ಅಮಿತ್‌ ಶಾ ಸೂಚನೆ ನಂತರ ಬೆಳಗಾವಿಯಲ್ಲಿ ಮಹಾಮೇಳಾವ ಆಯೋಜನೆ ಮಾಡುತ್ತದೆಯೇ ಎಂಇಎಸ್‌..?

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವ ಆಯೋಜಿಸಲು ಮುಂದಾಗಿದೆ ಎನ್ನಲಾಗಿದೆ. ಆದರೆ ಗೊಲದಲವೂ ಇದೆ.. ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನದ ವೇಳೆ ಎಂಇಎಸ್‌ ಮಹಾಮೇಳಾವ ಸಂಘಟಿಸುತ್ತ ಬಂದಿದ್ದು, ಅದರಲ್ಲಿ ಕರ್ನಾಟಕದ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 25ರಂದು ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಮೂವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ:ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಹಾಗೂ ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭ ಡಿಸೆಂಬರ್‌ 25ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 25ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದ್ದು, … Continued

ಮುರುಘಾ ಶರಣರ ವಿರುದ್ಧ ಪಿತೂರಿ ಪ್ರಕರಣ: ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 15ರ ತಡರಾತ್ರಿ ದಾವಣಗೆರೆಯಲ್ಲಿ ಸೌಭಾಗ್ಯ ಬಸವರಾಜನ್ ಅವರನ್ನು ಬಂಧಿಸಲಾಗಿದೆ. ಬಸವರಾಜನ್‌ ಹಾಗೂ ಸೌಭಾಗ್ಯ … Continued

ಜರ್ಮನಿಯಲ್ಲಿ ಸಂಭವಿಸಿದ ಮೊಬೈಲ್‌ ಸ್ಫೋಟದಿಂದ ದಾವಣಗೆರೆ ಮೂಲದ ವಿದ್ಯಾರ್ಥಿ ಸಾವು

ಬೆಂಗಳೂರು: ಜರ್ಮನಿಯಲ್ಲಿ ಸಂಭವಿಸಿದ ಮೊಬೈಲ್ ಸ್ಫೋಟದಿಂದ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಆಗಿ ಕರ್ನಾಟಕದ ದಾವಣಗೆರೆ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ. ದಾವಣಗೆರೆಯ ಸರಸ್ವತಿ ನಗರದ ಶಿಕ್ಷಕ ದಂಪತಿಯಾದ ರೇವಣಸಿದ್ದಪ್ಪ, ಇಂದಿರಮ್ಮ ಅವರ ಪುತ್ರ ಸಂತೋಷ ಮೃತ ವಿದ್ಯಾರ್ಥಿ. ಸಂತೋಷ, ಜರ್ಮನ್ ನ ಕೆಮ್ನೀಟ್ಜ್ (CHIMNITZ) ವಿಶ್ವ ವಿದ್ಯಾಲಯದಲ್ಲಿ ಕೆಮ್ನೀಟ್ಜ್ (CHIMNITZ) ಟೆಕ್ನಾಲಜೀಸ್ ನಲ್ಲಿ ಎಂಎಸ್‌ ಓದುತ್ತಿದ್ದ … Continued

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ..!

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರ ರೂ.ಗಳಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಸುರಕ್ಷತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ … Continued

ಡಿಸೆಂಬರ್‌ 18ರಂದು ಹುಬ್ಬಳ್ಳಿಯಲ್ಲಿ ಶ್ರೀ ಅಜಿತ ಸಾಹಿತ್ಯೋತ್ಸವ ಕಾರ್ಯಕ್ರಮ, 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ : ಭವರಲಾಲ್‌ ಜೈನ್‌

ಹುಬ್ಬಳ್ಳಿ: ಶ್ರೀ ಅಜಿತ್ ಸಾಹಿತ್ಯ ಮಹೋತ್ಸವ ಸಮಿತಿ ಹಾಗೂ ಅರ್ಹಂ ಪರಿವಾರ ಟ್ರಸ್ಟ್ ವತಿಯಿಂದ ಡಿಸೆಂಬರ್‌ 18ರಂದು ಶ್ರೀ ಅಜಿತ ಸಾಹಿತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ನಡೆಯಲಿರುವ ಭವ್ಯ ಟೆಂಟ್‌ನಲ್ಲಿಯೇ ಮಾಧ್ಯಮದವರಿಗೆ ವಿವರ ನೀಡಿದ ಅಜಿತ ಸಾಹಿತ್ಯೋತ್ಸವ ಸಮಿತಿ ಅಧ್ಯಕ್ಷ ಭವರಲಾಲ್ ಸಿ. ಜೈನ ಅವರು ಮಾತನಾಡಿ, ಜೈನಾಚಾರ್ಯರಾದ ಅಜಿತಶೇಖರ ಸುರೀಶ್ವರ ಅವರು ಕಳೆದ ಒಂದು … Continued

ಸುಲಿಗೆ ಯತ್ನದ ಆರೋಪ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನ ಬಂಧನ

ಮಂಗಳೂರು: ಚಿನ್ನ ಮತ್ತು ನಗದು ಬೇಡಿಕೆ ಈಡೇರದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಕೋವೂರು ನಿವಾಸಿ ಸುರೇಶ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಾವು ಮತ್ತು ಪವಿತ್ರನ್ ಸುರತ್ಕಲ್‌ನಲ್ಲಿ ಪಾಲುದಾರಿಕೆ ಆಧಾರದ ಮೇಲೆ ವ್ಯಾಪಾರ … Continued

ಮಂಗಳೂರು ಆಟೋ ಸ್ಫೋಟ ಪ್ರಕರಣ : ತನಿಖೆ ಮಾಡದೆ ಉಗ್ರಗಾಮಿ ಎಂದು ಹೇಗೆ ಹೇಳಿದ್ರಿ ಎಂದು ಡಿಕೆ ಶಿವಕುಮಾರ ಪ್ರಶ್ನೆ

ಬೆಂಗಳೂರು: ಕಳೆದ ತಿಂಗಳು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ತನಿಖೆ ನಡೆಸದೆ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದ ಪ್ರಯಾಣಿಕನನ್ನು “ಭಯೋತ್ಪಾದಕ” ಎಂದು ಕರೆದಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಪ್ರಶ್ನಿಸಿದ್ದಾರೆ. ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣವು ಮುಂಬೈ ದಾಳಿ ಅಥವಾ … Continued

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್‌. ಪಾಟೀಲ, ಮುಖಂಡ ಶ್ರೀನಿವಾಸ ಭಟ್‌ ದಾತ್ರಿ

ಬೆಂಗಳೂರು: ಇಂದು ಗುರುವಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲ ಹಾಗೂ ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಪ್ರಮುಖ ಶ್ರೀನಿವಾಸ ಭಟ್‌ ದಾತ್ರಿ ಶ್ರೀನಿವಾಸ ಭಟ್‌ ದಾತ್ರಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ … Continued

ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ವಿದ್ಯಾರ್ಥಿನಿಯರು…!

ಮಂಡ್ಯ: ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಮುಖ್ಯ ಶಿಕ್ಷಕನೋರ್ವನಿಗೆ ವಿದ್ಯಾರ್ಥಿನಿಯರೆಲ್ಲ ಸೇರಿ ಧರ್ಮದೇಟು ನೀಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ವರದಿಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ನಿಲಯದಲ್ಲಿ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ನೊಂದ ವಿದ್ಯಾರ್ಥಿನಿಯರೆಲ್ಲ ಸೇರಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರೌಢ … Continued