ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಮಂಗಳೂರು : ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು … Continued

ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲು

ಮೈಸೂರು : ತಾಲೂಕಿನ ಮೀನಾಕ್ಷಿಪುರ ಬಳಿ ಕೆ.ಆರ್.ಎಸ್ ಹಿನ್ನೀರಿನಲ್ಲಿ‌ ಮುಳುಗಿ ಮೂವರು ವಿದ್ಯಾರ್ಥಿಗಳ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರು ವಿದ್ಯಾರ್ಥಿಗಳು ಮೈಸೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿಗಳನ್ನು ಪಡುವಾರಹಳ್ಳಿಯ ಭರತ್(20), ರಾಮಕೃಷ್ಣ ನಗರದ ಪ್ರವೀಣ್ (20), ಹೆಬ್ಬಾಳಿನ ಸೂರ್ಯಬೇಕರಿಯ ವರುಣ್(21) ಮೃತರು. ಮತ್ತಿಬ್ಬರು ವಿದ್ಯಾರ್ಥಿಗಳಾದ … Continued

ವೀಡಿಯೊ ..: ದೂಧ್‌ ಸಾಗರ ಜಲಪಾತ ನೋಡಲು ತೆರಳಿದವರಿಗೆ ಪೊಲೀಸರಿಂದ ಬಸ್ಕಿ ಶಿಕ್ಷೆ | ವೀಕ್ಷಿಸಿ

ಬೆಳಗಾವಿ : ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಗಡಿ ಭಾಗದಲ್ಲಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ದೂಧ್‌ ಸಾಗರ ಜಲಪಾತ ನೋಡಲು ಭಾನುವಾರ ತೆರಳಿದ ಪ್ರವಾಸಿಗರಿಗೆ ಗೋವಾ ಪೊಲೀಸರು ಶಾಕ್‌ ನೀಡಿದ್ದಾರೆ. ಪ್ರವಾಸಿಗರಿಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ಕಳುಹಿಸಿದ್ದಾರೆ. ಈ ಕುರಿತ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ಚಿತ್ರದುರ್ಗ: ನವಜಾತ ಶಿಶುವಿನ ಮೇಲೆ ಕೋತಿ ದಾಳಿ

ಚಿತ್ರದುರ್ಗ: ಮನೆಯಲ್ಲಿ ಮಲಗಿದ್ದ ನವಜಾತ ಶಿಶುವಿನ ಮೇಲೆ ಕೋತಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿ ಗ್ರಾಮದ ಮಂಜುಳಾ ಹಾಗೂ ಸಿದ್ದೇಶ ದಂಪತಿಯ 13 ದಿನದ ಹೆಣ್ಣು ಮಗುವನ್ನು ಮನೆಯಲ್ಲಿ ಮಲಗಿಸಿದ್ದ ವೇಳೆ ಕೋತಿ ಏಕಾಏಕಿ ಮನೆಗೆ ನುಗ್ಗಿ ದಾಳಿ ನಡೆಸಿದ್ದು, ಮಗುವಿನ … Continued

ಮಾಜಿ‌ ಸಚಿವ ಎಸ್​.ಆರ್​​.ಪಾಟೀಲರಿಗೆ ಅತ್ಯುತ್ತಮ ‌ಶಾಸಕ ಪ್ರಶಸ್ತಿ

ಬೆಂಗಳೂರು : ಹಿರಿಯ ರಾಜಕಾರಣಿ ಹಾಗೂ ಮಾಜಿ‌ ಸಚಿವ ಶಿವನಗೌಡ ರುದ್ರಗೌಡ ಪಾಟೀಲ್ (ಎಸ್​.ಆರ್​​.ಪಾಟೀಲ್) ಅವರಿಗೆ 2021ನೇ ಸಾಲಿನ ಅತ್ಯುತ್ತಮ ವಿಧಾನ ‌ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ. ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ವಿಧಾನ ಪರಿಷತ್‌ ಸದಸ್ಯರಾಗಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ, ಸಭಾ … Continued

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣ: ಕೆ.ಎಸ್. ಈಶ್ವರಪ್ಪ ನಿರಾಳ

ಬೆಂಗಳೂರು : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ಅವರ ಮೇಲೆ ಮಾಡಲಾಗಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಡುಪಿ ಪೊಲೀಸರು ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಅಂಗೀಕರಿಸಿದೆ. ಬಿಜೆಪಿ … Continued

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ

ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ ಹಾಗೂ ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ … Continued

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ಚಾಮರಾಜನಗರ: ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿತ್ತು ಹಾಗೂ ಮುಖ ಊದಿಕೊಂಡಿತ್ತು, 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ಆದರೆ ಇಂದು, … Continued

ಈ ದಿನಾಂಕದಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ? : ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಬೆಂಗಳೂರು: ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಕುಟುಂಬ ಕಲ್ಯಾ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, . 2 ಸಾವಿರ ರೂ.ಗಳನ್ನು ಆಗಸ್ಟ್‌ … Continued

ಚಿರತೆ ಸೆರೆ ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ..!

ಹಾಸನ : ಹೊಲದಲ್ಲಿ ಕಣ್ಣಿಗೆ ಬಿದ್ದ ಚಿರತೆಯನ್ನು ವ್ಯಕ್ತಿಯೊಬ್ಬರು ಸಾಹಸಪಟ್ಟು ಸೆರೆ ಹಿಡಿದು, ನಂತರ ತನ್ನದೇ ಬೈಕಿನಲ್ಲಿ ಕಟ್ಟಿಕೊಂಡು ಬಂದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಗಂಡಸಿ ಹೋಬಳಿಯ ಬಾಗೀವಾಳು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಗೀವಾಳು ಗ್ರಾಮದ ವೇಣುಗೋಪಾಲ ಎಂಬವರು ಜಮೀನಿಗೆ ಹೋಗಿದ್ದಾಗ ಅವರಿಗೆ ಚಿರತೆ ಕಾಣಿಸಿಕೊಂಡಿದೆ. ಆಗ ಅವರು … Continued