ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ: ಸಿಎಂ ಬೊಮ್ಮಾಯಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ, ಮಾರ್ಚ್‌ ೧ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಏತನ್ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗ ಜಾರಿ ಸಂಬಂಧ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಈ ವರದಿ ಕೈಸೇರಿದ ಬಳಿಕ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ … Continued

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು. ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. … Continued

ರಾಜ್ಯ ಸರ್ಕಾರದ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟ : ಮೂವರಿಗೆ ಪ್ರಶಸ್ತಿ ಘೋಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದೆ. ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಎರಡು ವರ್ಷದ ಪ್ರಶಸ್ತಿ ಘೋಷಿಸಿರಲಿಲ್ಲ. ಈಗ ಈ ವರ್ಷದ ಪ್ರಶಸ್ತಿಯೂ ಸೇರಿದಂತೆ ಏಕಕಾಲಕ್ಕೆ ಮೂರು ವರ್ಷದ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೋಮವಾರ ರಾತ್ರಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇಂದು, ಮಂಗಳವಾರ ಕದಂಬೋತ್ಸವ … Continued

15000 ಶಾಲಾ ಶಿಕ್ಷಕರ ನೇಮಕಾತಿಗೆ 1:1 ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು, ಸೋಮವಾರ ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ ತಿಳಿಸಿದ್ದಾರೆ. 15 ಸಾವಿರ … Continued

ನಿಮ್ಮ ಪ್ರೀತಿಯ ಋಣ ತೀರಿಸುವೆ : ಬೆಳಗಾವಿಯಲ್ಲಿ 2240 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ-ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿ ಭರವಸೆ

ಬೆಳಗಾವಿ : ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೆಳಗಾವಿಯ ಜನರು ನೀಡಿದ … Continued

ಇನ್ನು ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ: ಪುಣೆಗೆ ಹುಬ್ಬಳ್ಳಿಯಿಂದ ಪ್ರತಿ ದಿನ ವಿಮಾನ ಸೇವೆ ಪ್ರಾರಂಭವಾಗಲಿದ್ದು, ಇದರಿಂದ ವಾಣಿಜ್ಯ ನಗರಿಯ ವಿಮಾನಯಾನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್ 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ಪ್ರತಿ ದಿನ ವಿಮಾನಯಾನ ಸೇವೆ ಪ್ರಾರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ದಿನ 6E … Continued

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಯಡಿಯೂರಪ್ಪಗೆ ಜನ್ಮದಿನದ ಶುಭಾಷಯ ಕೋರಿದ ಪ್ರಧಾನಿ ಮೋದಿ

ಶಿವಮೊಗ್ಗ: ಕೆಲವೇ ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಐದನೇ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಇಂದು, ಸೋಮವಾರ ಲೋಕಾರ್ಪಣೆ ಮಾಡಿದ್ದಾರೆ. ಅಲ್ಲದೆ, ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 80ನೇ ಜನ್ಮದಿನವೂ ಆಗಿದ್ದು, ಮೋಧಿ ಶುಭ ಹಾರೈಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ … Continued

1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲ್ಲಿಸಿದ್ದ ಮಗ: ಪುತ್ರ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

ಬೆಂಗಳೂರು:ಕೊಲೆ ಪ್ರಕರಣವೊಂದರಲ್ಲಿ ತಂದೆಯ ಕೊಲೆ ಮಾಡಲು ಒಂದು ಕೋಟಿ ರೂ. ಸುಪಾರಿ ನೀಡಿದ್ದ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಮಾರತ್‍ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ನೀಡಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದಿದ್ದ ಶಿವಕುಮಾರ ಹಾಗೂ ನವೀನ ಬಂಧಿತ ಆರೋಪಿಗಳು.ಅಪಾರ್ಟಮೆಂಟ್‍ನ ಪಾರ್ಕಿಂಗ್ ಲಾಟ್‍ನಲ್ಲಿ ಫೆಬ್ರವರಿ 13ರಂದು ನಾರಾಯಣಸ್ವಾಮಿ(70) ಎಂಬವರ ಕೊಲೆ ಆಗಿತ್ತು. ಈ ಪ್ರಕರಣದ … Continued

ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯದಲ್ಲಿ ಇಂದಿನಿಂದ ಟೋಲ್ ಸಂಗ್ರಹ

ಬೆಂಗಳೂರು: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಇಂದಿನಿಂದ (ಫೆಬ್ರವರಿ 27ರಿಂದ) ಆರಂಭವಾಗಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್​ ಸಂಗ್ರಹ ಆರಂಭವಾಗಿದೆ. ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಹತ್ತುಪಥಗಳ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಅದಕ್ಕೂ ಮುನ್ನವೇ ಪ್ರಯಾಣಿಕರು ಟೋಲ್ ಕಟ್ಟಬೇಕಿದೆ. 117 ಕಿ.ಮೀ ಉದ್ದದ ಹೆದ್ದಾರಿಯ ಬೆಂಗಳೂರು–ನಿಡಘಟ್ಟವರೆಗಿನ 56 ಕಿ.ಮೀ. ಉದ್ದದ … Continued

ಜರ್ಮನಿಯಲ್ಲಿ ಕೆಲಸ ಮಾಡುವುದನ್ನು ಪರಿಗಣಿಸಿ, ವೀಸಾ ಸರಳಗೊಳಿಸ್ತೇವೆ: ಭಾರತೀಯ ಟೆಕ್ಕಿಗಳಿಗೆ ಹೇಳಿದ ಚಾನ್ಸಲರ್ ಓಲಾಫ್ ಸ್ಕೋಲ್ಜ್

ಬೆಂಗಳೂರು: ಭಾರತೀಯ ಮಾಹಿತಿ ತಂತ್ರಜ್ಞಾನ ತಜ್ಞರು ಜರ್ಮನಿಯಲ್ಲಿ ತಮ್ಮ ಕುಟುಂಬಗಳೊಂದಿಗೆ ಕೆಲಸ ಮಾಡಲು ಮತ್ತು ವಾಸಿಸಲು ವೀಸಾಗಳನ್ನು ನೀಡುವುದನ್ನು ಸರಳಗೊಳಿಸಲು ಜರ್ಮನಿ ಯೋಜಿಸುತ್ತಿದೆ ಎಂದು ಜರ್ಮನ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ. ಫೆಬ್ರವರಿ 25-26 ರವರೆಗೆ ಭಾರತಕ್ಕೆ ಅವರ ಅಧಿಕೃತ ಭೇಟಿಯಲ್ಲಿ, ಸ್ಕೋಲ್ಜ್ ಅವರು ಭಾರತೀಯ ಟೆಕ್ಕಿಗಳಿಗೆ ಜರ್ಮನಿಯಲ್ಲಿ ಕೆಲಸದ ವೀಸಾಗಳನ್ನು ಪಡೆಯುವುದನ್ನು ಸುಲಭಗೊಳಿಸಲು ಜರ್ಮನ್ … Continued