ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವೀಡಿಯೊವನ್ನು ‘ತಕ್ಷಣ’ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಗೆ ಸೂಚನೆ ನೀಡಿದೆ. ಈ ಸಂಬಂಧ ‘X’ ನ ನೋಡಲ್ ಅಧಿಕಾರಿಗೆ ಚುನಾವಣಾ ಆಯೋಗವು ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ … Continued

ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna) ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲು ಮಾಡಲಾಗಿದೆ. ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆ ಉರಿ ಹಾಗೂ ಹೆಚ್ಚಾದ ಹಿನ್ನೆಲೆಯಲ್ಲಿ … Continued

ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

ಗೋಕಾಕ: ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವೀಡಿಯೊಗಳೂ ಹೊರಬರಬಹುದು,. ಹೀಗಾಗಿ ಈ ಮಹಾನಾಯಕನನ್ನು ತಡೆಯಿರಿ ಎಂದು ಹೇಳುತ್ತಿದ್ದೇನೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ಮಹಾನಾಯಕನೊಬ್ಬ … Continued

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪೆನ್‍ಡ್ರೈವ್ ಪ್ರಕರಣದ ಹಿಂದೆ ಷಡ್ಯಂತ್ರವಿದ್ದು, ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇದ್ದಾರೆ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆ ಮಾಡುವ ಗೇಮ್ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು, … Continued

ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಬೆಂಗಳೂರು : ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವೀಡಿಯೋ ತಿರುಚಿ ಪ್ರಸಾರ/ ಪ್ರಕಟ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ತಾತ್ಕಾಲಿಕ … Continued

ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ಬೆಂಗಳೂರು: ಅಶ್ಲೀಲ ವೀಡಿಯೊಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳುವುದು ಕೂಡ ಅಪರಾಧ ಎಂದು ಹಾಸನ ಪೆನ್‌ಡ್ರೈವ್‌ ಪ್ರಕರಣದ ಕುರಿತ ವಿಚಾರಣೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ” ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ … Continued

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ … Continued

ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued