ): ಕರ್ನಾಟಕದ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿಕೊಳ್ಳಬೇಕು ಎಂಬ ಅರ್ಥದಲ್ಲಿ ಹೇಳಿಕೆ ನೀಡಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿವಾದವನ್ನು ಕೆದಕಿದ್ದಾರೆ ಎಂದು ವರದಿಯಾಗಿದೆ. ರಾಯಚೂರು ಜಿಲ್ಲೆಯ ಜನ ತಮ್ಮನ್ನು ತೆಲಂಗಾಣಕ್ಕೆ ಸೇರಿಸಿಕೊಳ್ಳಿ ಎಂದು ನನ್ನನ್ನು ಒತ್ತಾಯಿಸುತ್ತಿದ್ದಾರೆ’ ಎಂದು ಕೆಸಿಆರ್ ವಿಕಾರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಹೇಳಿದ್ದಾರೆ. 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ … Continued

ಸಿದ್ದರಾಮಯ್ಯ ಕಾರಿಗೆ ಘೇರಾವ್: ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ, ಕಾರಿನೊಳ ಸಾವರ್ಕರ್ ಫೋಟೋ ಹಾಕಿದರು

ಮಡಿಕೇರಿ : ಮಡಿಕೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್  ಹಾಕಿ ಘೋಷಣೆ ಕೂಗಿದ್ದಾರೆ ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿ … Continued

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ … Continued

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು, ವ್ಯಕ್ತಿ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಳಿಯ ದೇವಿಗದ್ದೆಯ ಸಂದೇಶ ಮಂಜುನಾಥ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued

ನಾಳೆ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ

ಬೆಂಗಳೂರು: ಮುಂಬರುವ ಚುನಾವಣೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಲು ನಾಳೆ, ಗುರುವಾರ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸೇರಿದಂತೆ ಜಿಲ್ಲಾಧ್ಯಕ್ಷರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು ಮತ್ತಿತರರು … Continued

ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ ಮಾಡಿ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, … Continued