ಕರ್ನಾಟಕದ 16 ಜಿಲ್ಲೆಗಳಲ್ಲಿ‌ ದೈನಂದಿನ ಕೊರೊನಾ ಸೋಂಕು ಶೂನ್ಯ..!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 106 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಂದು 4 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,420 ಕ್ಕೆ ಇಳಿಕೆಯಾಗಿದೆ. ಅವಧಿಯಲ್ಲಿ 337 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಪ್ರತಿಶತ ಸಂಖ್ಯೆ ಶೇ3.77 ರಷ್ಟು ಇದೆ. ಬಾಗಲಕೋಟೆ, … Continued

ನಾಳೆಯಿಂದ ಒಂದು ವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ, ಮಂಗಳವಾರ ಬೆಳಿಗ್ಗೆ 10:30ಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ಕುರಿತು ಅರ್ಜಿಯ ತೀರ್ಪು ಪ್ರಕಟಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಒಂದು ವಾರ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಆದೇಶ ಹೊರಡಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 10:30ಕ್ಕೆ ಹೈಕೋರ್ಟ್ ನಿಂದ ಹಿಜಾಬ್ … Continued

ಹಿಜಾಬ್‌ ನಿಷೇಧ ಪ್ರಕರಣ: ಕರ್ನಾಟಕ ಹೈಕೋರ್ಟ್‌ನಿಂದ ನಾಳೆ ತೀರ್ಪು ಪ್ರಕಟ

ಬೆಂಗಳೂರು: ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮನವಿ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ನಾಳೆ. ಮಂಗಳವಾರ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್‌ ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು … Continued

2ನೇ ಟೆಸ್ಟ್ ನಲ್ಲೂ ಶ್ರೀಲಂಕಾವನ್ನು 238 ರನ್ ಗಳಿಂದ ಸೋಲಿಸಿ ಸರಣಿ ಗೆದ್ದ ಭಾರತ

ಬೆಂಗಳೂರು: ಬೆಂಗಳೂರಿನಲ್ಲಿ ಭಾrತ-ಶ್ರೀಲಂಕಾ ನಡುವೆ ನಡೆದ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಭಾರತ 238 ರನ್‌ಗಳಿಂದ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿತು. ಹಾಗೂ ಸರಣಿಯನ್ನು 2-0 ಜಯಿಸಿತು. 447 ರನ್ ಬೆನ್ನಟ್ಟಿದ ಶ್ರೀಲಂಕಾ ಎರಡನೇ ಮತ್ತು ಅಂತಿಮ ಟೆಸ್ಟ್‌ನ ಮೂರನೇ ದಿನದಂದು 208 ರನ್‌ಗಳಿಗೆ ಆಲೌಟ್ ಆಯಿತು. ದಿಮುತ್ ಕರುಣಾರತ್ನೆ ಅವರ ಹೋರಾಟದ 107 ಮತ್ತು ಕುಸಾಲ್ … Continued

ರಾಜ್ಯದಲ್ಲಿನ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾವಣೆ: ಸಚಿವ ಆಶೋಕ

ಬೆಂಗಳೂರು: ರಾಜ್ಯದಲ್ಲಿರುವ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಬಸವನಗೌಡ ತುರವಿಹಾಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ತಾಂಡಾಗಳು, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಸ್ತಾಪ ಇದ್ದು, ಈಗಾಗಲೇ 1441 ತಾಂಡಾ-ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ … Continued

ಆತುರ ಮಾಡ್ಬೇಡ ಹೇಳ್ದಷ್ಟು ಕೇಳು ಎಂದು ವಿಧಾನಸೌಧದಲ್ಲಿ ಮುಖಾಮುಖಿ ವೇಳೆ ಇಬ್ರಾಹಿಂಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟು ಜೆಡಿಎಸ್​ನತ್ತ ಮುಖಮಾಡಿರುವ ಸಿ.ಎಂ.ಇಬ್ರಾಹಿಂ ಅವರನ್ನು ಸೋಮವಾರ ವಿಧಾನಸೌಧದ ಕ್ಯಾಂಟೀನ್​ ಬಳಿ ಮಾತನಾಡಿಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಸಿಎಂ ಇಬ್ರಾಹಿಂರನ್ನು ನೋಡುತ್ತಿದ್ದಂತೆ ನಿಂತು ಮಾತನಾಡಿಸಿದ ಸಿದ್ದರಾಮಯ್ಯ ಅವರು, “ಮಾರ್ಚ್‌ 31ಕ್ಕೆ ಮನೆಗೆ ಬರ್ತೀನಿ, ಅಲ್ಲಿವರೆಗೆ ಸುಮ್ಮನಿರು, ಆತುರಕ್ಕೆ ಬಿದ್ದು ನಿರ್ಧಾರ … Continued

