ಬಜೆಟ್ ಮಂಡನೆ ವೇಳೆ ಸದನಕ್ಕೆ ಬಂದು ಶಾಸಕರ ಸೀಟಿನಲ್ಲಿ 15 ನಿಮಿಷ ಕುಳಿತಿದ್ದ ಅನಾಮಿಕ : ಭದ್ರತಾ ಲೋಪ..?

ಬೆಂಗಳೂರು : ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುವಾಗ ಶಾಸಕರಲ್ಲದೇ ಇದ್ದರೂ ಓರ್ವ ಅನಾಮಿಕ ವ್ಯಕ್ತಿ ಸದನದಲ್ಲಿ ಬಂದು ಕುಳಿತಿದ್ದ ಪ್ರಸಂಗ ವರದಿಯಾಗಿದೆ. ಬಜೆಟ್ ಮಂಡನೆ ಮಾಡುವ ಸಂದರ್ಭದಲ್ಲಿ ಸುಮಾರು 15 ನಿಮಿಷಗಳ ಕಾಲ ಈ ಅನಾಮಿಕ ವ್ಯಕ್ತಿ ದೇವದುರ್ಗ‌ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಆಸನದಲ್ಲಿ ಕುಳಿತಿದ್ದ. ಅವರ ಆಸನದಲ್ಲಿ ಕೆಲಹೊತ್ತು ಕುಳಿತ ಈ … Continued

ಕರ್ನಾಟಕ ಬಜೆಟ್‌ 2023-24 ಗಾತ್ರ ₹3.27 ಲಕ್ಷ ಕೋಟಿಗೆ ಏರಿಕೆ ; ಆದರೆ ಸಾಲ ₹85,818 ಕೋಟಿಗೆ ಹೆಚ್ಚಳ : ವಿವಿಧ ವಲಯಕ್ಕೆ ಹಣ ಹಂಚಿದ್ದು ಹೀಗೆ

ಬೆಂಗಳೂರು: 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ತೆರಿಗೆ ಸೋರಿಕೆ ತಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಈ ಬಾರಿ ಖೋತಾ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ … Continued

ಗೃಹಜ್ಯೋತಿ ಯೋಜನೆ ಜಾರಿಗೆ ವಾರ್ಷಿಕ 13,910 ಕೋಟಿ- ಅನ್ನಭಾಗ್ಯ ಯೋಜನೆಗೆ 10,000 ಕೋಟಿ ರೂ.ವೆಚ್ಚ

ಬೆಂಗಳೂರು: ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಜಾರಿಗೆ ಐದು ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದ್ದು, ಗೃಹ ಲಕ್ಷ್ಮಿ ಯೋಜನೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24,166 ಕೋಟಿ ನಿಗದಿಪಡಿಸಲಾಗಿದೆ. ಉಚಿತ ವಿದ್ಯುತ್ ‘ಗೃಹಜ್ಯೋತಿ’ ಯೋಜನೆಗಾಗಿ ಇಂಧನ ಇಲಾಖೆಗೆ 22,773 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಗಾಗಿ ಆಹಾರ ಇಲಾಖೆಗೆ 10,460 ಕೋಟಿ ನಿಗದಿಪಡಿಸಲಾಗಿದೆ. … Continued

ಕರ್ನಾಟಕ ಬಜೆಟ್‌ 2023-24 : ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್‌, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು, 10ನೇ ತರಗತಿ ವರೆಗೆ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಅಸ್ಮಿತೆ ಎತ್ತಿಹಿಡಿಯುವ ಹೊಸ ಶಿಕ್ಷಣ ನೀತಿ ರೂಪಿಸುವ ಬಗ್ಗೆ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಒಟ್ಟು 37,587 ಕೋಟಿ ರೂ. ಹಣವನ್ನು ಮೀಸಲು ಇರಿಸಲಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಎಂದು ರಾಜ್ಯ ಬಜೆಟ್​ನಲ್ಲಿ ಉಲ್ಲೇಖಿಸಲಾಗಿದ್ದು ಅದನ್ನು ರದ್ದುಗೊಳಿಸುವುದಾಗಿ ಹೇಳಲಾಗಿದೆ. ಬಜೆಟ್​ನಲ್ಲಿ “ಬಹುಧರ್ಮ, … Continued

