ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆಗೆಯಲು ಹೋಗಿ ಮೂವರು ಮುಳುಗಿ ಸಾವು

ಆನೇಕಲ್: ಕ್ರಿಕೆಟ್ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದ ಬಾಲನ್ನು ತೆಗೆಯಲು ಹೋಗಿ ಇಬ್ಬರು ಬಾಲಕರು ಸೇರಿದಂತೆ ಮೂವರು ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯಆನೇಕಲ್​ ತಾಲೂಕಿನ ಇಗ್ಗಲೂರು ಬಳಿ ನಡೆದ ಬಗ್ಗೆ ವರದಿಯಾಗಿದೆ. ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆತೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದವನನ್ನು ರಕ್ಷಿಸಲು ಹೋಗಿ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಧೀಮಂತ … Continued

ನಾನು ಕೇದಾರನಾಥದ​ ಆದಿ ಶಂಕರಾಚಾರ್ಯರ ಮೂರ್ತಿ ನೋಡಬೇಕು, ನಾನು ಶೃಂಗೇರಿ ಮಠದ ಭಕ್ತ ; ಪ್ರಶಂಸಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ನನಗೆ ನೀವು (ಪ್ರಧಾನ ಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನೋಡಬೇಕು ಅನಿಸಿದೆ. ಈ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ಪ್ರಶಂಸಿಸಿ ಪ್ರಧಾನಿ ಮೋದಿಗೆ … Continued

ತಮ್ಮ ನೆಚ್ಚಿನ ನಟ ಪುನೀತ ರಾಜಕುಮಾರ ಸಮಾಧಿ ಬಳಿ ಮದುವೆಯಾಗಲು ಆಗಮಿಸಿದ ಪ್ರೇಮಿಗಳು..!

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಪ್ರತಿ ದಿನ ಸಾವಿರಾರು ಅಭಿಮಾನಿಗಳು ಬಂದು ತಮ್ಮ ನಮನ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರ ಅಭಿಮಾನ ಕೂಡ ಭಿನ್ನ ಹಾಗೂ ವಿಭಿನ್ನ. ಈಗ ಪ್ರೇಮಿಗಳು ಬಂದು ಅಪ್ಪು ಸಮಾಧಿಯ ಎದುರು ಮದುವೆ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ತಮ್ಮ ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿ ಬಳಿಯೇ ಮದುವೆಯಾಗಲು ಪ್ರೇಮಿಗಳ ಜೋಡಿಯೊಂದು … Continued

ಗ್ಯಾಸ್ ಸಿಲಿಂಡರ್ ಸ್ಫೋಟ: 7 ಜನರಿಗೆ ಗಂಭೀರ ಗಾಯ

ಬೆಂಗಳೂರು: ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಾಯಗೊಂಡ ಘಟನೆ ಬೆಂಗಳೂರು ಸಮೀಪದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಜಿಗಣಿ ಪೊಲೀಸ್ ಠಾಣೆ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಮಂಜುನಾಥ್ ರೆಡ್ಡಿ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಇದ್ದ ಉತ್ತರ ಭಾರತ ಮೂಲದ ಏಳು ಕಾರ್ಮಿಕರು ಗಾಯಗೊಂಡಿದ್ದಾರೆ. ಬೆಳಿಗ್ಗೆ 8 … Continued

ಹಳೆ ವೈಷಮ್ಯ: ಗ್ರಾ.ಪಂ ಉಪಾಧ್ಯಕ್ಷ ಸೇರಿ ಇಬ್ಬರ ಕೊಲೆ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆಯಲ್ಲಿ ತಡರಾತ್ರಿ ಜೋಡಿ ಕೊಲೆಯಾದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ (46) ಹಾಗೂ ಸೋಮೇಶ್ವರ್   (35) ಕೊಲೆಯಾದವರು. ಎಂದು ಗುರುತಿಸಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ನಿವಾಸಿಯಾದ ಅಶೋಕ್ ಮತ್ತು ಸೋಮಶೇಖರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಟಾಟಾ ಏಸ್ ವಾಹನವನ್ನು ಅವರ … Continued

