ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಬೆಂಗಳೂರು: 22023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮೇ 31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ. ಶಾಲೆಯ ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಆವರಣವನ್ನು ಸ್ವಚ್ಛಗೊಳಿಸಲು ಮತ್ತು ಅನಗತ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಶಾಲೆಗಳಿಗೆ … Continued

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ..?

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ, ರಾಜ್ಯಪಾಲರ ಅಂಕಿತದ ಬಳಿಕ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕಾಸು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೃಹತ್ ಮತ್ತು ಮಧ್ಯಮ … Continued

ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ: ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಇಬ್ಬರನ್ನು ತಡರಾತ್ರಿ ಬರ್ಬರವಾಗಿ ಹತ್ಯೆಯಾದ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದ ವರದಿಯಾಗಿದೆ. ಕೊಲೆಯಾದವನನ್ನು ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ಎಂದು ಗುರುತಿಸಲಾಗಿದೆ. ಮಹಮ್ಮದ್​ ಕುಡಚಿ ಮನೆಯ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಮಚ್ಚಿನಿಂದಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ ಎಂದು … Continued

ನೂತನ ಸಂಸತ್ ಭವನ ದೇಶದ ಆಸ್ತಿ, ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುವೆ : ದೇವೇಗೌಡ

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುತ್ತಿದ್ದೇನೆ. ಅದು ದೇಶದ ಆಸ್ತಿ ಹಾಗೂ ದೇಶದ ಕಾರ್ಯಕ್ರಮ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ದೇವೇಗೌಡರು ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ … Continued

ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್‌ ಡಿಕ್ಕಿ; ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ … Continued

ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ವಿರುದ್ಧ ವಿರುದ್ಧ ಪೊಲೀಸ್ ದೂರು ದಾಖಲು

ಮೈಸೂರು: ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಫೆ.12ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಟಿಪ್ಪು ಸುಲ್ತಾನ್‌ನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಗಿಸಬೇಕು ಎಂದು ಹೇಳಿದ್ದ ಬಿಜೆಪಿ ಮುಖಂಡ, ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ ಅವರು ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ವಿರುದ್ಧ … Continued

ಚುನಾವಣೆಯಲ್ಲಿ ಸೋಲು : ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು : ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಈ ಸೋಲು ಕೊನೆಯಲ್ಲ, ಮುಂದೆ ಪಕ್ಷವನ್ನು ಕಟ್ಟೋಣ ಎಂದು ಹೇಳಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದು, ದಯವಿಟ್ಟು ರಾಜೀನಾಮೆ ಅಂಗೀಕಾರ ಮಾಡಿ ಎಂದು ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.  ಜೆಡಿಎಸ್‌ ರಾಜ್ಯಾಧ್ಯಕ್ಷ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ : ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್‌ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ಮೇ 22 ರಂದು ಬೆಳ್ತಂಗಡಿಯ ಗುಣವತಿ ಅಮ್ಮ … Continued

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್​​ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ … Continued

ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಂದು, ಬುಧವಾರ (ಮೇ 24) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ … Continued