ಕರ್ನಾಟಕ ಬಜೆಟ್ 2023-24: ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ. ಮೀಸಲು, ಬೆಂಗಳೂರಿಗೆ ಬಂಪರ್‌, ಮದ್ಯಪ್ರಿಯರಿಗೆ ಶಾಕ್‌, ರೈತರಿಗೆ ಶೂನ್ಯ ಬಡ್ಡಿದರದ ಸಾಲದ ಮಿತಿ ಹೆಚ್ಚಳ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಕರ್ನಾಟಕ ಬಜೆಟ್ 2023-24ರ ಒಟ್ಟು ಗಾತ್ರ 3.27 ಲಕ್ಷ ಕೋಟಿ ರೂ.ಗಳಾಗಿದೆ. ಅದರಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ … Continued

ಕುಮಟಾ: ಮಳೆ ಆರ್ಭಟಕ್ಕೆ ಇಬ್ಬರು ನೀರು ಪಾಲು

ಕಾರವಾರ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಎಂದು ಗುರುತಿಸಲಾಗಿದೆ. ವಿಪರೀತ ಮಳೆಯಿಂದ ಅಘನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನೀರು ಗದ್ದೆಗಳಿಗೆ ನುಗ್ಗಿದೆ. ಹೀಗಾಗಿ ಗದ್ದೆಗಳು ಸಂಪೂರ್ಣ ನೀರಿನಿಂದ ತುಂಬಿವೆ. … Continued

ಮುಂದುವರಿದ ಮಳೆ : ದಕ್ಷಿಣ ಕನ್ನಡ, ಉಡುಪಿ ಶಾಲೆ-ಪಿಯು ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಣೆ

ಮಂಗಳೂರು/ಉಡುಪಿ : ಜೋರಾದ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7 ರಂದು ರಜೆ ಘೋಷಿಸಲಾಗಿದೆ. ಸತತ ನಾಲ್ಕನೇ ದಿನ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ಶುಕ್ರವಾರದ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಮಳೆಯ ಆರ್ಭಟ … Continued

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ : ತೆರಿಗೆಯೋ.. ವಿನಾಯ್ತಿಯೋ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ನೀತನ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿರುವುದರ ಮಧ್ಯೆ ಬಜೆಟ್‌ ಮಂಡನೆಯಾಗಲಿದೆ. ತಮ್ಮ 14ನೇ ಬಜೆಟ್ ಮಂಡನೆ ಮಾಡಲಿರುವ ಸಿದ್ದರಾಮಯ್ಯ ಈಗಾಗಲೇ ಬಜೆಟ್ ಪೂರ್ವಭಾವಿ ಸಭೆ ನಡೆಸಿಯಾಗಿದೆ. ವಿವಿಧ ಗ್ಯಾರಂಟಿ ಯೋಜನೆಗಳ ಜಾರಿ ಭರವಸೆಯೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಹಣಕಾಸು ಹೊಂದಿಸುವುದು … Continued

ಭಾರೀ ಮಳೆ : ಜುಲೈ 7ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲೆ-ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಭಾರೀ ಮಳೆ ಬೀಳುವ ಕುರಿತು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರವಾಳಿ … Continued

ಉಚಿತ ಬಸ್‌ ಪ್ರಯಾಣ ಯೋಜನೆ- ಬುರ್ಖಾ ತೊಟ್ಟು ಬಂದ ಪುರುಷ ಸಿಕ್ಕಿಬಿದ್ದ..!

ಹುಬ್ಬಳ್ಳಿ: ಮಹಿಳೆಯರಿಗೆ ನೀಡಲಾಗಿರುವ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಯ ಲಾಭ ಪಡೆಯಲು ಹೋದ ವ್ಯಕ್ತಿಯೊಬ್ಬ ಚಾಪೆ ಕೆಳಗೆ ನುಸುಳಲು ಹೋಗಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ವ್ಯಕ್ತಿಯೋರ್ವ ಉಚಿತ ಬಸ್ ಪ್ರಯಾಣಕ್ಕಾಗಿ ಬುರ್ಖಾ ಧರಿಸಿ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿಯಲ್ಲಿ ನಡೆದಿದೆ ಎಂದು … Continued