ಹಿಜಾಬ್‌ ಕುರಿತು ಹೈಕೋರ್ಟ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ ಮುಸ್ಲಿಂ ವರ್ತಕರು

ಕಾರವಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿರ್ಬಂಧಿಸಿ‌ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂಬ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದ ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಹೈಕೋರ್ಟ್‌ ತ್ರಿಸದಸ್ಯ ಪೀಠ ಇಂದು, ಮಂಗಳವಾರ (ಮಾರ್ಚ್ 15) ಹಿಜಾಬ್‌ ಕುರಿತು ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂ … Continued

ಜೂನ್ 19 ರಂದು ಕಾಮೆಡ್‌ ಕೆ ಪ್ರವೇಶ ಪರೀಕ್ಷೆ

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK) ಯುಜಿಇಟಿ 2022 ಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಪರೀಕ್ಷೆ ಜೂನ್ 19 ರಂದು ನಡೆಸಲಾಗುತ್ತದೆ. 2022-23ನೇ ಶೈಕ್ಷಣಿಕ ವರ್ಷದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ ಸುಮಾರು 150 ನಗರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಾರ್ಚ್‌ 14ರಿಂದ ಕಾಮೆಡ್ ಕೆ ವೆಬ್ … Continued

ಸರ್ಕಾರ ಕೋರ್ಟ್ ಮೇಲೆ ಒತ್ತಡ ಹಾಕಿದೆ, ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ; ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು

ಉಡುಪಿ: ನಾವು ನಮ್ಮ ಕುರಾನ್ ಅನುಸರಣೆ ಮಾಡುತ್ತೇವೆ. ನಾವು ಸರ್ಕಾರದ ಆದೇಶ ಅನುಸರಿಸಬೇಕಾಗಿಲ್ಲ. ನಮಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತರಗತಿಗಳಲ್ಲಿ ಹಿಜಾಬ್ ನಿರ್ಬಂಧದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಐವರು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹೈಕೋರ್ಟ್‌ ತೀರ್ಪಿನ ನಂತರ ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವರು ವಿದ್ಯಾರ್ಥಿನಿಯರು ಹೈಕೋರ್ಟ್‌ ತೀರ್ಪಿನ ಕುರಿತು … Continued

ಹಿಜಾಬ್ ತೀರ್ಪು: ಹೈಕೋರ್ಟ್ ತೀರ್ಪಿನ ವಿರುದ್ಧ ಕೆಂಬಾವಿ ಕಾಲೇಜು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮಂಗಳವಾರ ಹಿಜಾಬ್ ಪ್ರಕರಣದ ತೀರ್ಪು ನೀಡಿದ ಕೆಲವೇ ಗಂಟೆಗಳ ನಂತರ, ಕರ್ನಾಟಕದ ಯಾದಗಿರಿಯ ಸುರಪುರ ತಾಲೂಕು ಕೆಂಬಾವಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ನಿರ್ಗಮಿಸಿದ್ದಾರೆ ಎಂದು ಇಂಡಿಯಾ ಟುಡೇ.ಕಾಮ್‌ ವರದಿ ಮಾಡಿದೆ. ವಿದ್ಯಾರ್ಥಿಗಳು ಪೂರ್ವಸಿದ್ಧತಾ ಪರೀಕ್ಷೆ ನಡೆಸಿದ್ದರು ಮತ್ತು ತೀರ್ಪು ಪ್ರಕಟವಾದ ನಂತರ ಅವರು ಬಹಿಷ್ಕರಿಸಿದರು. ಬೆಳಗ್ಗೆ 10 … Continued

ಹಿಜಾಬ್‌ ತೀರ್ಪಿನ ಬಗ್ಗೆ ಅಸಮಾಧಾನವಿದೆ, ನಾವು ಸುಪ್ರೀಂ ಕೋರ್ಟ್ ಗೆ ಹೋಗ್ತೇವೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಹಿಜಾಬ್ ವಿವಾದ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು ಎಂದು ಹೇಳಿದ್ದಾರೆ. ತಿಲಕ, ವಿಭೂತಿ ಅಲಂಕಾರಿಕ ವಸ್ತುವಲ್ಲ, … Continued

ಹಿಜಾಬ್ ನಿಷೇಧ: ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡ್ತೇವೆ-ಶಫಿ ಸಅದಿ

