ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗಳಾದ ಕೆ.ಶಾಮರಾವ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ಶೈಲಜಾ ಗೋರನಮನೆ ಅವರಿಗೆ, ಡಾ.ಯು ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಗಣೇಶ ಇಟಗಿ ಹಾಗೂ ಜಿ.ಎಸ್ ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ದೀಪಕಕುಮಾರ ಶೇಣ್ವಿ ಅವರಿಗೆ ನೀಡಿ ಗೌರವಿಸಲಾಯಿತು. ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯ ಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಮಂಗಳವಾರ ವಜಾಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ವಿಕಾಸಕುಮಾರ ವಿಕಾಸ್‌ … Continued

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ (Heart Attacks) ಸಂಖ್ಯೆ ಹೆಚ್ಚಳವಾಗುತ್ತಿದ್ದು, , ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ ಅವರ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಿದೆ. ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ಅಧ್ಯಯನ ನಡೆಸಿ, 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು … Continued

ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ಮಂಗಳೂರು : ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್‌ನ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿನ ಆಡಳಿತ ಮಂಡಳಿಯು ಈ ಸ್ಥಾನಗಳಿಗೆ ಹೊಸಬರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿದೆ. ಕರ್ಣಾಟಕ ಬ್ಯಾಂಕ್‌ ಎಂಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued