ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ವಿತರಣೆ : ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಪ್ರಕಟಿಸಿದ್ದಾರೆ. ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದೆ. ನೀರಿಲ್ಲದೆ ಬರ ಆವರಿಸಿದೆ. ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದ ಬರಪೀಡಿತ ತಾಲೂಕುಗಳಿಗೆ ಹಣದ ಬದಲು … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued

ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ … Continued

ಶಿಕ್ಷಕಿ ವಿರುದ್ಧ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ‘ಪಾಕಿಸ್ತಾನಕ್ಕೆ ಹೋಗಿ’ ಎಂದು ನಿಂದಿಸಿದ ಆರೋಪ

ಶಿವಮೊಗ್ಗ: ನಗರದ ಸರ್ಕಾರಿ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಜಗಳ ಮಾಡಿಕೊಂಡ ಇಬ್ಬರು ಮುಸ್ಲಿಂ ಹುಡುಗರಿಗೆ, ನೀವು ಪಾಕಿಸ್ತಾನಕ್ಕೆ ಹೋಗಿ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಶಿಕ್ಷಕಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಶಿಕ್ಷಕಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ನಿರಾಕರಿಸಿದ್ದಾರೆ. ಸರ್ಕಾರಿ ಉರ್ದು ಶಾಲೆಯ 5ನೇ ತರಗತಿಯ ಇಬ್ಬರು … Continued

ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued

ಇಸ್ರೋ ಸೂರ್ಯಯಾನ: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ

ಬೆಂಗಳೂರು: ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯ ಎಲ್ 1 ಮಿಷನ್‌ನ ಮೊದಲ ಹಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ. ಇಸ್ರೋ ಈ ಬಗ್ಗೆ ಎಕ್ಸ್‌ (ಟ್ವಿಟರ್‌) ನಲ್ಲಿ ಮಾಹಿತಿ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಯೆಲ್ಲೋ ಅಲರ್ಟ್‌ … Continued

ಎನ್‌ಡಬ್ಲ್ಯು ಕೆಆರ್‌ಟಿಸಿಯಲ್ಲಿ ಟಿಕೆಟಿಗೆ ಹಣ ಪಾವತಿಸಲು ಯುಪಿಐ ವ್ಯವಸ್ಥೆ…!

ಹುಬ್ಬಳ್ಳಿ : ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರಿಗೆ ಇಲಾಖೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಇನ್ನುಮುಂದೆ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಪ್ರಾರಂಭ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು , ವಾಯುವ್ಯ ಕರ್ನಾಟಕ ರಸ್ತೆ … Continued

2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

ಬೆಂಗಳೂರು: ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಮತ್ತು ಪ್ರೌಢಶಾಲೆಯ 11 ಮಂದಿ ಸೇರಿದಂತೆ 31 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೆ, ಇಬ್ಬರು ಪ್ರಾಂಶುಪಾಲರು ಮತ್ತು 8 ಮಂದಿ ಉಪನ್ಯಾಸಕರನ್ನು … Continued

ಇನ್ಮುಂದೆ ವರ್ಗಾವಣೆಗೆ ಸಿಎಂ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿಗಳ ಅನುಮತಿ ಪಡೆದ ನಂತರವೇ ಇಲಾಖಾವಾರು ವರ್ಗಾವಣೆ ಮಾಡಬೇಕು. ಯಾವುದೇ ವರ್ಗಾವಣೆ ಮಾಡುವುದಿದ್ದರೂ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ಈ ಸುತ್ತೋಲೆ … Continued