ಬೆಂಗಳೂರು: ಕೋರ್ಟ್ ತೀರ್ಪಿನ ಬಗ್ಗೆ ಧಾರ್ಮಿಕ ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ. ಸುಪ್ರೀಂಕೋರ್ಟ್ ಮೊರೆ ಹೋಗುವ ಚಿಂತನೆ ಇದೆ. ಕಾನೂನಾತ್ಮಕವಾಗಿ ನಾವು ನಮ್ಮ ಹಕ್ಕನ್ನು ಪಡೆದುಕೊಳ್ಳುತ್ತೇವೆ ಎಂದು ಹೈಕೋರ್ಟ್‌ ತೀರ್ಪಿನ ಬಗ್ಗೆ ಮೌಲಾನ ಶಫಿ ಸಅದಿ ಹೇಳಿದ್ದಾರೆ ಯಾವ ಆಧಾರದ ಮೇಲೆ ತೀರ್ಪು ಕೊಟ್ಟಿದ್ದಾರೆಂದು ಗೊತ್ತಿಲ್ಲ. ಹಿಜಾಬ್ ಕಡ್ಡಾಯವೆಂದು ಕುರಾನ್‌ನಲ್ಲಿ ಹೇಳಲಾಗಿದೆ. ಮಹಿಳೆಯರಿಗೆ ಹಿಜಾಬ್ ಕಡ್ಡಾಯ … Continued

ಹಿಜಾಬ್‌ ನಿಷೇಧ: ಹೈಕೋರ್ಟ್ ತೀರ್ಪು ಪಾಲಿಸಿ, ಕಾಲೇಜುಗಳಿಗೆ ಮರಳಿ ಬನ್ನಿ- ಶಿಕ್ಷಣ ಸಚಿವ ನಾಗೇಶ ಮನವಿ

ಬೆಂಗಳೂರು: ಹಿಜಾಬ್‌ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ವಸ್ತ್ರಸಂಹಿತೆಗೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೂ ನ್ಯಾಯಾಲಯ ಇಂದು ತನ್ನ ತೀರ್ಪಿನ ಮೂಲಕ ಉತ್ತರ ನೀಡಿದೆ ಎಂದು ಹೇಳಿದರು. ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಹೈಕೋರ್ಟ್ ತೀರ್ಪು ಪಾಲಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕು.ಶಾಲೆ-ಕಾಲೇಜುಗಳಿಂದ ದೂರ ಉಳಿದಿರುವ ವಿದ್ಯಾರ್ಥಿನಿಯರು ಮತ್ತೆ … Continued

ಹಿಜಾಬ್‌: ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು-ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಕ್ಷಣ ಬಹಳ ಮುಖ್ಯ ಯಾವುದೇ ಕಾರಣಕ್ಕೆ ವಿದ್ಯಾಭ್ಯಾಸ ಹಾಳು ಮಾಡಿಕೊಳ್ಳಬೇಡಿ. ಪರೀಕ್ಷೆಗಳನ್ನು ಬರೆಯಿರಿ, ಶಾಲಾ-ಕಾಲೇಜುಗಳಿಂದ ದೂರ ಉಳಿಯಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ. ಮಕ್ಕಳ ಶಿಕ್ಷಣದ ಪ್ರಜ್ಞೆ ಇದೆ. ಮಕ್ಕಳಿಗೆ … Continued

ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಇಸ್ಲಾಮಿಕ್ ನಂಬಿಕೆಯ ಅಡಿಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠವು ಮಂಗಳವಾರ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (ಶೀರ್ಷವಸ್ತ್ರ) ಧರಿಸುವುದನ್ನು ಪರಿಣಾಮಕಾರಿಯಾಗಿ ನಿಷೇಧಿಸುವ ಸರ್ಕಾರಿ ಆದೇಶವನ್ನು (GO) ಎತ್ತಿಹಿಡಿದಿದೆ. ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧವನ್ನು ಪ್ರಶ್ನಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಸಲ್ಲಿಸಿರುವ … Continued

ಇಂದಿನಿಂದ ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ

ಶಿರಸಿ: ರಾಜ್ಯದಲ್ಲೇ ಅತೀ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆ ಪಡೆದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಜಾತ್ರೆಯು ಇಂದಿನಿಂದ (ಮಾ.15 ರಿಂದ) ಆರಂಭವಾಗಲಿದ್ದು, ಮಾರ್ಚ್‌ 23ರ ವರೆಗೆ ನಡೆಯಲಿದೆ. ಕೊರೊನಾ ನಿಯಮಗಳನ್ನು ಸಡಿಲಿಕೆ ಮಾಡಿದ್ದರಿಂದ ಈ ಬಾರಿ ಜಾತ್ರೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆ ಈಗಾಗಲೇ ಮಾರಿಕಾಂಬಾ ದೇವರ(Marikamba Devi) ಜಾತ್ರೆಯ ಅಂಕೆಹಾಕುವ ಶಾಸ್ತ್ರ, … Continued