ಕಾರವಾರ ಸಮೀಪ ಸಮುದ್ರದಲ್ಲಿ ಹೊತ್ತಿ ಉರಿದ ಬೋಟ್‌

ಕುಮಟಾ: ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಒಂದು ಬೆಂಕಿ ಹೊತ್ತಿಕೊಂಡ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಅರಬ್ಬೀ ಸಮುದ್ರದಲ್ಲಿ ಶುಕ್ರವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಬೋಟಿನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ಧಾವಿಸಿದ ಸ್ಥಳೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ … Continued

ಕುಮಟಾ: ಹೊಸ ಹೆರವಟ್ಟಾ ಬಳಿ ಗಟಾರಕ್ಕೆ ಬಿದ್ದ ಬೈಕ್‌, ಇಬ್ಬರ ಸಾವು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸ ಹೆರವಟ್ಟಾ ಬಳಿ ಬೈಕ್‌ ಸ್ಕಿಡ್‌ ಆಗಿ ಗಟಾರಕ್ಕೆ ಬಿದ್ದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ನಡೆದ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಹೊಸಹೆರವಟ್ಟಾ ಬಳಿ ಬೈಕ್ ಸವಾರನೋರ್ವ ಬೈಕನ್ನು ಅತಿ ವೇಗವಾಗಿ ಚಲಾವಣೆ ಮಾಡುತ್ತಿದ್ದಾಗ ನಿಯಂತ್ರಣಕ್ಕೆ ಬಾರದೆ ಬೈಕ್‌ ಸ್ಕಿಡ್‌ ಆಗಿ … Continued

ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಗೋಶಾಲೆ ಸ್ಥಾಪನೆಗೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ :ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿದ ಹಸು ಹಾಗೂ ಕರುವಿಗೆ ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ದೀಪಾವಳಿಯ ಬಲಿ ಪಾಡ್ಯಮಿ ದಿನವಾದ ಶುಕ್ರವಾರ ಗೋಧೂಳಿ ಮುಹೂರ್ತದಲ್ಲಿ ಪೂಜೆಯನ್ನು ನೆರವೇರಿಸುವ ಮೂಲಕ ರಾಜ್ಯಾದ್ಯಂತ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಅಧಿಸೂಚಿತ ದೇವಸ್ಥಾನಗಳಲ್ಲಿ “ಗೋ ಪೂಜಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಜರಾಯಿ ಇಲಾಖೆಯ ವತಿಯಿಂದ ನಗರದ ಶ್ರೀ ಕಪಿಲೇಶ್ವರ … Continued

ರೈತರ ಮಕ್ಕಳ ಶಿಕ್ಷಣಕ್ಕೆ ಹೊಸ ಶಿಷ್ಯವೇತನ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 10 ನೇ ತರಗತಿ ಪೂರ್ಣಗೊಳಿಸಿದ ನಂತರ ರಾಜ್ಯದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು, ಸ್ವಾಯತ್ತ ಕಾಲೇಜುಗಳು, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳವರೆಗೆ … Continued

ಕೊರೊನಾ ಪ್ರಕರಣಗಳ ಇಳಿಮುಖ: ರಾಜ್ಯದಲ್ಲಿ ನೈಟ್‌ ಕರ್ಫ್ಯೂʼ ಹಿಂಪಡೆದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಹಿಂಪಡೆದಿದೆ. ಕೊರೊನಾ ಎರಡನೇ ಅಲೆಯ ವೇಳೆ ಜನರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಲು ಹಾಗೂ ಕೋವಿಡ್‌ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೊಳಿಸಿತ್ತು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೂ ರಾಜ್ಯದಲ್ಲಿ ನೈರ್ಟ್ ಕರ್ಫ್ಯೂವನ್ನು ವಿಧಿಸಿತ್ತು. … Continued