ಬೆಳಗಾವಿ ಚಲೋ: ಬೆಳಗಾವಿಯತ್ತ ಬರುತ್ತಿರುವ ಕರವೇ ಕಾರ್ಯಕರ್ತರು

ಬೆಳಗಾವಿ: ಎಂಇಎಸ್ ಉದ್ಧಟತನ ಹಾಗೂ ಕನ್ನಡಿಗರ ಮೇಲೆ ಪೊಲೀಸ್ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಮಂಗಳವಾರ ಬೆಳಗಾವಿ ಚಲೋ ನಡೆಸಿದರು. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ನೂರಾರು ವಾಹನಗಳು ಹಾಗೂ ಸಾವಿರಾರು ಕನ್ನಡ ಧ್ವಜಗಳನ್ನು ಹೊತ್ತ ನೂರಾರು ಕಾರ್ಯಕರ್ತರು ಪೊಲೀಸರ ವಿರೋಧದ ನಡುವೆಯೂ ನಗರದತ್ತ ಬರುತ್ತಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ … Continued

ಅಂಕೋಲಾ: ಕುಡಿಯುವ ನೀರಿನ ಬಾವಿಗಳಲ್ಲಿ ಡೀಸೆಲ್ ಯುಕ್ತ ನೀರು…!

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಮಠಾಕೇರಿ ಕ್ರಾಸ್ ಬಳಿ ಕುಡಿಯುವ ನೀರಿನ ಬಾವಿಗಳಲ್ಲಿ ಡಿಸೇಲ್ ಅಂಶ ಕಂಡು ಬಂದಿದ್ದು ಕಂಗಾಲಾದ ಮನೆ ಮಾಲಿಕರು ಪುರಸಭೆಗೆ ದೂರು ನೀಡಿದ್ದಾರೆ. ಕಳೆದ 3 ದಿನಗಳಿಂದ ಮಠಾಕೇರಿ ಕ್ರಾಸ್ ಬಳಿಯ ಗಣಪತಿ ವೆಂಕಟ್ರಮಣ ಕಿಣಿ ಮತ್ತು ಸಂತೋಷ ಗಣೇಶ ನಾಯಕ ಎನ್ನುವವರ ಎರಡು ಬಾವಿಗಳ ನೀರಿನಲ್ಲಿ ಡಿಸೇಲ್ … Continued

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದರ ಬೆಳಗಾವಿ ಗಡಿ ಪ್ರವೇಶಕ್ಕೆ ನಿರ್ಬಂಧ: ಬೆಳಗಾವಿ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಮಂಗಳವಾರ (ಡಿಸೆಂಬರ್‌ 6) ಬೆಳಗಾವಿಗೆ ಆಗಮಿಸುವ ಮಹಾರಾಷ್ಟ್ರದ ಇಬ್ಬರು ಸಚಿವರು ಹಾಗೂ ಓರ್ವ ಸಂಸದರಿಗೆ ರಾಜ್ಯ ಪ್ರವೇಶ ನಿರ್ಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್‌ ಪಾಟೀಲ್‌, ಶಂಭುರಾಜ್‌ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು … Continued

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್‌.ಕೆ. ಭಗವಾನ್ (S.K Bhagavan) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. 89 ವರ್ಷ ವಯಸ್ಸಿನ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅವರು ಕನ್ನಡ ಚಿತ್ರರಂಗದಲ್ಲಿ ಭಗವಾನ್ ಎಂದೇ ಪ್ರಸಿದ್ಧಿಯಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಕನ್ನಡ ಸಿನಿರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಗುರುತಿಸಿಕೊಂಡಿದ್ದಾರೆ. ಭಗವಾನ್‌ … Continued

ರಾಜ್ಯ ಸರ್ಕಾರದಿಂದ 29 ಕ್ರೀಡಾಪಟುಗಳು, 3 ಸಂಸ್ಥೆಗಳಿಗೆ ಕ್ರೀಡಾ ಪ್ರಶಸ್ತಿ ಪ್ರಕಟ: ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ

