ಅಕ್ರಮ ಅದಿರು ರಫ್ತು ಪ್ರಕರಣ; ಕಾರವಾರ ಶಾಸಕ ಸತೀಶ ಸೈಲ್‌ ವಿರುದ್ಧ ಇಡಿ ಚಾರ್ಜ್‌ ಶೀಟ್‌

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೈಲ್‌ ಹಾಗೂ ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಬೆಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಯಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಬೆಂಗಳೂರಿನ  ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ದೂರು ದಾಖಲಾಗಿದೆ ಎಂದು ಫೆಡರಲ್ ತನಿಖಾ ಸಂಸ್ಥೆ ತಿಳಿಸಿದೆ. ಕಬ್ಬಿಣದ … Continued

ಡಿಸೆಂಬರ್‌ 8 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ … Continued

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಏಕಾಏಕಿ ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಮೃತಪಟ್ಟಿದ್ದವು. ಇಂದು ಶನಿವಾರ (ನವೆಂಬರ್‌ 15) ಒಂದೇ ದಿನ 20 ಕೃಷ್ಣ ಮೃಗಗಳು ಮತ್ತೆ … Continued

ವೃಕ್ಷಗಳ ಮಹಾತಾಯಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಬೆಂಗಳೂರು : ಪದ್ಮಶ್ರೀ ಪುರಸ್ಕೃತ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ (Saalumarada Thimmakka) ಇಂದು, ಶುಕ್ರವಾರ ವಿಧಿವಶರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ 12ಗಂಟೆಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 ವರ್ಷ ವಯಸ್ಸಿನ ಸಾಲು ಮರದ ತಿಮ್ಮಕ್ಕ ಕಳೆದ … Continued

ಮುಧೋಳ | ಭುಗಿಲೆದ್ದ ರೈತರ ಆಕ್ರೋಶ ; ಕಬ್ಬು ತುಂಬಿದ್ದ ಹಲವಾರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ; ಲೋಡ್‌ ಗಟ್ಟಲೆ ಕಬ್ಬು ಸುಟ್ಟು ಕರಕಲು

ಬಾಗಲಕೋಟೆ: ಪ್ರತಿ ಟನ್​​ ಕಬ್ಬಿಗೆ 3,500 ರೂ.ಗಳನ್ನು ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಹಲವಾರು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ … Continued

ಮೇಕೆದಾಟು ಯೋಜನೆಗೆ ವಿರೋಧ : ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಕರ್ನಾಟಕದ ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 13) ವಜಾಗೊಳಿಸಿದೆ. ತಮಿಳುನಾಡು ಸಲ್ಲಿಸಿದ್ದ ಮೊದಲ ಅರ್ಜಿಯಲ್ಲಿ, ಮೇಕೆದಾಟು ಯೋಜನೆಗೆ ವಿವರವಾದ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಜಲ ಆಯೋಗವು ದಿನಾಂಕ 22.11.2018 ರ ಪತ್ರದ ಮೂಲಕ ನೀಡಿದ … Continued

ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ ಪಾಟೀಲ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ … Continued

ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವು

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣದ (Dharmasthala case) ಬಗ್ಗೆ ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದ ಹಲವಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ … Continued

ಮಹಿಳಾ ನೌಕರರಿಗೆ ಮುಟ್ಟಿನ ರಜೆ ; ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಮಹಿಳಾ ನೌಕರರಿಗೆ ಮುಟ್ಟಿನ ರಜೆ (ಋತುಚಕ್ರ) ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನಮುಟ್ಟಿನ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು … Continued