ಕರ್ನಾಟಕದಲ್ಲಿ ಹಲವೆಡೆ ನಾಲ್ಕು ದಿನ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು : ಇಂದಿನಿಂದ (ಮಾರ್ಚ್‌ 18) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 21ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು … Continued

ಬೆಂಗಳೂರು ಐಐಎಸ್‌ಸಿಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 105 ಕೋಟಿ ರೂ. ದೇಣಿಗೆ ನೀಡಿದ ಅಜಿತ್-ಸಾರಾ ಇಸಾಕ್ ದಂಪತಿ..!

ಬೆಂಗಳೂರು: ಸಿಬ್ಬಂದಿ ಮತ್ತು ಮಾನವ ಸಂಪನ್ಮೂಲ ಸಂಸ್ಥೆ ಕ್ವೆಸ್ ಕಾರ್ಪ್ ಸಂಸ್ಥಾಪಕ ಅಜಿತ್ ಇಸಾಕ್ ಮತ್ತು ಅವರ ಪತ್ನಿ ಸಾರಾ ಇಸಾಕ್ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISc) ಸಾರ್ವಜನಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲು 105 ಕೋಟಿ ರೂ.ಗಳನ್ನು ದೇಣಿಗೆ ನೀಡಿದ್ದಾರೆ..! ಅಜಿತ್ ಮತ್ತು ಸಾರಾ ಇಸಾಕ್ ಸೆಂಟರ್ ಫಾರ್ ಪಬ್ಲಿಕ್ ಹೆಲ್ತ್ (ICPH) ಎಂದು … Continued

15 ಸಾವಿರ ಶಿಕ್ಷಕರ ನೇಮಕಾತಿ : ಮೇ 21, 22ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

ಬೆಂಗಳೂರು: ಶಿಕ್ಷಕರ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 21 ಮತ್ತು 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾರ್ಚ್‌ 22 ರಿಂದ ಏಪ್ರಿಲ್‌ 22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ. … Continued

ಈ ವರ್ಷ ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯ ವಿಷಯ ಅಳವಡಿಕೆ ಇಲ್ಲ: ಸಚಿವ ನಾಗೇಶ

ಬೆಂಗಳೂರು: ಗುಜರಾತ್‌ನಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಪರಿಚಯಿಸುವ ವಿಚಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಪಠ್ಯಪುಸ್ತಕದಲ್ಲಿ ಈ ವರ್ಷ ಪಠ್ಯದಲ್ಲಿ ಭಗವದ್ಗೀತೆಯನ್ನ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಹಲವರು ಈಗ ಪುಸ್ತಕದಲ್ಲಿ ಜ್ಞಾನವಿದೆ, ಆದರೆ ಸಂಸ್ಕಾರವಿಲ್ಲ ಎಂದು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಜ್ಞಾನದ ಜತೆ ಸಂಸ್ಕಾರ ಕಲಿಸಬೇಕಿದೆ. ನೈತಿಕತೆ … Continued

ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದ ಬಗ್ಗೆ ವರದಿಯಾಗಿದೆ. ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಗಬ್ಬೂರ ಬೈಪಾಸ್ ವೃತ್ತದ ಬಳಿಯ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದೊಡ್ಡಬಳ್ಳಾಪುರವರಾದ … Continued

ರೈಲು ಡಿಕ್ಕಿ ಹೊಡೆದು ಕಾಡುಕೋಣ-ಮರಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡುಕೋಣ ಮತ್ತು ಅದರ ಮರಿ ಮೃತಪಟ್ಟ ಘಟನೆ ಗುರುವಾರ ಮಾ.17ರಂದು ನಡೆದ ಬಗ್ಗೆ ವರದಿಯಾಗಿದೆ. ಕಾಡುಕೋಣ ಮತ್ತು ಅವರ ಮರಿ ಮೇವು ಅರಸಿ ಕಾಡಿನಿಂದ ಹೊರ ಬಂದಿದ್ದು, ಈ ವೇಳೆ ಗುರುವಾರ ಬೆಳಿಗ್ಗೆ ರೈಲುಹಳಿ ದಾಟುವಾಗ ರೈಲು … Continued

ಮಲ್ಪೆಯಲ್ಲಿ ಹಿಜಾಬ್ ಪರ ಗೋಡೆ ಬರಹ

ಉಡುಪಿ: ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಪರವಾಗಿ ಕಿಡಿಗೇಡಿಗಳು ಗೋಡೆಬರಹ ಬರೆದಿದ್ದಾರೆ. ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಗೋಡೆ ಬರಹ ಬರೆಯಲಾಗಿದೆ. ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. “ಹಿಜಾಬ್ ಮೂವ್ ಮೆಂಟ್”, “ಹಿಜಾಬ್ ಈಸ್ ಅವರ್ ರೈಟ್” ಎಂಬ ಗೋಡೆ ಬರಹ ಪತ್ತೆಯಾಗಿದೆ. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ನ್ಯಾಯಾಲಯದ … Continued

ಸಂಚಾರ ನಿಯಮ ಉಲ್ಲಂಘನೆ: ರಾಜ್ಯದಲ್ಲಿ 3 ವರ್ಷದಲ್ಲಿ ಸಂಗ್ರಹಿಸಿದ ಹಣವೆಷ್ಟು ಗೊತ್ತಾ..?

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳಿಂದ ಕಳೆದ ಮೂರು ವರ್ಷದಲ್ಲಿ 660.97 ಕೋಟಿ ರೂ.ಗಳ ದಂಡ ಸಂಗ್ರಹಿಸಲಾಗಿದೆ…! ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಪ್ರಕರಣಗಳಿಂದ ಸಂಗ್ರಹಿಸಲಾದ … Continued

ಸದ್ಯದಲ್ಲೇ ಪುನೀತ್‌ ರಾಜಕುಮಾರಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಸದ್ಯದಲ್ಲೇ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ … Continued

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ … Continued