ಬೆಂಗಳೂರು: 2021ನೇ ಸಾಲಿನ ಏಕಲವ್ಯ , ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ 2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ನಾಳೆ  ಮಂಗಳವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರಾಜ್ಯ ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಏಕಲವ್ಯ ಪ್ರಶಸ್ತಿಗೆ 15, ಕ್ರೀಡಾ ರತ್ನ ಪ್ರಶಸ್ತಿಗೆ … Continued

ಬೆಂಗಳೂರು ನಗರ : ಶಾಲೆಗಳ ಬಳಿ ವಾಹನ ನಿಲುಗಡೆ ನಿಷೇಧ, ಶಾಲಾ ವಾಹನಗಳಿಗೂ ಅನ್ವಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗೆ ಸುಧಾರಣಾ ಕ್ರಮಗಳನ್ನು ಜಾರಿ ಮಾಡುತ್ತಿರುವ ಬೆಂಗಳೂರು ಸಂಚಾರ ಪೊಲೀಸರು ಈಗ ಶಾಲೆಗಳ ಬಳಿ ವಾಹನ ನಿಲುಗಡೆಗೆ ಮಾಡುವುದನ್ನು ನಿಷೇಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವಿಶೇಷ ಪೊಲೀಸ್ ಆಯುಕ್ತ(ಸಂಚಾರ) ಡಾ.ಎಂ.ಎ.ಸಲೀಂ ಅವರು ಬೆಳಿಗ್ಗೆ 8:30 ರ ನಂತರ ಶಾಲಾ ಬಸ್‌ಗಳ ಸಂಚಾರವನ್ನು ನಿಷೇಧಿಸಲು ಮುಂದಾಗಿದ್ದಾರೆ. ಬೆಳಗ್ಗೆ … Continued

ಆಸ್ತಿ ಕಬಳಿಕೆಗೆ ಯತ್ನ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ವಿರುದ್ಧ ಖ್ಯಾತ ಗಾಯಕ ಲಕ್ಕಿ ಅಲಿ ಆರೋಪ

ಬೆಂಗಳೂರು: ತಮ್ಮ ಸ್ವಾಧೀನದಲ್ಲಿರುವ ಫಾರ್ಮ್‌ ಹೌಸ್‍ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಪತಿ ಅತಿಕ್ರಮವಾಗಿ ನುಗ್ಗಿ ಆಸ್ತಿ ಕಬಳಿಸಲು ಯತ್ನಿಸಿದ್ದಾರೆ ಎಂದು ಗಾಯಕ ಲಕ್ಕಿ ಆಲಿ ಆರೋಪಿಸಿದ್ದಾರೆ. ಖ್ಯಾತ ಹಿಂದಿ ನಟ ಮೊಹಮ್ಮದ್ ಆಲಿ ಅವರ ಪುತ್ರ ಲಕ್ಕಿ ಅಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸರಣಿ ಟ್ವೀಟ್‍ಗಳ ಮೂಲಕ ಈ ಬಗ್ಗೆ ದೂರಿದ್ದಾರೆ. ತುರ್ತು … Continued

ವಿದ್ಯಾರ್ಥಿಗಳ ಗಮನಕ್ಕೆ….ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ (SSLC Exam) ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿದೆ. ಈಗಾಗಲೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ … Continued

ಕನ್ನಡದ ಹಿರಿಯ ನಟ ಮನದೀಪ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮನದೀಪ​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಮೂರು ದಿನಗಳ ಹಿಂದೆ ಹೃದಯಾಘಾತ ಸಂಭವಿಸಿದ್ದು, ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳಲ್ಲಿ ನಟಿಸಿರುವ ಮನದೀಪ ರಾಯ್‌ ಅವರ ಆಪ್ತರು ಆಸ್ಪತ್ರೆಗೆ … Continued

ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಇಂದು

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಬೆಟ್ಟದ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಇಂದು(ಡಿಸೆಂಬರ್‌ 5) ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು, ಹೊರರಾಜ್ಯಗಳಿಂದ ಭಕ್ತರು ಭಾನುವಾರವೇ ಬಂದಿದ್ದಾರೆ. ಒಂದೂವರೆಯಿಂದ ಎರಡು ಲಕ್ಷ ಹನುಮ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಗಂಗಾವತಿ ನಗರದಿಂದ ನಡೆಯಲಿರುವ … Continued