ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ: ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ, ಕೆಲವು ಹಾಲಿ ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿಬಿಡುಗಡೆಯಾಗಿದ್ದು, ಇವುಗಳಲ್ಲಿ 52 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಹಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೊದಲನೇ ಪಟ್ಟಿಯಲ್ಲಿ ಬಿಡೆಗಡೆಯಾದ 189 ಅಭ್ಯರ್ಥಿಗಳ ಪೈಕಿ … Continued

ಉದ್ಯಮಿ ಆನಂದ ಮಹಿಂದ್ರಾ ಗಮನ ಸೆಳೆದ ಅಂಕೋಲಾ ಬಸ್‌ ನಿಲ್ದಾಣದಲ್ಲಿನ ಹಾಲಕ್ಕಿ ಮಹಿಳೆಯ ಸ್ವಚ್ಛತೆ | ವೀಕ್ಷಿಸಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿನಿಂದ ಹೊರಚೆಲ್ಲಿದ ಕಸ ಆರಿಸಿ ಕಸದ ಬುಟ್ಟಿಗೆ ಹಾಕುತ್ತಿರುವ ಹಾಲಕ್ಕಿ ಮಹಿಳೆಯ ಸ್ವಚ್ಛತಾ ಕಳಕಳಿಯ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಈ ಮಹಿಳೆಯ ಕೆಲಸಕ್ಕೆ ಹಲವಾರು ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇಸಿಗೆ ಸಮಯದಲ್ಲಿ ಸಿಗುವ ಕಾಡು ಹಣ್ಣುಗಳನ್ನು … Continued

ಬಿಜೆಪಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ರಾಜೀನಾಮೆ ಪತ್ರ ವೈರಲ್, ಸ್ಪಷ್ಟನೆ ನೀಡಿದ ಶೆಟ್ಟರ್

ಹುಬ್ಬಳ್ಳಿ: ಕ್ಷೇತ್ರ ಬಿಟ್ಟುಕೊಡುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಅವರಿಗೆ ಬಿಜೆಪಿ ಹೈಕಮಾಂಡ್ ದೂರವಾಣಿ ಕರೆ ಮಾಡಿದ ಬೆನ್ನಲ್ಲೇ ಅವರ ಹೆಸರಿನಲ್ಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ ಶೆಟ್ಟರ್, ನನ್ನ ಹೆಸರಿನಲ್ಲಿ ವೈರಲ್ ಆಗುತ್ತಿರುವ ರಾಜೀನಾಮೆ ಪತ್ರ ನಕಲಿ ಎಂದು ಹೇಳಿದ್ದಾರೆ. ನಾನು ಬಿಜೆಪಿ ಪ್ರಾಥಮಿಕ … Continued

ಶಿವಮೊಗ್ಗ: ದಾಖಲೆ ಇಲ್ಲದ 5.83 ಕೋಟಿ ರೂ.ಮೌಲ್ಯದ ಚಿನ್ನದ ಪೊಲೀಸರ ವಶಕ್ಕೆ

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುತ್ತಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರಿನ‌ ಎಲೆರೇವಣ್ಣನ ಕೇರಿಯಲ್ಲಿರುವ ಚಿನ್ನದ ಅಂಗಡಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಚಿನ್ನದ ಅಂಗಡಿಯಲ್ಲಿ ದಾಳಿ … Continued

ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡಿನಿಂದ ಕರೆ ಬಂದಿದ್ದು ನಿಜ…ವರಿಷ್ಠರ ಮಾತಿನಿಂದ ನೋವಾಗಿದೆ: ಜಗದೀಶ ಶೆಟ್ಟರ

ಹುಬ್ಬಳ್ಳಿ: ಇಂದು, ಮಂಗಳವಾರ ಬೆಳಿಗ್ಗೆ ಬಿಜೆಪಿ ಹೈಕಮಾಂಡ್ ನಾಯಕರಿಂದ ಕರೆ ಬಂದಿದ್ದು ನಿಜ. ಬೇರೆಯವರಿಗೆ ಅವಕಾಶ ಮಾಡಿಕೊಡಿ ಎಂದು ವರಿಷ್ಠರು ಹೇಳಿದರು. ಹೈಕಮಾಂಡ್ ನಾಯಕರ ಮಾತು ಕೇಳಿ ನನಗೆ ನೋವಾಯಿತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯಿಂದ ನನಗೆ ಟಿಕೆಟ್‌ ಸಿಗುವುದು ಅನುಮಾನ ಎಂದು … Continued

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. … Continued

ದೇಶದ ಟಾಪ್‌-12 ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳ ಪಟ್ಟಿಯಲ್ಲಿ ಕರ್ನಾಟಕದ ಐದು ಹುಲಿ ಸಂರಕ್ಷಿತ ಪ್ರದೇಶಗಳಿಗೆ ಸ್ಥಾನ

ಬೆಂಗಳೂರು: ಕರ್ನಾಟಕದ ಪ್ರಾಜೆಕ್ಟ್ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವದ ಮೌಲ್ಯಮಾಪನದಲ್ಲಿ (MEE) ಹೆಚ್ಚಿನ ಅಂಕಗಳನ್ನು ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಿದ ಭಾರತೀಯ ಹುಲಿ ಸಂರಕ್ಷಿತ ವರದಿಯ ಐದನೇ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಮೌಲ್ಯಮಾಪನ (MEE) ನಲ್ಲಿ ಕರ್ನಾಟಕದ ಎಲ್ಲ ಐದು ಹುಲಿ ಸಂರಕ್ಷಿತ ಪ್ರದೇಶಗಳು ಅಗ್ರ 12 ರಲ್ಲಿ ಸ್ಥಾನ … Continued

ಏಪ್ರಿಲ್‌ 18ರಿಂದ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ ಡಿಎಂಸಿ) ಏಪ್ರಿಲ್‌ 18ರಿಂದ 26ರ ವರೆಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. ಕೆಎಸ್ಎನ್ ಡಿಎಂಸಿ ಪ್ರಕಟಣೆಯ ಪ್ರಕಾರ, ಏಪ್ರಿಲ್‌ 18ರಿಂದ 26ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ತಾಲೂಕು, … Continued

ಪಿಎಸ್‌ಐ ಪ್ರಕರಣ: ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ, ಹಾಲಿ ಅರ್ಜಿದಾರರಾಗಿರುವ 145 ಮಂದಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನಿರ್ದೇಶಿಸಿದೆ. ಜೂನ್‌ 15ರ ಒಳಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ. ರಾಜ್ಯ ಸರ್ಕಾರದ ಮರು ಪರೀಕ್ಷೆ ಆದೇಶ … Continued

ಕಾಂಗ್ರೆಸ್ 3ನೇ ಪಟ್ಟಿ ಗೊಂದಲ : ದಿಢೀರ್ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ, ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ 3ನೇ ಲಿಸ್ಟ್ ಗೊಂದಲದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಿಢೀರ್ ದೆಹಲಿಗೆ ತೆರಳಿದ್ದಾರೆ. ಮೂರನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಇಬ್ಬರೂ ನಾಯಕರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ … Continued