ಬ್ಯಾಂಕ್ ಕ್ಲರ್ಕ್​ನಿಂದಲೇ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಮೂವರ ಬಂಧನ

ಬೆಳಗಾವಿ: ಸವದತ್ತಿ ತಾಲೂಕಿನ ಮುರಗೋಡ ಬಿಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರುಬಿಡಿಸಿಸಿ ಬ್ಯಾಂಕ್​ನಿಂದ ಕೋಟಿಗಟ್ಟಲೆ ನಗದು, ಕೆ.ಜಿ.ಗಟ್ಟಲೆ ಚಿನ್ನ ಕದ್ದೊಯ್ದಿದ್ದ ಮೂವರನ್ನು ವಾರದೊಳಗೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 4.20 ಕೋಟಿ ರೂ. ನಗದು, 3 ಕೆಜಿ ಬಂಗಾರ ಆಭರಣಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಹಾಗೂ ಮುರಗೋಡ ಡಿಸಿಸಿ … Continued

ಉಕ್ರೇನ್ ನಲ್ಲಿ ದಾಳಿ ನಿಂತ ನಂತರ ನವೀನ್ ಮೃತದೇಹ ತರಲು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಘರ್ಷ ಪೀಡಿತ ಉಕ್ರೇನ್ ನಲ್ಲಿ ಇನ್ನೂ ಬಾಂಬ್ ದಾಳಿ ನಿಂತಿಲ್ಲ. ಬಾಂಬ್ ದಾಳಿ ನಿಂತ ಬಳಿಕ ನವೀನ್ ಮೃತದೇಹವನ್ನು ತರುವ ಬಗ್ಗೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಬಾಂಬ್‌ ದಾಳಿ ಇನ್ನೂ ನಡೆಯುತ್ತಿದೆ; ದಾಳಿ ನಿಂತ ನಂತರ ದೇಹ ತರುವ ಬಗ್ಗೆ … Continued

ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. … Continued

ಆರು ವರ್ಷಗಳ ಹಿಂದೆ ಕಳೆದುಹೋಗಿದ್ದ ಮಾತು ಬಾರದ ಪುತ್ರನನ್ನು ಹುಡುಕಿಕೊಟ್ಟ ಆಧಾರ್‌ ಕಾರ್ಡ್‌..!

ಬೆಂಗಳೂರು: ಆಧಾರ್‌ ಕಾರ್ಡ್‌ನಿಂದಾಗಿ ಆರು ವರ್ಷಗಳ ಹಿಂದೆ ಕಳೆದುಹೋಗಿದ್ದ ಮಾತುಬಾರದ ಮಗ ತನ್ನ ತಾಯಿಯ ಮಡಿಲು ಸೇರಿದ್ದಾನೆ. ಆಧಾರ್‌ ಕಾರ್ಡ್‌ ನೀಡಿದ ಮಾಹಿತಿ ಆಧಾರದಲ್ಲಿ ಕಳೆದ 6 ವರ್ಷಗಳ ಹಿಂದೆ ಯಲಹಂಕದಲ್ಲಿ ನಾಪತ್ತೆಯಾಗಿದ್ದ ಮಾತು ಬಾರದ ಮಗ ತಾಯಿ ಮಡಿಲನ್ನು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭರತ (19) ಮಾತು ಬಾರದ ಯುವಕನಾಗಿದ್ದು, 2016ರಲ್ಲಿ ನಾಪತ್ತೆಯಾಗಿದ್ದ. 2016ರಲ್ಲಿ … Continued